Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸರ್ಕಾರದ ದರ ನಿಗದಿ ಪಡಿಸಿ ಅಧಿಕೃತ ಮುಚ್ಚಳಿಕೆ ಹೊರಡಿಸುವಂತೆ ರೈತರ ಮನವಿ

ಹಸಿರು ಕ್ರಾಂತಿ ವರದಿ, ಜಮಖಂಡಿ; ಕಬ್ಬಿನ ಬೆಳೆಗೆ ಸರ್ಕಾರ ನಿಗದಿ ಪಡಿಸಿರುವ 3300 ರೂಗಳನ್ನು ನೀಡುವದಾಗಿ ಓಪ್ಪಿರುವ ಸಕ್ಕರೆ ಕಾರ್ಖಾನೆಗಳು ಇದಕ್ಕಾಗಿ ಅಧುಕೃತ ಮುಚ್ಚಳಿಕೆ ಪತ್ರ ನೀಡದೇ ಕಾರ್ಖಾನೆಗಳನ್ನು ಪ್ರಾರಂಭಿಸಿದ್ದನ್ನು ಪ್ರಶ್ನಿಸಿ ಸೋಮವಾರ ರೈತರು ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ತಾಲೂಕಿನ ಸಾಯಿಪ್ರಿಯಾ ಸಕ್ಕರೆ ಕಾರ್ಖಾನೆ ಹಾಗೂ ಜಮಖಂಡಿ ಶುಗರ್ಸ ನವರು ಸರ್ಕಾರದ ಅದೇಶಿಸಿರುವ ಬೆಲೆಯನ್ನು ಅಧಿಕೃತ ಮುಚ್ಚಳಿಕೆ ಮೂಲಕ ರೈತರಿಗೆ ತಿಳಿಸದೇ ಕಾರ್ಖಾನೆಗಳನ್ನು ಪ್ರಾರಂಭಿಸಲು ಮುಂದಾಗಿದ್ದಾರೆ, ಬಾಕಿ ಉಳಿಸಿ ಕೊಂಡಿರುವ ಬಿಲ್‌ನ ಬಗ್ಗೆಯೂ ಚಕಾರ ಎತ್ತಿಲ್ಲವಾದ್ದರಿಂದ ಅಧಿಕಾರಿಗಳು ಮಧ್ಯ ಪ್ರವೇಶಿಸಿ, ಕಾರ್ಖಾನೆಯ ಮಾಲಿಕರಿಗೆ ಸೂಕ್ತ ನಿರ್ದೇಶನ ನೀಡಬೇಕು ಮತ್ತು ಸರ್ಕಾರದ ಅದೇಶವನ್ನು ಪಾಲಿಸುವಂತೆ ತಾಕೀತು ಮಾಡಬೇಕೆಂದು ರೈತರು ಮನವಿ ಸಲ್ಲಿಸಿದು.

ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಮನವಿ ಸ್ವೀಕರಿಸಿ ಮಾತನಾಡಿ ಖುದ್ದಾಗಿ ಮುಖ್ಯಮಂತ್ರಿಗಳೇ ತಿಳಿಸಿರುವಂತೆ ಬಾಗಲಕೋಟೆ ಜಿಲ್ಲೆಯ ಎಲ್ಲಾ ಸಕ್ಕರೆ ಕಾರ್ಖಾನೆಗಳು 3300 ರೂ.ಗಳ ಬೆಲೆ ನೀಡಬೇಕು ಎಂಬುದನ್ನು ಎಲ್ಲ ಕಾರ್ಖಾನೆ ಮಾಲಿಕರು ಒಪ್ಪಿ ಕೊಂಡಿದ್ದಾರೆ. ಇನ್ನರೆಡು ದಿನಗಳಲ್ಲಿ ನಿರಾಣಿ ಹಾಗೂ ಜಮಖಂಡಿ ಸಕ್ಕರೆ ಕಾರ್ಖಾನೆಗಳ ಅಧಿಕೃತ ದರ ನಿಗದಿಯ ಕುರಿತು ಘೋಷಣೆ ಮಾಡಲಿದ್ದಾರೆ ರೈತರು ವಿಚಲಿತರಾಗದೇ ತಮ್ಮ ಕಾರ್ಯಗಳಲ್ಲಿ ತೊಡಗಬೇಕು ಎಂದು ತಿಳಿಸಿದರು. ಸರ್ಕಾರ ರೈತರ ಪರ ವಾಗಿ ಕೆಲಸ ಮಾಡುತ್ತಿದೆ. ರೈತರ ಸಮಸ್ಯೆಗೆ ಸ್ಪಂಧಿಸಲಾಗಿದೆ. ಬಾಕಿ ಬಿಲ್‌ಗಳ ಪಾವತಿಗೆ ಎಲ್ಲ ಕಾರ್ಖಾನೆಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು. ತಹಸೀಲ್ದಾರ ಅನೀಲ ಬಡಿಗೇರ, ಸಿಪಿಐ ಮಲ್ಲಪ್ಪ ಮಡ್ಡಿ, ಪಿಎಸ್‌ಐ ಅನೀಲ ಕುಂಬಾರ ಸ್ಥಳದಲ್ಲಿದ್ದರು. ರೈತ ಮುಖಂಡರಾದ ರಾಜು ನದಾಫ, ಶ್ರೀಶೈಲ ಭೂಮಾರ, ಡಾ.ಅಜಯ ಕುಲಕರ್ಣಿ, ಸಿದ್ದುಗೌಡ ಪಾಟಿಲ, ಸದಾಶಿವ ಕಲೂತಿ, ಸುರೇಶ ಹಂಚಿನಾಳ, ಗೂಡುಸಾಬ, ಕಲ್ಲಪ್ಪ ದೇಸಾಯಿ, ದಾನಗೌಡ ಶ್ರೀಶೈಲ ಮೈಗೂರ ಸೇರಿದಂತೆ ಅನೇಕರು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ