Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾನಸಿಕ ಆರೋಗ್ಯಕ್ಕಾಗಿ ಟೆಲಿಮನಸ್ ಸಹಾಯವಾಣಿ 14416 ಸಂಪರ್ಕಿಸಿ: ಡಾ.ಯಲ್ಲಾ ರಮೇಶ್ ಬಾಬು

ಬಳ್ಳಾರಿ,ಮಾ.10
ಮಾನಸಿಕ ಆರೋಗ್ಯ ಸಮಸ್ಯೆ, ಒತ್ತಡ ಇದ್ದಲ್ಲಿ ನೆರವು ಪಡೆಯಲು ಟೆಲಿಮನಸ್ ಸಹಾಯವಾಣಿ 14416 ಗೆ ಕರೆಮಾಡಿ ಉಚಿತ ಆಪ್ತಸಮಾಲೋಚನೆ ಪಡೆಯಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಕಾರ್ಯಕ್ರಮ ವಿಭಾಗದ ವತಿಯಿಂದ ನಗರದ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದಲ್ಲಿ ವೈದ್ಯಾಧಿಕಾರಿಗಳಿಗೆ, ಕ್ಷೇತ್ರ ಮಟ್ಟದ ಸಿಬ್ಬಂದಿಗೆ ಮಾನಸಿಕ ಆರೋಗ್ಯದ ನಿರ್ವಹಣೆ ಕುರಿತು ಸೋಮವಾರ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬ ವ್ಯಕ್ತಿಗೂ ಜೀವನದ ಯಾವುದಾದರೂ ಸನ್ನಿವೇಶಗಳಲ್ಲಿ ಮಾನಸಿಕ  ಆರೋಗ್ಯ ಸಮಸ್ಯೆ ಕಂಡುಬರುವ ಸಾಧ್ಯತೆ ಇರುತ್ತದೆ. ಅಂತಹ ಸಂದರ್ಭದಲ್ಲಿ ಇನ್ನೊಬ್ಬರೊಂದಿಗೆ ವಿಷಯ ಹಂಚಿಕೊಳ್ಳುವ ಅಥವಾ ಸಮಸ್ಯೆಯ ತೀವ್ರತೆ ಹೆಚ್ಚಾದಾಗ ಮಾನಸಿಕ ತಜ್ಞರೊಂದಿಗೆ ತಪ್ಪದೇ ಸಮಾಲೋಚಿಸಬೇಕು ಎಂದು ತಿಳಿಸಿದರು.
ಕರ್ನಾಟಕ ರಾಜ್ಯ ಸರ್ಕಾರವು ರಾಷ್ಟಿçÃಯ ಟೆಲಿ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ  ಟೆಲಿಮೆನಸ್ ಎಂಬ 14416 ಉಚಿತ ಸಹಾಯವಾಣಿ ಕಾರ್ಯನಿರ್ವಹಿಸುತ್ತಿದ್ದು, ಕರೆ ಮಾಡಿ ಸೂಕ್ತ ನೆರವು ಪಡೆದುಕೊಳ್ಳಬಹುದು ಎಂದರು.
ಕರೆ ಮಾಡಿದವರ ವಿವರ ಗೌಪ್ಯವಾಗಿ ಇಡಲಾಗುವುದು. ಧ್ವನಿಮುದ್ರಣ ಆಗುವುದಿಲ್ಲ. ಪರೀಕ್ಷಾ ಒತ್ತಡಕೊಳ್ಳಗಾದವರು, ಕೌಟುಂಬಿಕ ಸಮಸ್ಯೆಗೊಳಗಾದವರು, ಆತ್ಮಹತ್ಯೆ ಆಲೋಚನೆ ಮಾಡುವರು, ಮಾದಕ ವಸ್ತು ವ್ಯಸನಿಗಳು, ಸಂಬAಧಗಳ ಸಮಸ್ಯೆಯಲ್ಲಿ ಸಿಲುಕಿರುವವರು, ಜ್ಞಾಪಕ ಶಕ್ತಿ ತೊಂದರೆ ಉಳ್ಳವರು, ಆರ್ಥಿಕ ಒತ್ತಡದಲ್ಲಿ ಇರುವವರು ಅಥವಾ ಇತರೆ ಯಾವುದೇ ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಇದ್ದಲ್ಲಿ ಈ ಸಹಾಯವಾಣಿ ಮೂಲಕ ನೆರವು ಪಡೆಯಬಹುದಾಗಿದೆ ಎಂದು ತಿಳಿಸಿದರು.
ಜಿಲ್ಲಾ ಮಾನಸಿಕ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ವಿರೇಂದ್ರ ಕುಮಾರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಮಾನಸಿಕ ಆರೋಗ್ಯ ಸೇವೆಗಳನ್ನು ನೀಡಲು ಜಿಲ್ಲಾ ಮಟ್ಟದಿಂದ ಮನೋರೋಗ ತಜ್ಞ ಡಾ.ಕಿಶೋರ್ ಅವರ ನೇತೃತ್ವದಲ್ಲಿ ಪ್ರತಿ ಮೊದಲ ಮಂಗಳವಾರ ಸಿರುಗುಪ್ಪ, ಎರಡನೇ ಮಂಗಳವಾರ ಸಂಡೂರು, ಮೂರನೇ ಮಂಗಳವಾರ ಕಂಪ್ಲಿ, ನಾಲ್ಕನೇ ಮಂಗಳವಾರ ಕುರುಗೋಡು ಹಾಗೂ ಪ್ರತಿ ತಿಂಗಳು 16ನೇ ತಾರೀಖು ಮೋಕ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮಾನಸಿಕ ಆರೋಗ್ಯ ಸೇವೆ ನೀಡಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಕಾರ್ಯಾಗಾರದಲ್ಲಿ ಮನೋರೋಗ ತಜ್ಞ ಡಾ.ಕಿಶೋರ್ ಅವರು ಮಾನಸಿಕ ಕಾಯಿಲೆಗಳಾದ ಆತಂಕ, ಮಾನಸಿಕ ಖಿನ್ನತೆ, ಗಾಬರಿ, ಮನೋರೋಗ, ಚಿತ್ತವಿಕಲತೆ, ಮೇನಿಯಾ ಕಾಯಿಲೆ ಲಕ್ಷಣಗಳು ಮತ್ತು ಚಿಕಿತ್ಸೆಯ ಬಗ್ಗೆ ವಿವರವಾಗಿ ಮಾಹಿತಿ ಮೂಲಕ ತರಬೇತಿ ನೀಡಿದರು.
ಈ ಸಂದರ್ಭದಲ್ಲಿ ಪ್ರಭಾರಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಖುರ್ಶಿದ್ ಬೇಗಮ್, ಮನೋ ಶಾಸ್ತçಜ್ಞ ಶರ್ಮಸ್ ವಲಿ, ಮನೋ ಸಾಮಾಜಿಕ ಕಾರ್ಯಕರ್ತ ಶಾಂತಕುಮಾರ್, ಮನೋ ಶುಶ್ರೂಷಣಾಧಿಕಾರಿ ರಂಜೀತಾ ಸೇರಿದಂತೆ ಇತರೆ ಅಧಿಕಾರಿ-ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*