LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಸಹಾಯಕ ಕೃಷಿ ನಿರ್ದೇಶಕ ಬಸವರಾಜ ದಳವಾಯಿ ಅವರಿಗೆ ಬೀಳ್ಕೊಡುಗೆ

ಬೈಲಹೊಂಗಲ: ಕಳೆದ 2021ರಿಂದ ಬೈಲಹೊಂಗಲ ತಾಲೂಕಿನಲ್ಲಿ ಸಹಾಯಕ ಕೃಷಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದ ಬಸವರಾಜ ದಳವಾಯಿ ಅವರು ಚಿಕ್ಕೋಡಿ ತಾಲೂಕಿಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಜಿಲ್ಲಾ ಕೃಷಿಕ ಸಮಾಜದ ಉಪಾಧ್ಯಕ್ಷ ಹಾಗೂ ತಾಲೂಕಾಧ್ಯಕ್ಷ ಗುರು ಮೆಟಗುಡ್ಡ ಅವರ ನೇತೃತ್ವದಲ್ಲಿ  ದಳವಾಯಿ ಅವರನ್ನು  ಗೌರವಯುತ ಬೀಳ್ಕೊಡುಗೆ ಸಮಾರಂಭ ಹಮ್ಮಿಕೊಳ್ಳಲಾಯಿತು.
      ಈ ಸಂದರ್ಭದಲ್ಲಿ ಮಾತನಾಡಿದ ಗುರು ಮೆಟಗುಡ್ಡ ಅವರು, ಬಸವರಾಜ ದಳವಾಯಿ ಅವರು ಬೈಲಹೊಂಗಲದಲ್ಲಿ ಸೇವೆ ಸಲ್ಲಿಸಿದ ಅವಧಿಯಲ್ಲಿ ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಕೃಷಿ ಇಲಾಖೆಯ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳು ರೈತರಿಗೆ ತಲುಪುವಂತೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದ್ದಾರೆ. ರೈತ ಸ್ನೇಹಿ ಅಧಿಕಾರಿಯಾಗಿ ಉತ್ತಮ ಸೇವೆ ಸಲ್ಲಿಸಿರುವ ಅವರ ಕಾರ್ಯವನ್ನು ಶ್ಲಾಘಿಸಿ, ಮುಂದಿನ ಸೇವಾವಧಿಗೆ ಶುಭ ಹಾರೈಸಿದರು.
        ಬಸವರಾಜ ದಳವಾಯಿ ಮಾತನಾಡಿ  ಬೈಲಹೊಂಗಲದಲ್ಲಿ ತಮಗೆ ದೊರೆತ ಸಹಕಾರ ಹಾಗೂ ಪ್ರೀತಿಗೆ ಕೃತಜ್ಞತೆ ಸಲ್ಲಿಸಿ, ಚಿಕ್ಕೋಡಿಯಲ್ಲಿ ತಮ್ಮ ಮುಂದಿನ ಸೇವೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸುವುದಾಗಿ ತಿಳಿಸಿದರು.
ಸಮಾರಂಭದಲ್ಲಿ ಜಿಲ್ಲಾಧ್ಯಕ್ಷ ಶಂಕರ ಸುಣಗಾರ, ರಾಜ್ಯ ಸಂಘಟನಾ ಕಾರ್ಯದರ್ಶಿ ಅನ್ನಪ್ಪ ಅರಳಿಕಟ್ಟೈ, ರೈತ ಮುಖಂಡರಾದ ಶಿವಾನಂದ ಇಂಚಲ, ಮಲ್ಲಿಕಾರ್ಜುನ ಹುಂಬಿ, ನಗರ ಘಟಕ ಅಧ್ಯಕ್ಷ ಶಂಕರ ಕಡಕೋಳ, ಗ್ರಾಮೀಣ ಘಟಕ ಅಧ್ಯಕ್ಷ ಶಿವಬಸಪ್ಪ ಮದ್ನಳ್ಳಿ, ತಾಲೂಕು ಪ್ರಧಾನ ಕಾರ್ಯದರ್ಶಿ ಶಂಕರಯ್ಯ ಕುಲಕರ್ಣಿ ಸೇರಿದಂತೆ ಅನೇಕ ರೈತ ಮುಖಂಡರು ಹಾಗೂ ಕೃಷಿಕ ಸಮಾಜದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್