Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಪಂಜಾಬ್​ ಬಂದ್​ಗೆ ಕರೆಕೊಟ್ಟ ರೈತಪಡೆ; ಇತರ ಸೌಕರ್ಯಗಳು ಸ್ಥಗಿತ!

ಚಂಡೀಗಢ ಪಂಜಾಬ್​​: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪಂಜಾಬ್​ ಮತ್ತು ಹರಿಯಾಣ ರೈತರು ಶಂಭು ಮತ್ತು ಕನೌರಿ ಗಡಿ ಬಳಿ ನಿರಂತರ ಪ್ರತಿಭಟನೆ ಮುಂದುವರೆಸಿದ್ದಾರೆ. ಈ ನಡುವೆ ರೈತರು ನಡೆಸಿದ್ದ ದೆಹಲಿ ನಡಿಗೆ ಹಲವು ಬಾರಿ ವಿಫಲವಾಗಿದ್ದು, ಗಡಿಯಲ್ಲಿಯೇ ಅವರನ್ನು ತಡೆಯಲಾಗುತ್ತಿದೆ. ಮತ್ತೊಂದೆಡೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ ನಾಯಕ ಜಗ್ಜೀತ್​​ ಸಿಂಗ್​ ಕಳೆದ 34 ದಿನಗಳಿಂದ ಅಮರಣಾಂತ ಉಪವಾಸ ನಡೆಸುತ್ತಿದ್ದಾರೆ. ಅವರ ಆರೋಗ್ಯ ದಿನದಿಂದ ದಿನಕ್ಕೆ ಕ್ಷೀಣಿಸುತ್ತಿರುವ ಹಿನ್ನೆಲೆ ಮಧ್ಯ ಪ್ರವೇಶಿಸಿರುವ ಸುಪ್ರೀಂ ಕೋರ್ಟ್​​ ಪಂಜಾಬ್​ ಮತ್ತು ಕೇಂದ್ರ ಸರ್ಕಾರಗಳು, ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತೆ ಸೂಚಿಸಿದೆ.


ಈ ನಡುವೆ ರೈತರು ಇಂದು ಪಂಜಾಬ್​ ಬಂದ್​ಗೆ ಕರೆ ನೀಡಿದ್ದಾರೆ. ತುರ್ತು ಸೇವೆ ಹೊರತುಪಡಿಸಿ ಸಂಪೂರ್ಣ ಬಂದ್​ ನಡೆಸುವುದಾಗಿ ಅವರು ಘೋಷಿಸಿದ್ದಾರೆ. ಇದಾದ ಬಳಿಕ ಹರಿಯಾಣದಲ್ಲಿ ಜನವರಿ 4 ರಂದು ಮತ್ತು ಜನವರಿ 9 ರಂದು ಮೊಗಾದಲ್ಲಿ ಮಹಾಪಂಚಾಯತ್​ ಸಂಘಟಿಸಲಾಗುವುದು ಎಂದು ರೈತರು ಘೋಷಿಸಿದ್ದಾರೆ.


ಡಿಸೆಂಬರ್​ 30ರಂದು ಕರೆ ನೀಡಿರುವ ಪಂಜಾಬ್​ ಬಂದ್​ ರಸ್ತೆ ಟ್ರಾಫಿಕ್​ ಜೊತೆಗೆ ಉದ್ಯಮದ ಮೇಲೂ ಪರಿಣಾಮ ಬೀರಲಿದೆ. ಇದೇ ವೇಳೆ ಪಂಜಾಬ್​​ ಉದ್ಯಮಿಗಳು ಮಾರುಕಟ್ಟೆ ತೆರೆಯುವುದಾಗಿ ಘೋಷಿಸಿದ್ದಾರೆ. ಈ ಕುರಿತು ಮಾತನಾಡಿರುವ ಪಂಜಾಬ್​ ಉದ್ಯಮ ಮಂಡಳಿಯ ರಾಜ್ಯ ನಾಯಕ ಅನಿಲ್​ ಬನ್ಸಾಲ್​ ನಾನಾ, ರೈತ ಸಂಘಟನೆ ಬಂದ್​ ಕುರಿತಾಗಿ ನಮ್ಮ ಜೊತೆ ಯಾವುದೇ ಸಂಪರ್ಕ ನಡೆಸಿಲ್ಲ. ಜೊತೆಗೆ ಬಂದ್​ನಿಂದ ಉದ್ಯಮಿ - ವ್ಯಾಪಾರಿಗಳಿಗೆ ತೊಂದರೆಯಾಗಲಿದೆ. ಈಗಾಗಲೇ ಉದ್ಯಮವೂ ಕೆಟ್ಟ ಸ್ಥಿತಿಯಲ್ಲಿದೆ. ಈ ಹಿನ್ನೆಲೆಯಲ್ಲಿ ನಾವು ಪಂಜಾಬ್​ ಬಂದ್​​ಗೆ ಬೆಂಬಲ ನೀಡುವುದಿಲ್ಲ ಎಂದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ