ಗ್ರಾಮ ಪಂಚಾಯತ ಅಧ್ಯಕ್ಷರ, ಸದಸ್ಯರ, ಬೀಳ್ಕೊಡುಗೆ ಸಮಾರಂಭ
ನೇಸರಗಿ. ಇಲ್ಲಿನ ಗ್ರಾಮ ಪಂಚಾಯತ ನೇಸರಗಿ ಇದರ 2020 - 2025 ನೇ ಸಾಲಿನ ಗ್ರಾಮ ಪಂಚಾಯತ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರನ್ನು ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಹಾಗೂ ಗ್ರಾಮ ಪಂಚಾಯತ ಸರ್ವ ಸಿಬ್ಬಂದಿ ವರ್ಗದವರು ಅಧ್ಯಕ್ಷ, ಉಪಾಧ್ಯಕ್ಷರು, ಹಾಗೂ ಗ್ರಾಮ ಪಂಚಾಯತ ಸರ್ವ ಸದಸ್ಯರನ್ನು ಸನ್ಮಾನಿಸಿ ಸೇವಾ ಅವಧಿ ಮುಗಿದ ಪ್ರಯುಕ್ತ ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ಗ್ರಾ ಪಂ ಅಧ್ಯಕ್ಷ ವೀರಭದ್ರ ಚೋಭಾರಿ ಮಾತನಾಡಿ ನಾನು ಅಧ್ಯಕ್ಷನಾದ ಅವಧಿಯಲ್ಲಿ ಅನೇಕ ಕೆಲಸ ಕಾರ್ಯಗಳನ್ನು ಸರ್ವ ಸದಸ್ಯರ, ಗ್ರಾಮದ ಹಿರಿಯರ ಮಾರ್ಗದರ್ಶನದಲ್ಲಿ ಮಾಡಿದ್ದು, ಈ ಕಾರ್ಯಕ್ಕೆ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿ ವರ್ಗದ ಸಹಾಯ ಸಹಕಾರದಿಂದ ಎಂದರು.ಈ ಸಮಾರಂಭದಲ್ಲಿ ಉಪಾಧ್ಯಕ್ಷರು, ಅಭಿವೃದ್ಧಿ ಅಧಿಕಾರಿಗಳು, ಗ್ರಾ ಪಂ ಸರ್ವ ಸದಸ್ಯರು, ಕಾರ್ಯದರ್ಶಿ, ಸಿಬ್ಬಂದಿ ವರ್ಗ, ಗ್ರಾಮದ ಹಿರಿಯರು, ಮುಖಂಡರು, ಗ್ರಾಮಸ್ಥರು ಭಾಗವಹಿಸಿದ್ದರು
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.