LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬೆಂಗಳೂರು- ಮೈಸೂರು ಹೈವೇಯಲ್ಲಿ ಓವರ್‌ಸ್ಪೀಡ್‌ ಹೋದರೆ ಎಫ್‌ಐಆರ್‌ 

ಬೆಂಗಳೂರು: ಇನ್ನು ಮುಂದೆ ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಓವರ್‌ಸ್ಪೀಡ್‌ನಲ್ಲಿ ಚಲಾಯಿಸುವವರು ಹುಷಾರಾಗಿರಬೇಕು. ರ್ಯಾಶ್‌ ಡ್ರೈವಿಂಗ್‌ ಮಾಡುವವರು ಕಂಬಿ ಎಣಿಸುವ ದಿನಗಳು ಬಂದಿವೆ. ಹೈವೇಯಲ್ಲಿ ಹಿಡಿಯೋರಿಲ್ಲ ಎಂದು ಓವರ್‌ಸ್ಪೀಡ್ ಹೋದರೆ ನಿಮ್ಮ ಮೇಲೆ ಎಫ್‌ಐಆರ್‌  ದಾಖಲಾಗಲಿದೆ.

ನಿನ್ನೆ ಮೈಸೂರು ಬೆಂಗಳೂರು ಹೈವೇ ಸಿಸಿಟಿವಿಗಳನ್ನು ಸಂಚಾರಿ ಮತ್ತು ರಸ್ತೆ ಸುರಕ್ಷತೆ ಎಡಿಜಿಪಿ ಅಲೋಕ್ ಕುಮಾರ್ ಪರಿಶೀಲನೆ ಮಾಡಿದ್ದರು. ಪರಿಶೀಲನೆ ವೇಳೆ ಒಂದೇ ದಿನ‌ 150ಕ್ಕೂ ಹೆಚ್ಚು ಅತಿ ವೇಗದ ಚಾಲನೆ ಕೇಸ್‌ಗಳು ಪತ್ತೆಯಾಗಿವೆ. ಇದರಿಂದ ಓವರ್‌ಸ್ಪೀಡ್‌ಗೆ ಬ್ರೇಕ್ ಹಾಕಲು ಎಡಿಜಿಪಿ ಅಲೋಕ್ ಕುಮಾರ್ ಹೊಸ ಅಸ್ತ್ರ ಕೈಗೆತ್ತಿಕೊಂಡಿದ್ದು, ಆಗಸ್ಟ್‌ 1ರಿಂದ ಅದನ್ನು ಚಲಾಯಿಸಲಿದ್ದಾರೆ.
ಮಿತಿ ಮೀರಿದ ವೇಗದಿಂದ ಚಾಲನೆ ಮಾಡುವವರ ವಿರುದ್ಧ ಎಫ್ಐಆರ್ ದಾಖಲಿಸಲಾಗುತ್ತದೆ. ಸ್ಪೀಡ್‌ನಲ್ಲಿ 130 ಕಿಮೀ ದಾಟಿದರೆ ಎಫ್ಐಆರ್ ದಾಖಲಾಗಲಿದೆ. ನಂತರ ಚಾಲಕರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ವಾಹನ ಚಾಲನೆ ಪರವಾನಗಿಯೂ ರದ್ದಾಗಬಹುದು. ಹೀಗೆಂದು ಎಕ್ಸ್ ಖಾತೆ ಮೂಲಕ ಅಲೋಕ್ ಕುಮಾರ್ ಮಾಹಿತಿ ಹಂಚಿಕೊಂಡಿದ್ದಾರೆ.


ವಾಹನ ಸಂಚಾರ ನಿಯಮ ಉಲ್ಲಂಘನೆ ಹಾಗೂ ರಸ್ತೆ ಅಪಘಾತಗಳ ತಡೆಗಾಗಿ ಸಂಚಾರ ಪೊಲೀಸ್‌ ವಿಭಾಗ, ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಳ್ಳುತ್ತಿದೆ. ಇದರ ಭಾಗವಾಗಿ ಜುಲೈ 1ರಿಂದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ (Bangalore–Mysore Expressway) ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್‌ (ITMS) ಅಳವಡಿಸಲಾಗಿದೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್