LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಬಂಗಲೆಯಲ್ಲಿ ಭ್ರೂಣ ಪತ್ತೆ, ಮಹಿಳೆ ಹತ್ಯೆ ಕೇಸ್‌: ಮೂವರು ವಶಕ್ಕೆ

ಮೈಸೂರು, ಅಕ್ಟೋಬರ್​ 23: ಭ್ರೂಣ ಪತ್ತೆ ಹಾಗೂ ಹತ್ಯೆ ಎರಡು ಕಾನೂನುಬಾಹಿರ‌.‌ ಆದರೂ ಕೆಲವರು ಹಣದ ಆಸೆಗೆ ಇಂತಹ ಹೇಯ ಕೃತ್ಯವೆಸಗುತ್ತಾರೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೆಲಸ ಮಾಡುತ್ತಿದ್ದ ಅಂತಹದೇ ಒಂದು ಗ್ಯಾಂಗ್​ ಅನ್ನು​​​​ ಆರೋಗ್ಯ ಇಲಾಖೆ‌ ಅಧಿಕಾರಿಗಳು ಹಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಓರ್ವ ಮಹಿಳೆ ಸೇರಿ ಮೂವರನ್ನು ವಶಕ್ಕೆ ಪಡೆಯಲಾಗಿದೆ. ಬನ್ನೂರಿನ ಪ್ರತಿಷ್ಠಿತ ನರ್ಸಿಂಗ್ ಹೋಂ ಒಂದರ ಕೈವಾಡ ಶಂಕೆ ಕೂಡ ವ್ಯಕ್ತವಾಗಿದ್ದು, ವರುಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೈಸೂರು ತಾಲ್ಲೂಕು ಮೆಲ್ಲಹಳ್ಳಿ ಗ್ರಾಮದ ಬಳಿಯ ಹುನಗನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಐಶಾರಾಮಿ ಬಂಗಲೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ಮಾಡಲಾಗುತ್ತಿತ್ತು. ಈ ಐಶಾರಾಮಿ ಬಂಗಲೆಗೆ ಗರ್ಭಿಣಿ ಮಹಿಳೆಯರನ್ನು ಕರೆದುಕೊಂಡು ಬಂದು ಅವರ ಒಡಲಿನಲ್ಲಿರುವ ಭ್ರೂಣದ ಲಿಂಗ ಪತ್ತೆ ಕೆಲಸ ಮಾಡಲಾಗುತಿತ್ತು. ಅದು ಹೆಣ್ಣಾ ಅಥವಾ ಗಂಡಾ ಅಂತಾ ಪತ್ತೆ ಮಾಡಲಾಗುತ್ತಿತ್ತು. ಇದಕ್ಕಾಗಿ ಅವರ ಬಳಿ ಸಾವಿರಾರು ರೂ. ಹಣ ಪೀಕಲಾಗುತಿತ್ತು. ಆ ಮನೆಯಲ್ಲಿ ಹಣಕಾಸಿನ ಡೈರಿ ಪತ್ತೆಯಾಗಿದ್ದು ಅದರಲ್ಲಿದ್ದ ಮಾಹಿತಿ ಎಂತವರನ್ನು ಬೆಚ್ಚಿ ಬೀಳಿಸುತ್ತದೆ.

ಲಕ್ಷಾಂತರ ರೂ. ವಹಿವಾಟನ್ನು ಡೈರಿಯಲ್ಲಿ ಬರೆದಿಡಲಾಗಿತ್ತು. ಮಾಹಿತಿಗಳ ಪ್ರಕಾರ ಭ್ರೂಣದ ಲಿಂಗ ಪತ್ತೆಗಾಗಿ 25 ಸಾವಿರ ರೂ. ಭ್ರೂಣ ಪತ್ತೆ ಹಚ್ಚಿ ಒಂದು ವೇಳೆ ಅದು ಹೆಣ್ಣು ಭ್ರೂಣವಾದರೆ ಅದರ ಹತ್ಯೆಗೆ 30 ಸಾವಿರ ರೂ ಹಣ ನಿಗದಿ ಮಾಡಲಾಗಿತ್ತು. ಅಷ್ಟೇ ಅಲ್ಲದೆ ಕೊಠಡಿಯಲ್ಲಿ ಇದ್ದ ಕಬ್ಬಿಣದ ಲಾಕರ್​ನಲ್ಲಿ ಮೂರು ಲಕ್ಷಕ್ಕೂ ಹೆಚ್ಚು ನಗದು ಪತ್ತೆ ಆಗಿದೆ. ಸ್ಥಳದಲ್ಲಿ ಭ್ರೂಣ ಹತ್ಯೆಗೆ ಬೇಕಾದ ಕಿಟ್‌ಗಳು, ಔಷಧಿಗಳು ಪತ್ತೆಯಾಗಿದ್ದು, ಎಲ್ಲವನ್ನೂ ವಶಕ್ಕೆ ಪಡೆಯಲಾಗಿದೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡವಂದೇ ಮಾತರಂ ಮೊಟಕು ಖಂಡಿಸಿ ಬೀಳಗಿಯಲ್ಲಿ ಬಿಜೆಪಿ ಪ್ರತಿಭಟನೆ: ರಾಜ್ಯಪಾಲರಿಗೆ ಮನವಿಹೊಸಪೇಟೆ ಸಕ್ಕರೆ ಕಾರ್ಖಾನೆ ಆರಂಭಿಸಿ, ಇಲ್ಲದಿದ್ದರೆ ರಾಜೀನಾಮೆ ನೀಡಿ: ರೈತ ಸಂಘ ಎಚ್ಚರಿಕೆಇಂದು ಯರಗಟ್ಟಿಯಲ್ಲಿ ಜಿಲ್ಲಾ ಮಟ್ಟದ ಪ್ರಜಾಸೇವೆ ಅಂದೋಲನ ಸಭೆ