Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಧಾನಿ ಮೋದಿ ಅವರ ದೀರ್ಘಾವಧಿ ಸೇವೆಗೆ : ಭಾಜಪ ಯಲಬುರ್ಗಾ ಮಂಡಲದ ವತಿಯಿಂದ ವಿಶೇಷ ಪೂಜೆ

 ಕುಕನೂರು : ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಪ್ರಧಾನಿಯಾಗಿ ಅತಿ ಹೆಚ್ಚು ದಿನಗಳ ಕಾಲ ಸೇವೆ ಸಲ್ಲಿಸಿದ ಐತಿಹಾಸಿಕ ಮೈಲಿಗಲ್ಲನ್ನು ತಲುಪಿದ ಹಿನ್ನೆಲೆಯಲ್ಲಿ, ಯಲಬುರ್ಗಾ ಮಂಡಲದ ವತಿಯಿಂದ ಕುಕನೂರು ಪಟ್ಟಣದ ಐತಿಹಾಸಿಕ ಶ್ರೀ ಮಹಾಮಾಯಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಜನಕಲ್ಯಾಣಕ್ಕಾಗಿ ಪ್ರಾರ್ಥನೆ ಹಮ್ಮಿಕೊಳ್ಳಲಾಗಿತ್ತು.
​ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವರಾದ ಹಾಲಪ್ಪ ಆಚಾರ್ ಅವರು, ಜಾಗತಿಕ ಮಟ್ಟದಲ್ಲಿ ಪ್ರಧಾನಿ ಮೋದಿಯವರ ಸಾಧನೆಗಳು ಅಪಾರವಾಗಿವೆ, ಜಗತ್ತಿನ ಪ್ರಮುಖ ರಾಷ್ಟ್ರಗಳ ಸಾಲಿನಲ್ಲಿ ಭಾರತವನ್ನು ಮುಂಚೂಣಿಗೆ ತಂದ ಹೆಗ್ಗಳಿಕೆ ಮೋದಿಯವರದ್ದಾಗಿದೆ. 
ಅವರ ನಾಯಕತ್ವದಲ್ಲಿ ದೇಶವು ಸರ್ವತೋಮುಖ ಅಭಿವೃದ್ಧಿಯತ್ತ ಹೆಜ್ಜೆ ಇಡುತ್ತಿದ್ದು, ಇಂದು ಜಗತ್ತೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ್ದಾರೆ ಎಂದು ಶ್ಲಾಘಿಸಿದರು.
​ಕಾರ್ಯಕ್ರಮದಲ್ಲಿ ಯುವ ಮುಖಂಡರಾದ ಮಂಜುನಾಥ ನಾಡಗೌಡರ್ ಅವರು ಮಾತನಾಡಿ, ಕಳೆದ 12 ವರ್ಷಗಳಲ್ಲಿ ಭಾರತವು ಸಾಧಿಸಿದ ಆತ್ಮನಿರ್ಭರತೆ (ಸ್ವಾವಲಂಬನೆ) ಮತ್ತು ದೇಶದ ಪ್ರಗತಿಯ ವಿವಿಧ ಆಯಾಮಗಳ ಬಗ್ಗೆ ಬೆಳಕು ಚೆಲ್ಲಿದರು. ರಕ್ಷಣೆ, ತಂತ್ರಜ್ಞಾನ ಹಾಗೂ ಮೂಲಸೌಕರ್ಯ ಸೇರಿದಂತೆ ಪ್ರತಿಯೊಂದು ವಲಯದಲ್ಲೂ ಭಾರತವು ಇಂದು ಸ್ವಾವಲಂಬಿಯಾಗುತ್ತಿದ್ದು, ಜಾಗತಿಕ ಮಟ್ಟದಲ್ಲಿ ದೇಶದ ಪ್ರತಿಷ್ಠೆ ಮುಗಿಲೆತ್ತರಕ್ಕೆ ಬೆಳೆದಿದೆ ಎಂದು ಹೆಮ್ಮೆಯಿಂದ ತಿಳಿಸಿದರು.
​ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷ ಮಾರುತಿ ಗಾವರಾಳ, ಹಿರಿಯರಾದ ಶಿವಕುಮಾರ ನಾಗಲಾಪುರಮಠ, ಶರಣಪ್ಪ ಬಣ್ಣದಬಾವಿ, ಮುಕುಂದರಾವ್ ಕುಲಕರ್ಣಿ, ಗೋವಿಂದರಾವ್ ಕುಲಕರ್ಣಿ, ಸಿದ್ದು ಉಳಾಗಡ್ಡಿ, ಬಸವರಾಜ ಹಾಳಕೇರಿ, ಕರಬಸಯ್ಯ ಬಿನ್ನಾಳ, ಮಾರುತೇಶ ಹೂಗಾರ, ಕಳಕೇಶ ಹಟ್ಟಿಕಟಗಿ, ರಾಮನಗೌಡ ಅರಿಶಿನಬಿಡಿ, ಬಸವಣ್ಣ ಈಬೇರಿ ಸೇರಿದಂತೆ ಪಕ್ಷದ ಪ್ರಮುಖರು, ಕಾರ್ಯಕರ್ತರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST