LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಕಾಗವಾಡ ತಾಲೂಕನ್ನು 'ಬರಪೀಡಿತ' ಎಂದು ಘೋಷಿಸಲು ರೈತರ ಆಗ್ರಹ: ಮುಖ್ಯಮಂತ್ರಿಗಳಿಗೆ ಮನವಿ

ಕಾಗವಾಡ: ಮಳೆಯ ಕೊರತೆಯಿಂದ ಕೃಷಿ ಚಟುವಟಿಕೆಗಳಿಗೆ ತೀವ್ರ ಹಿನ್ನಡೆಯಾಗಿರುವ ಹಿನ್ನೆಲೆಯಲ್ಲಿ ಕಾಗವಾಡ ತಾಲೂಕನ್ನು ಕೂಡಲೇ ಬರಪೀಡಿತ ತಾಲೂಕು ಎಂದು ಘೋಷಿಸಿ, ರೈತರಿಗೆ ಅಗತ್ಯ ಪರಿಹಾರ ಹಾಗೂ ಸರ್ಕಾರದ ನೆರವು ಒದಗಿಸಬೇಕು ಎಂದು ಆಗ್ರಹಿಸಿ ರೈತರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಕಾಗವಾಡ ಗ್ರೇಡ್‌-2 ತಹಶೀಲ್ದಾರ್ ರಶ್ಮಿ ಜಕಾತೆ ಅವರ ಮೂಲಕ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಮ್ ಬಿ ಉದಗಾವಿ , ಕಾಗವಾಡ ತಾಲೂಕು ಕೃಷಿ ಪ್ರಧಾನ ಪ್ರದೇಶವಾಗಿದ್ದು, ಬಹುತೇಕ ಜನರು ಕೃಷಿ ಹಾಗೂ ಕೃಷಿ ಆಧಾರಿತ ಚಟುವಟಿಕೆಗಳನ್ನೇ ಅವಲಂಬಿಸಿದ್ದಾರೆ. ಪ್ರಸಕ್ತ ವರ್ಷ ಸಮರ್ಪಕ ಮಳೆಯಾಗದ ಕಾರಣ ಬಿತ್ತನೆ ಮಾಡಿದ ಬೆಳೆಗಳಿಗೆ ಅಗತ್ಯ ತೇವಾಂಶ ದೊರೆಯದೆ ಬೆಳೆಗಳು ಒಣಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದರು.
ಮಳೆಯ ಕೊರತೆಯಿಂದ ಬೆಳೆಗಳ ಇಳುವರಿ ಕುಂಠಿತವಾಗುವ ಆತಂಕ ಎದುರಾಗಿದ್ದು, ಮುಂದಿನ ದಿನಗಳಲ್ಲಿ ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿನ ಸಮಸ್ಯೆಯೂ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಸರ್ಕಾರ ಕೂಡಲೇ ತಾಲೂಕಿನಲ್ಲಿ ಬರ ಪರಿಸ್ಥಿತಿಯ ಸಮಗ್ರ ಪರಿಶೀಲನೆ ನಡೆಸಿ ಕಾಗವಾಡ ತಾಲೂಕನ್ನು ಬರಪೀಡಿತ ಎಂದು ಘೋಷಿಸಬೇಕು ಎಂದು ಒತ್ತಾಯಿಸಿದರು.
ಸೆ.29ರೊಳಗೆ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡದಿದ್ದರೆ, ಕಾಗವಾಡದ ಚನ್ನಮ್ಮ ವೃತ್ತದಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಜನಾರ್ಧನ್ ಧೋ ಡಾರೆ ಎಚ್ಚರಿಕೆ ನೀಡಿದರು.
ಬಾಳು ಕಲ್ಲೋಳೆ ಮಾತನಾಡಿ, ಬರಪೀಡಿತ ಪ್ರದೇಶಗಳಿಗೆ ಸರ್ಕಾರದಿಂದ ದೊರೆಯಬೇಕಾದ ಬೆಳೆ ನಷ್ಟ ಪರಿಹಾರ, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ತುರ್ತಾಗಿ ಒದಗಿಸಬೇಕು. ಸಂಬಂಧಿಸಿದ ಅಧಿಕಾರಿಗಳು ರೈತರ ಜಮೀನುಗಳಿಗೆ ಭೇಟಿ ನೀಡಿ ವಾಸ್ತವ ಪರಿಸ್ಥಿತಿ ಪರಿಶೀಲಿಸಿ ಸರ್ಕಾರಕ್ಕೆ ಸೂಕ್ತ ವರದಿ ಸಲ್ಲಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕಾಕಾ ಪಾಟೀಲ, ಎಂ.ಬಿ. ಉದಗಾವಿ, ವಿನಾಯಕ ಚೌಗಲೆ, ಆರ್.ಎಸ್. ಪಾಟೀಲ, ಬಸವರಾಜ ಮಗದುಮ, ಜನಾರ್ಧನ ಧೋಡಾರೆ, ಗೌರೇಶ ಪಾಟೀಲ, ರಾಹುಲ್ ಕಾಂಬಳೆ ಸೇರಿದಂತೆ ರೈತರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST