Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾರ್ವಜನಿಕರಿಗಾಗಿ ಚೆನ್ನಮ್ಮ ವ್ರತ್ತದಲ್ಲಿ ಕುಡಿಯುವ ನೀರಿನ ಅರವಟಿಗೆ ವ್ಯವಸ್ಥೆ

ಸಂಕೇಶ್ವರ : ಬೇಸಿಗೆ ದಾಹ ತಣಿಸುವ ಉದ್ದೇಶದಿಂದ ಚನ್ನಮ್ಮ ಸರ್ಕಲ್ ನಲ್ಲಿ ಪುರಸಭೆ ವತಿಯಿಂದ ಮಡಿಕೆಯಲ್ಲಿ ನೀರು ಹಾಕಿ ತಂಪಾದ ಕುಡಿಯುವ ನೀರಿನ ಅರವಟಿಗೆ ಇಟ್ಟು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲಾಗಿದೆ.
ಚನ್ನಮ್ಮ ಸರ್ಕಲ್ ನಲ್ಲಿನ ರಸ್ತೆಯಲ್ಲಿ ನಿತ್ಯ ಸಾವಿರಾರು ಜನರು ಓಡಾಟ ನಡೆಸುತ್ತಿರುತ್ತಾರೆ. ಬಿಸಿಲ ಧಗೆಯಿಂದ ಬಾಯಾರಿ ಬಂದವರು ಇಲ್ಲಿ ಸ್ವಲ್ಪ ಹೊತ್ತು ತಂಗಿ, ಇಲ್ಲಿ ಇಡಲಾದ ತಂಪಾದ ಕುಡಿಯುವ ನೀರು ಸೇವಿಸಿ ದಾಹ ತಣಿಸಿಕೊಳ್ಳುತ್ತಿದ್ದಾರೆ.
ಚನ್ನಮ್ಮ ಸರ್ಕಲ್ ಬಳಿ ಬಿಸಿಲಿನಿಂದ ರಕ್ಷಿಸಿಕೊಳ್ಳಲು ಪುರಸಭೆ ವತಿಯಿಂದ ಟೆಂಟ್ ನಿರ್ಮಿಸಿ ಅದರಲ್ಲಿ  ಜನರಿಗೆ ಕುಳಿತುಕೊಳ್ಳಲು ಕುರ್ಚಿಯನ್ನು ಸಹ ಇಡುವ ವ್ಯವಸ್ಥೆಯನ್ನು ಮಾಡಲಾಗಿದೆ. ದಿನೇ ದಿನೇ ಹೆಚ್ಚುತ್ತಿರುವ ಬಿಸಿಲಿನ ತಾಪದಿಂದ ತತ್ತರಿಸುತ್ತಿರುವ ಜನರಿಗೆ ಈ ವ್ಯವಸ್ಥೆಯು ಸಾರ್ವಜನಿಕರಿಗೆ ಅನುಕೂಲಕರವಾಗಲಿ ಎಂದು ಪುರಸಭೆಯ ಆರೋಗ್ಯಕಿರು ನೀರಿಕ್ಷಕರಾದ ಶ್ರೀಧರ ಬೆಳವಿ ತಿಳಿಸಿದರು.
ಈ‌ ಸಂಧರ್ಭದಲ್ಲಿ ಪುರಸಭೆಯ ಸಿಬ್ಬಂದಿಗಳಾದ ಕೃಷ್ಣಾ ಖಾತೆದಾರ, ಪರುಶರಾ ಪಾಟೀಲ, ಪೌರಕಾರ್ಮಿಕರಾದ ಮಂಗಲ ತಮ್ಮಣ್ಣವರ, ಪ್ರಕಾಶ ಸತ್ಯನಾಯಿಕ ಸೇರಿದಂತೆ ಅನೇಕರು ಇದ್ದರು.
ಸದ್ಯ ಬಿಸಿಲಿನ ಪ್ರಖರತೆ ಅಧಿಕವಾಗುತ್ತಿದ್ದು ಪಟ್ಟಣದಲ್ಲಿ ಅಧಿಕವಾಗಿ ಸಾರ್ವಜನಿಕರ ಓಡಾಟ ನಡೆಸುವ ಪ್ರದೇಶದಲ್ಲಿ ತಂಪಾದ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ