Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಸತಿ ನಿಲಯಗಳಲ್ಲಿನ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಕಡೆ ಗಮನ ಹರಿಸಿ: ಡಾ. ಲಿಂಗರಾಜು ಟಿ.

‎ 

‎ಕೊಪ್ಪಳ ಮೇ 14 : ಮಾನಸಿಕ ಆರೋಗ್ಯ ಮತ್ತು ದೈಹಿಕ ಆರೋಗ್ಯ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು, ವಸತಿ ನಿಲಯಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಕಡೆ ಗಮನ ಹರಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ. ಲಿಂಗರಾಜು ಟಿ. ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೋಲಿಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ಜಿಲ್ಲಾ ಪಂಚಾಯತ ಜಿ.ಹೆಚ್ ಪಟೇಲ್ ಸಭಾಂಗಣದಲ್ಲಿ ವಸತಿನಿಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ವಸತಿನಿಲಯ ಪಾಲಕರಿಗೆ ಹಮ್ಮಿಕೊಂಡಿದ್ದ ಮಾನಸಿಕ ಆರೋಗ್ಯ ಹಾಗೂ ಮಾದಕ ವಸ್ತುಗಳ ವ್ಯಸನ ಕುರಿತಾದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
‎ ವಸತಿ ನಿಲಯಗಳಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಮಾನಸಿಕ ಆರೋಗ್ಯದ ಕಡೆ ಗಮನ ಹರಿಸಬೇಕು. ಹದಿ-ಹರೆಯದ ಮಕ್ಕಳಲ್ಲಿ ಏನಾದರೂ ಮಾನಸಿಕ ಸಮಸ್ಯೆಗಳು ಇದ್ದರೆ ತಮ್ಮ ಸಮಿಪದ ತಾಲೂಕಾ ಅಥವಾ ಜಿಲ್ಲಾ ಆಸ್ಪತ್ರೆಗಳಲ್ಲಿ ಇರುವ ಇತರ ಎಲ್ಲಾ ಖಾಯಿಲೆಗಳಂತೆ, ಮಾನಸಿಕ ಖಾಯಿಲೆಯನ್ನು ಗುಣಪಡಿಸಬಹುದು. ಸೂಕ್ತ ಸಮಯದಲ್ಲಿ ರೋಗಲಕ್ಷಣಗಳನ್ನು ಗುರುತಿಸಿ, ಆಪ್ತ ಸಮಾಲೋಚನೆ ಹಾಗೂ ಚಿಕಿತ್ಸೆಯನ್ನು ಪಡೆದರೆ, ಆ ವ್ಯಕ್ತಿಯು ಇತರರಂತೆ ಜೀವನ ನಡೆಸಬಹುದು. ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಸಾರ್ವಜನಿಕ ಆಸ್ಪತ್ರೆಗಳಲ್ಲಿಯೂ ಸಹ ಪ್ರಾಥಮಿಕ ಹಂತಗಳಲ್ಲಿ ಮಾನಸಿಕ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತದೆ ಎಂದು ತಿಳಿಸಿದರು.
‎ ಕಿಮ್ಸ್ ಹೆಚ್‌ಓಡಿ ಹಾಗೂ ಮನೋವೈದ್ಯರಾದ  ಡಾ.ರವಿಕುಮಾರ ಅವರು ತಮ್ಮ ವಿಶೇಷ ಉಪನ್ಯಾಸ ಪಿ.ಪಿ.ಟಿ ಬಳಸುವುದರ ಮೂಲಕ ಮಾತನಾಡುತ್ತಾ, ಮಾನಸಿಕ ಖಾಯಿಲೆ ಬರುವುದಕ್ಕೆ ಹಲವಾರು ಕಾರಣಗಳಿದ್ದು, ಒತ್ತಡ, ಜೀವನ ಶೈಲಿ, ಜೀವನದಲ್ಲಿ ಬರುವಂತಹ ಆಘಾತಕಾರಿ ಘಟನೆಗಳಿಂದ ಮಾನಸಿಕ ಖಾಯಿಲೆ ಉಂಟಾಗಬಹುದು. ಪ್ರಾರಂಭಿಕ ಹಂತದಲ್ಲಿ ಈ ರೋಗಗಳನ್ನು ಗುರುತಿಸಿ ವೈದ್ಯಕೀಯ ಸಹಾಯ ಪಡೆದು ಆಪ್ತಸಮಾಲೋಚನೆ ಸೇರಿದಂತೆ ಔಷಧೋಪಚಾರಗಳನ್ನು ಪಡೆದಲ್ಲಿ ಗುಣಪಡಿಸಬಹುದು. ಮಾದಕ ವಸ್ತುಗಳ ವ್ಯಸನ ಯುವಕರಲ್ಲಿ ಅತೀ ಹೆಚ್ಚಾಗಿ ಕಾಣಸಿಕೊಳ್ಳುತ್ತಿದ್ದು, ಇದರಿಂದ ದೈಹಿಕವಾಗಿ ದುಷ್ಪರಿಣಾಮ ಉಂಟಾಗುತ್ತದೆ ಉದಾಹರಣೆ: ಕರುಳಿನ ಕ್ಯಾನ್ಸರ್, ಜಾಂಡೀಸ್, ಜಠರ ಸಮಸ್ಯೆ ಇತ್ಯಾದಿ ತೊಂದರೆಗಳು ಕಾಣಿಸಿಕೊಳ್ಳುತ್ತವೆ. ಜೊತೆಗೆ ಮಾನಸಿಕವಾಗಿಯೂ ವ್ಯಕ್ತಿಯು ನಿಯಂತ್ರಣವನ್ನು ಕಳೆದುಕೊಳ್ಳುತ್ತಾನೆ. ಇದರಿಂದ ಮುಕ್ತ ಪಡೆಯಲು ಚಿಕಿತ್ಸೆ ಹಾಗೂ ಆಪ್ತಸಮಾಲೋಚನೆ ನೀಡಬಹುದು. ಅತೀ ಒತ್ತಡವೂ ಸಹ ವ್ಯಕ್ತಿಯನ್ನು ಮಾನಸಿಕ ರೋಗಕ್ಕೆ ತುತ್ತಾಗಿಸುತ್ತದೆ. ಒತ್ತಡದಿಂದ ಹೊರಬರಲು ಉತ್ತಮ ಜೀವನಶೈಲಿ, ಯೋಗ, ಧ್ಯಾನ, ವ್ಯಾಯಾಮಗಳಂತಹ ಅಭ್ಯಾಸಗಳನ್ನು ರೂಢಿಸಿಕೊಳ್ಳುವುದು, ಉತ್ತಮ ಆಹಾರ ಪದ್ಧತಿಯನ್ನು ಅಳವಡಿಸಿಕೊಳ್ಳುವುದು ಮತ್ತು ಇತರರೊಂದಿಗೆ ಸ್ನೇಹ ಸೌಹಾರ್ದತೆಯಲ್ಲಿ ಜೀವನ ನಡೆಸುವುದು ಹಾಗೂ ಒತ್ತಡದಿಂದ ವ್ಯಕ್ತಿಯನ್ನು ದೂರವಿರಿಸಲು ಅತೀ ಮುಖ್ಯವಾಗಿದೆ. ಮಾನಸಿಕ ಖಾಯಿಲೆಯ ಯಾವುದೇ ಲಕ್ಷಣಗಳು ಇದ್ದರೆ, ಟೆಲಿ ಮನಸ್ ದೂರವಾಣಿ ಸಂಖ್ಯೆ 14416 ಗೆ  ಕರೆ ಮಾಡಬಹುದು ಎಂದರು.
‎ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಶಿವಾನಂದ ವಿ.ಪಿ ಸೇರಿದಂತೆ ಜಿಲ್ಲೆಯ ಎಲ್ಲಾ ವಸತಿ ನಿಲಯದ ಪಾಲಕರು ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಸಿಬ್ಬಂದಿಗಳು

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST