LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಕರಾವಳಿ ಜಿಲ್ಲೆಗಳಲ್ಲಿ 61 ದಿನಗಳ ಕಾಲ ಮೀನುಗಾರಿಕೆ ನಿಷೇಧ

ಮಂಗಳೂರು: 

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಬ್ಬರ ಮುಂದುವರಿದಿದೆ. ಭಾರತೀಯ ಹವಾಮಾನ ಇಲಾಖೆ ಚಂಡಮಾರುತ ಹಾಗೂ ಭಾರಿ ಮಳೆ ಉಂಟಾಗುವ ಸಾಧ್ಯತೆ ಕುರಿತು ಮುನ್ಸೂಚನೆ ನೀಡಿರುವುದರಿಂದ ಸುರಕ್ಷತೆ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಟೆರಿಟೋರಿಯಲ್ ವಾಟರ್ಸ್ (12 ನಾಟಿಕಲ್ ಮೈಲ್ ವರೆಗಿನ) ಭಾಗದಲ್ಲಿ ಯಾವುದೇ ಬಲೆಗಳನ್ನು/ಸಾಧನಗಳನ್ನು ಉಪಯೋಗಿಸಿ ಎಲ್ಲ ಯಾಂತ್ರೀಕೃತ ದೋಣಿಗಳ ಮುಖಾಂತರ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರೀಕೃತ ದೋಣಿ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1 ರಿಂದ ಜುಲೈ 31 ರವರೆಗೆ (ಉಭಯ ದಿನಗಳು ಸೇರಿ) ಒಟ್ಟು 61 ದಿನಗಳ ನಿಷೇಧ ವಿಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ನಿಷೇಧದ ಅವಧಿಯಲ್ಲಿ ಏನು ಮಾಡೋದು?

ನಿಷೇಧದ ಅವಧಿಯಲ್ಲಿ ಜಿಲ್ಲೆಯಲ್ಲಿ ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿಯೇ 10 ಅಶ್ವಶಕ್ತಿ ರೆಗಿನ ಸಾಮರ್ಥ್ಯದ ಮೋಟಾರೀಕೃತ ದೋಣಿ ಮತ್ತು ಸಾಂಪ್ರದಾಯಿಕ ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿಸಿದೆ. ಮೀನುಗಾರಿಕೆ ನಿಷೇಧಿಸಿದ ಆದೇಶವನ್ನು ಉಲ್ಲಂಘಿಸುವ ಮೀನುಗಾರಿಕಾ ದೋಣಿಗಳು ಮತ್ತು ಮೀನುಗಾರರು ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೆ, ಒಂದು ವರ್ಷದ ಅವಧಿಗೆ ರಾಜ್ಯ ಮಾರಾಟ ಕರ ರಹಿತ ಡೀಸೆಲ್ ಪಡೆಯಲು ಅನರ್ಹರಾಗುತ್ತಾರೆ. ಈ ಆದೇಶವನ್ನು ಕರಾವಳಿ ಪ್ರದೇಶದ ಎಲ್ಲ ಮೀನುಗಾರರು ಪಾಲಿಸಬೇಕು ಎಂದು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗಾಳಿ ಮಳೆ ಸಾಧ್ಯತೆ, ಜಲಸಾಹಸ ಚಟುವಟಿಕೆ ನಿರ್ಬಂಧ;

ಚಂಡಮಾರುತ, ಭಾರಿ ಮಳೆ ಸಾಧ್ಯತೆ ಹಿನ್ನೆಲೆ ಜಿಲ್ಲೆಯಲ್ಲಿ ಜಲಸಾಹಸ ಕ್ರೀಡೆಗಳನ್ನು ಜಿಲ್ಲಾಡಳಿತ ಸ್ಥಗಿತಗೊಳಿಸಿದೆ. ಭಾರತೀಯ ಹವಾಮಾನ ಇಲಾಖೆ ಚಂಡಮಾರುತ ಹಾಗೂ ಭಾರಿ ಮಳೆ ಉಂಟಾಗುವ ಸಾಧ್ಯತೆ ಕುರಿತು ಮುನ್ಸೂಚನೆ ನೀಡಿರುವುದರಿಂದ ಸುರಕ್ಷತೆ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ಗೋಕರ್ಣ, ಮುರ್ಡೇಶ್ವರ, ಕಾರವಾರ ಬೀಚ್‌ಗಳಲ್ಲಿ ಬೋಟಿಂಗ್ ಸ್ಥಗಿತಗೊಳಿಸಲಾಗಿದೆ. ಗೋಕರ್ಣದ ಓಂ ಬೀಚ್, ಕುಡ್ಲೆ ಬೀಚ್, ಹಾಫ್‌ಮೂನ್ ಬೀಚ್, ಪ್ಯಾರಡೈಸ್ ಬೀಚ್ ಜಲಸಾಹಸ ಚಟುವಟಿಕೆ ಬಂದ್ ಮಾಡಲು ಆದೇಶಿಸಲಾಗಿದೆ. ನೇತ್ರಾಣಿ ದ್ವೀಪದಲ್ಲಿ ಸ್ಕೂಬಾ ಡೈವಿಂಗ್‌ಗೆ ತಾತ್ಕಾಲಿಕ ನಿಷೇಧ ಹೇರಲಾಗಿದೆ. ಶರಾವತಿ ಹಿನ್ನೀರು, ಅಘನಾಶಿನಿ ನದಿಯಲ್ಲಿ ಪ್ರವಾಸಿಗರ ಬೋಟಿಂಗ್ ಕೂಡ ಸ್ಥಗಿತಗೊಳಿಸಲಾಗಿದೆ. ಅಪ್ಸರಕೊಂಡ ಬೀಚ್‌ನಲ್ಲಿ ಪ್ರೀವೆಡ್ಡಿಂಗ್ ಸೆಟ್ ಅಳವಡಿಕೆಗೂ ನಿರ್ಬಂಧ ಹೇರಲಾಗಿದೆ. ಪ್ರವಾಸಿಗರು ಹಾಗೂ ಮೀನುಗಾರರು ಕಡಲತೀರ ಹಾಗೂ ನದಿತೀರ ಪ್ರದೇಶಗಳಿಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್