LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಬರಗೂರು ರಾಮಚಂದ್ರಪ್ಪ ನಿರ್ದೇಶನದ ಸ್ವಪ್ನಮಂಟಪ ಚಿತ್ರೀಕರಣ ಮುಕ್ತಾಯ

     ಮೈಸೂರಿನ ಬಾಬುನಾಯ್ಕ್ ಅವರು ತಮ್ಮ ಮಲೈಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ‘ಸ್ವಪ್ನಮಂಟಪ’ ಎಂಬ ಕನ್ನಡ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರವು ಬರಗೂರು ರಾಮಚಂದ್ರಪ್ಪನವರ ಅದೇ ಹೆಸರಿನ ಕಾದಂಬರಿಯನ್ನು ಆಧರಿಸಿದೆ. ಬರಗೂರು ರಾಮಚಂದ್ರಪ್ಪನವರೇ ಚಿತ್ರಕತೆ, ಸಂಭಾಷಣೆ, ಗೀತರಚನೆ ಮಾಡಿ ನಿರ್ದೇಶನ ಮಾಡಿದ್ದಾರೆ.


     'ಸ್ವಪ್ನಮಂಟಪ’ ಚಿತ್ರವು ಈಗಾಗಲೇ ಚಿತ್ರೀಕರಣ ಮತ್ತು ಡಬ್ಬಿಂಗ್ ಕೆಲಸಗಳನ್ನು ಮುಗಿಸಿದೆ. ಕನಕಪುರ ರಸ್ತೆಯ ಒಂದು ಹಳ್ಳಿಯಲ್ಲಿ ಚಿತ್ರೀಕರಣವನ್ನು ಮಾಡಲಾಗಿದೆ. ಹೊಸಮನೆ ಮೂರ್ತಿಯವರು ಈ ಸೆಟ್ ನಿರ್ಮಾಣ ಮಾಡಿದ್ದಾರೆ.


     'ಸ್ವಪ್ನಮಂಟಪ’ ಚಿತ್ರವು ಪಾರಂಪರಿಕ ಸ್ಥಳಗಳ ರಕ್ಷಣೆಯನ್ನು ಪ್ರತಿಪಾದಿಸುವ ಕಥಾವಸ್ತುವನ್ನು ಒಳಗೊಂಡಿದೆ. ಒಂದು ಹಳ್ಳಿಯಲ್ಲಿ ರಾಜನೊಬ್ಬ ನಿರ್ಮಿಸಿದ ಸ್ವಪ್ನಮಂಟಪವನ್ನು ಕೆಡವಿ ಹಾಕುವ ಪ್ರಯತ್ನವನ್ನು ಕೆಲವರು ಮಾಡಿದಾಗ , ಕಥಾನಾಯಕ ಮತ್ತು ನಾಯಕಿ ಜನರನ್ನು ಸಂಘಟಿಸಿ ಸ್ವಪ್ನಮಂಟಪವನ್ನು ಉಳಿಸಿ ಸರ್ಕಾರದ ಅಧಿಕೃತ ಸ್ಮಾರಕದ ಪಟ್ಟಿಗೆ ಸೇರಿಸುವ ಮೂಲಕ ಚಾರಿತ್ರಿಕ ಸ್ಮಾರಕಗಳ ಪರಂಪರೆಯನ್ನು ಎತ್ತಿ ಹಿಡಿಯುತ್ತಾರೆ. ಈ ಸಾಮಾಜಿಕ ಚಿತ್ರದಲ್ಲಿ ಸ್ವಪ್ನಮಂಟಪವನ್ನು ನಿರ್ಮಾಣ ಮಾಡಿದ ರಾಜ-ರಾಣಿಯರ ಕಥನವನ್ನೂ ಹಿನ್ನೋಟ ತಂತ್ರದಲ್ಲಿ ಸೇರಿಸಿರುವುದು ಒಂದು ವಿಶೇಷ.


     ನಾಯಕ ಮತ್ತು ನಾಯಕಿಯ ಪಾತ್ರದಲ್ಲಿ ವಿಜಯ ರಾಘವೇಂದ್ರ ಮತ್ತು ರಂಜಿನಿ ರಾಘವನ್ ಅಭಿನಯಿಸಿದ್ದಾರೆ. ಇವರಿಬ್ಬರೂ ದ್ವಿಪಾತ್ರಗಳಲ್ಲಿ ಅಭಿನಯಿಸಿರುವುದು ಸಿನಿಮಾದ ಒಂದು ವಿಶೇಷ. ಜೊತೆಗೆ ಸುಂದರರಾಜ್, ಶೋಭಾರಾಘವೇಂದ್ರ, ರಜನಿ, ಮಹಾಲಕ್ಷ್ಮೀ, ಸುಂದರರಾಜ ಅರಸು, ರಾಜಪ್ಪದಳವಾಯಿ, ಅಂಬರೀಶ ಸಾರಂಗಿ, ಮೈಸೂರು ಮಂಜುಳ, ಉಮ್ಮತ್ತೂರು ಬಸವರಾಜು, ವೆಂಕಟರಾಜು, ಶಿವಲಿಂಗಪ್ರಸಾದ್, ಭಾರತಿರಮೇಶ್, ಗುಂಡಿ ರಮೇಶ್ ಮುಂತಾದವರು ತಾರಾಗಣದಲ್ಲಿ ಇದ್ದಾರೆ.


     ನಾಗರಾಜ ಆದವಾನಿ ಛಾಯಗ್ರಹಣ, ಸುರೇಶ್ ಅರಸು ಸಂಕಲನ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ ಮತ್ತು ತ್ರಿಭುವನ್ ನೃತ್ಯ ಸಂಯೋಜನೆಯನ್ನು ಒಳಗೊಂಡಿದೆ. ನಟರಾಜ್ ಶಿವು ಮತ್ತು ಪ್ರವೀಣ್ ಸಹನಿರ್ದೇಶಕರಾಗಿದ್ದಾರೆ.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್