LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

ಪಹಲ್ಗಾಮ್‌ನಲ್ಲಿ ಉಗ್ರ ದಾಳಿ; ಸಿಂಧು ಜಲ ಒಪ್ಪಂದ ಸ್ಥಗತ; ಇಂದು ಸರ್ವಪಕ್ಷ ಸಭೆ; ಉಗ್ರರಿಗೆ ಶಾಕ್‌

ನವದೆಹಲಿ, ಏಪ್ರಿಲ್ 24: ಜಮ್ಮು ಕಾಶ್ಮೀರದ ಅನಂತ್​ನಾಗ್​ ಜಿಲ್ಲೆಯಲ್ಲಿರುವ ಪಹಲ್ಗಾಮ್​ನಲ್ಲಿ ನಡೆದ ಉಗ್ರ ದಾಳಿ(Terror Attack)ಗೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು  ಇಂದು ಸರ್ವಪಕ್ಷ ಸಭೆ ಕರೆದಿದೆ. ಸಂಜೆ ವೇಳೆಗೆ ಸಭೆ ನಡೆಯುವ ಸಾಧ್ಯತೆ ಇದ್ದು, ಈ ಮಹತ್ವದ ಸಭೆಯ ಅಧ್ಯಕ್ಷತೆಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಹಿಸುವ ಸಾಧ್ಯತೆ ಇದೆ. ಪಹಲ್ಗಾಮ್ ದಾಳಿಗೆ ಸಂಬಂಧಿಸಿದ ಪ್ರಮುಖ ವಿಷಯಗಳು, ಪ್ರಸ್ತುತ ಭದ್ರತಾ ಪರಿಸ್ಥಿತಿಯನ್ನು ಈ ಸಭೆಯಲ್ಲಿ ಚರ್ಚಿಸಬಹುದು ಎಂದು ಹೇಳಲಾಗುತ್ತಿದೆ.









ಭಯೋತ್ಪಾದಕ ದಾಳಿಯ ವಿರುದ್ಧ ಕ್ರಮ ಕೈಗೊಳ್ಳಲು ಬುಧವಾರ ಪ್ರಧಾನಿಯವರ ನಿವಾಸದಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿ (ಸಿಸಿಎಸ್) ಸಭೆ ಸೇರಿತು. ಈ ಸಭೆಯಲ್ಲಿ ಹಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ದಾಳಿಯಲ್ಲಿ ಭಾರತೀಯರು ಮತ್ತು ಒಬ್ಬ ನೇಪಾಳಿ ಪ್ರಜೆ ಸಾವನ್ನಪ್ಪಿದ್ದಾರೆ. ಇತರ ಹಲವರು ಗಾಯಗೊಂಡರು.

ಗುರುವಾರ ಸಂಜೆ ನಡೆಯಲಿರುವ ಸರ್ವಪಕ್ಷ ಸಭೆಯಲ್ಲಿ ಕೇಂದ್ರವು ವಿವಿಧ ರಾಜಕೀಯ ಪಕ್ಷಗಳ ನಾಯಕರಿಗೆ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಮಾಹಿತಿ ನೀಡಲಿದ್ದು, ಅವರ ಅಭಿಪ್ರಾಯಗಳನ್ನು ಕೇಳಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಗೃಹ ಸಚಿವ ಅಮಿತ್ ಶಾ ಅವರು ನಾಯಕರಿಗೆ ಮಾಹಿತಿ ನೀಡುವ ನಿರೀಕ್ಷೆಯಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ ವ್ಯಾಪಾರಸ್ಥರಿಗೆ ಆಧುನಿಕ ಮಳಿಗೆ, ಗ್ರಾಹಕರಿಗೆ ವಾಹನ ನಿಲುಗಡೆ ವ್ಯವಸ್ಥೆ; ₹15 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣಕ್ಕೆ ಕ್ರಮ: ಶಾಸಕ ನಾಡಗೌಡ