LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ ಜಾರಿಗೊಳಿಸಲು ಒತ್ತಾಯ

 

ಬೆಂಗಳೂರು: ರಾಜ್ಯದ ಎಲ್ಲಾ ಜಾತಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ತಯಾರಿಸಲಾಗಿರುವ ಸಮೀಕ್ಷಾ ವರದಿಯನ್ನು ಜಾರಿಗೊಳಿಸಬೇಕು ಎಂದು ಎಸ್‌ಸಿ, ಎಸ್‌ಟಿ, ಒಬಿಸಿ, ಅಲೆಮಾರಿ ಅಲ್ಪಸಂಖ್ಯಾತ ಸಮುದಾಯಗಳ ಮುಖಂಡು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಗುರುವಾರ ಮುಖ್ಯಮಂತ್ರಿಗಳ ಜೊತೆಗೆ ಸಭೆ ನಡೆಸಿದ ಮುಖಂಡರು ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕೂಡಲೇ ಈಡೇರಿಸಬೇಕು ಎಂದು ಹಕ್ಕೊತ್ತಾಯ ಮಂಡಿಸಿದರು.

ಕರ್ನಾಟಕ ಸರ್ಕಾರದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಕಾಂತರಾಜ್ ಅವರ ನೇತ್ರತ್ವದಲ್ಲಿ ಸಮೀಕ್ಷೆ ಮಾಡಿ, ಮಾನ್ಯ ಜಯಪ್ರಕಾಶ್ ಹೆಗಡೆಯವರು ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ "ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ" ಯನ್ನು ರಾಜ್ಯ ಸರ್ಕಾರ ಸಚಿವ ಸಂಪುಟದಲ್ಲಿ ಮಂಡಿಸಿ ಅಂಗೀಕರಿಸಿ, ಅನುಮೋದಿಸಿ, ಜಾರಿಗೆ ತರಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಚಾಲ್ತಿಯಿರುವ ಒಟ್ಟು ಮೀಸಲಾತಿಯ ಪ್ರಮಾಣವನ್ನು ಶೇಕಡಾ ೭೫ ಕ್ಕೆ ವಿಸ್ತರಿಸಬೇಕು. ಎಸ್ ಸಿ, ಎಸ್ ಟಿ, ಒಬಿಸಿ ಸಮುದಾಯಗಳ ಮೀಸಲಾತಿಯನ್ನು ಹೆಚ್ಚಿಸಬೇಕು. ಭಾರತದ ಸರ್ವೋಚ್ಚ ನ್ಯಾಯಾಲಯ ಮತ್ತು ಉಚ್ಚ ನ್ಯಾಯಾಲಯಗಳ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಮೀಸಲಾತಿ ನೀತಿ ಜಾರಿಗೆ ತರಬೇಕು. ಇದಕ್ಕಾಗಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರವನ್ನು ಸೂಕ್ತ ರೀತಿಯಲ್ಲಿ ಒತ್ತಾಯಿಸಬೇಕು.ವಿಧಾನಸಭೆ, ಲೋಕಸಭೆಗಳಲ್ಲಿ ಯಂತಹ ಶಾಸನ ಸಭೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಲಿಸಬೇಕು. ವಿಧಾನ ಪರಿಷತ್ ಮತ್ತು ರಾಜ್ಯಸಭೆಯಲ್ಲಿ ಪರಿಶಿಷ್ಟರಿಗೆ ಮೀಸಲಾತಿ ಕಲ್ಪಿಸಬೇಕು. ಈ ಕುರಿತು ಕೇಂದ್ರದ ಮೇಲೆ ಒತ್ತಡ ಹಾಕಬೇಕು ಎಂದರು.

ಕರ್ನಾಟಕದ ಖಾಸಗಿ ರಂಗದಲ್ಲಿ ಮೀಸಲಾತಿ ಜಾರಿಗೆ ತರಲು ಕಾನೂನು ರೂಪಿಸಬೇಕು. ಕೇಂದ್ರ ಸರ್ಕಾರ ಲ್ಯಾಟರಲ್ ಎಂಟ್ರಿ ಇತ್ಯಾದಿ ಅಕ್ರಮ ಮಾರ್ಗಗಳ ಮೂಲಕ ಶೋಷಿತ ಸಮುದಾಯಗಳಿಗೆ ನೇಮಕಾತಿಯಲ್ಲಿ ಅನ್ಯಾಯ ಮಾಡುತ್ತಿದೆ. ತಕ್ಷಣ ಕೇಂದ್ರದ ಬ್ಯಾಕ್ ಲಾಗ್ ಹುದ್ದೆಯನ್ನು ಭರ್ತಿ ಮಾಡಲು ಒತ್ತಡ ಹಾಕಬೇಕು. ರಾಜ್ಯದ ಉನ್ನತ ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಹಿಂದುಳಿದವರಿಗೂ ಬ್ಯಾಕ್ ಹುದ್ದೆ ಭರ್ತಿ ಮಾಡಲು ಕ್ರಮವಹಿಸಬೇಕು. ಈ ಹಕ್ಕೊತ್ತಾಯ ಗಳನ್ನು ಜಾರಿಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಾಡಿನ ಶೋಷಿತ ಸಮುದಾಯಗಳ ಜನತೆ ಮತ್ತು ಸಂಘ ಸಂಸ್ಥೆಗಳು ಒತ್ತಾಯಿಸುತ್ತೇವೆ. ತಪ್ಪಿದ್ದಲ್ಲಿ ರಾಜ್ಯ ಸರ್ಕಾರದ ವಿರುದ್ಧ ತೀವ್ರವಾದ ಹೋರಾಟವನ್ನು ಮಾಡುತ್ತೇವೆ ಎಂದು ಎಚ್ಚರಿಸಿದರು.

ಪ್ರಧಾನ ಸಂಚಾಲಕ ಕೆ ಎಂ ರಾಮಚಂದ್ರಪ್ಪ, ಸಂಚಾಲಕ ಮಾವಳ್ಳಿ ಶಂಕರ್, ಅನಂತನಾಯಕ. ಎನ್, ಎಣ್ಣೆಗೆರೆ ಆರ್. ಮುಸ್ಲಿಂ ಸಮಾಜ ಮುಖಂಡ ಮೌಲಾನ ಯೂಸುಫ್ ಖನ್ನಿ ಸೇರಿದಂತೆ ವಿವಿಧ ಸಮಾಜಗಳ ಮುಖಂಡು ಸಭೆಯಲ್ಲಿ ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್