Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಶು ಪೋಷಣೆಗೆ ಇಚ್ಛಿಸುವ ಶಿಕ್ಷಕಿಯರ ಸ್ಥಳ ನಿಯುಕ್ತಿಗೆ ಐದು ವರ್ಷಗಳ ಅವಕಾಶ



ಬಳ್ಳಾರಿ, ಮಾ. 17.: ಮಾತೃತ್ವ ರಜೆಯ ನಂತರ ಮಹಿಳಾ ಶಿಕ್ಷಕರು ಕರ್ತವ್ಯಕ್ಕೆ ಮರಳಿ ಹಾಜರಾಗಲು ಮಗುವಿನ ಐದು ವರ್ಷ (05) ಪೂರ್ಣಗೊಳ್ಳುವವರೆಗೂ ಮಗುವಿನ ಆರೈಕೆಗೆ ಅನುಕೂಲ ಆಗುವ ರೀತಿಯಲ್ಲಿ ಶಿಕ್ಷಕಿಯರು ಕೇಳುವ ಸ್ಥಳಕ್ಕೆ ಕೌನ್ಸಿಲಿಂಗ್ ಮೂಲಕ ನಿಯುಕ್ತಿಗೊಳಿ ಆದೇಶ ನೀಡಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.

ಬಳ್ಳಾರಿ - ವಿಜಯನಗರ ಜಿಲ್ಲಾ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ, ಶಾಸಕ ವೈ.ಎಂ. ಸತೀಶ್ ಅವರು, ಮಹಿಳಾ ಶಿಕ್ಷಕರಿಗೆ ಶಿಶುಪಾಲನಾ ರಜೆಯನ್ನು ಮಂಜೂರು ಮಾಡುವ ಕುರಿತು ಪ್ರಶ್ನೆ ಕೇಳಿ, ಅವಧಿ ಪೂರ್ವದಲ್ಲೇ (ಆರು ತಿಂಗಳ ಗರ್ಭದ ಶಿಶು) ಜನಿಸಿದ ಮಗುವಿನ ತಾಯಿಗೆ ಮಗುವನ್ನು ಆರೈಕೆ ಮಾಡುವ ಜವಾಬ್ದಾರಿ ಇದೆ. ಈ ಶಿಕ್ಷಕಿಗೆ ಮಾನವೀಯತೆಯ ಆಧಾರದ ಮೇಲೆ ಅವರು ಕೇಳುವ ಸ್ಥಳಕ್ಕೆ ನಿಯುಕ್ತಿಗೊಳಿಸಿ ಆದೇಶ ನೀಡಲು ಕೋರಿದರು.

ಆಗ, ಸಚಿವ ಎಸ್. ಮಧು ಬಂಗಾರಪ್ಪ ಅವರು, ಶಿಶುಪಾಲನಾ ರಜೆಯನ್ನು ಮಂಜೂರು ಮಾಡಲು ಸರ್ಕಾರದ ಆದೇಶ ಸಂಖ್ಯೆ ಆಇ 4(ಇ) ಶೇನಿಸೇ 2021, ದಿನಾಂಕ 21.06.2021ರಲ್ಲಿ ಸ್ಪಷ್ಟವಾದ ನಿರ್ದೇಶನಗಳನ್ನು ಇಲಾಖೆಯ ಅಧಿಕಾರಿಗಳಿಗೆ ನೀಡಲಾಗಿದೆ. ಶಿಶುಪಾಲನಾ ರಜಾ ಮನವಿ ಸ್ವೀಕೃತಗೊಂಡ 15 ದಿನಗಳೊಳಗಾಗಿ ರಜೆಯನ್ನು ಮಂಜೂರು ಮಾಡಲಾಗುತ್ತದೆ. ಈ ಹುದ್ದೆಗೆ ಅತಿಥಿ ಶಿಕ್ಷಕರನ್ನ ನೇಮಕ ಮಾಡಿಕೊಳ್ಳಲು ಅವಕಾಶವಿದೆ ಎಂದರು.

ಶಾಸಕ ವೈ.ಎಂ. ಸತೀಶ್ ಅವರು ಪ್ರಸ್ತಾಪಿಸಿರುವ ಶಿಕ್ಷಕಿಗೆ ಮಾನವೀಯತೆಯ ಆಧಾರದ ಮೇಲೆ ಐದು ವರ್ಷಗಳ ಅವಧಿಗೆ ಅವರು ಕೇಳಿದ ಸ್ಥಳದಲ್ಲಿಯೇ ಕೌನ್ಸಿಲಿಂಗ್ ಮೂಲಕ ನಿಯುಕ್ತಿಗೊಳಿಸಿ, ಈ ಹುದ್ದೆಗೆ ಮುಂದಿನ ಶೈಕ್ಷಣಿಕ ಅವಧಿಯಲ್ಲಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*