LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಅತ್ಯಾಚಾರ ಆರೋಪದಲ್ಲಿ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಎಫ್‌ಐಆರ್

ಬೆಂಗಳೂರು: ತಮ್ಮ ಮೇಲೆ ಅತ್ಯಾಚಾರವೆಸಗಿ, ಕಿರುಕುಳ ನೀಡಿದ್ದಾರೆ ಎಂದು ಮಹಿಳೆಯೊಬ್ಬರು ನೀಡಿರುವ ದೂರಿನ ಅನ್ವಯ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ವಿರುದ್ಧ ಸಂಜಯ​ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ವಿನಯ್ ಕುಲಕರ್ಣಿ ಹಾಗೂ ಅವರ ಆಪ್ತ ಸಹಾಯಕ ಅರ್ಜುನ್ ವಿರುದ್ಧ ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್ ಮತ್ತು ಐಟಿ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ.


ಮಹಿಳೆಯ ದೂರಿನಲ್ಲಿ ಏನಿದೆ?: ''2022ರಲ್ಲಿ ನಾನು ಶಾಸಕ ಕುಲಕರ್ಣಿ ಭೇಟಿ ಮಾಡಿದ್ದು, ಆ ಬಳಿಕ ರೈತರೊಬ್ಬರಿಂದ ಅವರು ನನ್ನ ಫೋನ್ ನಂಬರ್ ಪಡೆದಿದ್ದರು. ನಂತರದಲ್ಲಿ ರಾತ್ರಿ ವೇಳೆಯೂ ನನಗೆ ಕರೆ ಮಾಡಲು ಪ್ರಾರಂಭಿಸಿದ್ದರು. ಆ ಬಳಿಕ, ಬೆತ್ತಲೆಯಾಗಿದ್ದಾಗ ವಿಡಿಯೋ ಕರೆ ಮಾಡುವಂತೆ, ಹೆಬ್ಬಾಳದಲ್ಲಿರುವ ತಮ್ಮ ಮನೆಗೆ ಬರುವಂತೆ ಒತ್ತಾಯಿಸಿದ್ದರು. ಇದಕ್ಕೆ ನಿರಾಕರಿಸಿದಾಗ, ಶಾಸಕರ ಮನೆಗೆ ಬರದಿದ್ದಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ರೌಡಿಗಳು ಬೆದರಿಕೆ ಹಾಕಿದರು. ಏಪ್ರಿಲ್‌ನಲ್ಲಿ ಅವರು ನನ್ನನ್ನು ಬೆಳಗಾವಿಗೆ ಕರೆದಿದ್ದರು. ಅಲ್ಲಿ ತನ್ನ ಮೇಲೆ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ್ದಾರೆ'' ಎಂದು ದೂರಿನಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್