LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Dharwad

ಅರಣ್ಯ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ನ್ಯಾಯಾಧೀಶ ಎನ್.ವಿ.ವಿಜಯ



ಧಾರವಾಡ  ,11 : ನ್ಯಾಯಾಂಗ ಇಲಾಖೆ ಹಾಗೂ ಅರಣ್ಯ ಇಲಾಖೆಗೆ ಬಹಳ ಹತ್ತಿರದ ಸಂಬಂಧವಿದೆ. ಅರಣ್ಯ ಸಂರಕ್ಷಣೆ ಮಾಡುವುದು ಸರ್ವೋಚ್ಚ ನ್ಯಾಯಾಲಯ ಹಾಗೂ ನ್ಯಾಯಾಂಗ ಇಲಾಖೆಯ ಪ್ರಮುಖ ಉದ್ದೇಶವಾಗಿದೆ. ಅರಣ್ಯ ಸಂರಕ್ಷಣೆ ವಿಚಾರವಾಗಿ ನ್ಯಾಯಾಂಗ ಇಲಾಖೆಯಿಂದ ಹಲವು ತೀರ್ಪುಗಳನ್ನು ನೀಡಲಾಗಿದೆ ಎಂದು ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎನ್. ವಿ. ವಿಜಯ ಅವರು ಹೇಳಿದರು.
 

 ನಗರದ ಕೆ.ಸಿ. ಪಾರ್ಕ ಹತ್ತಿರದ ಅರಣ್ಯ ಸಂಕಿರ್ಣ ಆವರಣದಲ್ಲಿ ಅರಣ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಉದ್ದೇಶಿಸಿ ಮಾತನಾಡಿದರು.

ಅರಣ್ಯ ಪ್ರದೇಶದಲ್ಲಿ ಸಂಚರಿಸುವಾಗ ಸಾರ್ವಜನಿಕರು ತಮ್ಮ ಜವಾಬ್ದಾರಿಯನ್ನು ಅರಿತುಕೊಳ್ಳಬೇಕು.
ವಾಹನದಲ್ಲಿ ತೆರಳುವ ಸಂದರ್ಭದಲ್ಲಿ ಅರಣ್ಯ ಪ್ರದೇಶದಲ್ಲಿ ವಾಹನ ನಿಲ್ಲಿಸಿ, ವಿವಿಧ ಚಟುವಟಿಕೆಗಳನ್ನು ನಡೆಸುವುದರಿಂದ ತೊಂದರೆ ಉಂಟಾಗುವ ಸಾಧ್ಯತೆ ಇದೆ. ಅದರಲ್ಲೂ ಸಣ್ಣ ಬೆಂಕಿಯ ಕಿಡಿಯೊಂದು ಹುಲ್ಲಿಗೆ ತಗುಲಿದರೂ ಇಡೀ ಅರಣ್ಯ ಪ್ರದೇಶವನ್ನೇ ನಾಶಪಡಿಸುವಂತಹ ಪರಿಸ್ಥಿತಿ ನಿರ್ಮಾಣವಾಗಬಹುದು.
ಬಂಡೀಪುರ ಸೇರಿದಂತೆ ವಿವಿಧ ಅರಣ್ಯ ಪ್ರದೇಶಗಳಲ್ಲಿ ಕಾಡ್ಗಿಚ್ಚಿನಿಂದ ಸಾಕಷ್ಟು ತೊಂದರೆ ಉಂಟಾಗಿರುವ ಘಟನೆಗಳನ್ನು ನೋಡಿದ್ದೇವೆ. ಕಾಡ್ಗಿಚ್ಚಿನಿಂದ ಅರಣ್ಯ ಹಾಗೂ ಪ್ರಾಣಿಗಳಿಗೆ ಬಹಳಷ್ಟು ತೊಂದರೆಯಾಗಿದೆ. ಕೆಲವೊಮ್ಮೆ ಒಂದು ಸಣ್ಣ ಕಿಡಿಯಿಂದಲೇ ಇಡೀ ಅರಣ್ಯ ನಾಶವಾಗುವ ಪರಿಸ್ಥಿತಿ ಎದುರಾಗುತ್ತದೆ. ಕಾಡ್ಗಿಚ್ಚು ಸಂಭವಿಸಿದ ಸಂದರ್ಭದಲ್ಲಿ ಅರಣ್ಯವನ್ನು ಬೆಂಕಿಯಿಂದ ರಕ್ಷಿಸಲು ಅರಣ್ಯ ರಕ್ಷಕರು ಸಾಕಷ್ಟು ತೊಂದರೆಗಳನ್ನು ಎದುರಿಸುತ್ತಾರೆ. ಬೆಂಕಿ ನಂದಿಸುವ ಕಾರ್ಯದಲ್ಲಿ ಕೆಲವರು ತಮ್ಮ ಜೀವವನ್ನೂ ಕಳೆದುಕೊಂಡಿರುವ ಘಟನೆಗಳಿವೆ. ಹೀಗಾಗಿ ನಾವು ಏನು ಮಾಡುತ್ತಿದ್ದೇವೆ ಹಾಗೂ ಅರಣ್ಯ ಸಂರಕ್ಷಣೆಯಲ್ಲಿ ನಮ್ಮ ಜವಾಬ್ದಾರಿ ಏನು ಎಂಬುದನ್ನು ತಿಳಿದುಕೊಳ್ಳಬೇಕು. ಅರಣ್ಯ ಸಂರಕ್ಷಣೆಗಾಗಿ ಶ್ರಮಿಸುವವರನ್ನು ನೆನಪಿಸಿಕೊಳ್ಳುವುದು ಹಾಗೂ ಈ ಕುರಿತು ಜಾಗೃತಿ ಮೂಡಿಸುವುದು ಒಳ್ಳೆಯ ಕಾರ್ಯವಾಗಿದೆ ಎಂದು ಅವರು ಹೇಳಿದರು.

ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಸಂತರೆಡ್ಡಿ ಕೆ.ವಿ, ಅವರು ಮಾತನಾಡಿ, ಕರ್ನಾಟಕದಲ್ಲಿ ಕಳೆದ ಸುಮಾರು 60 ವರ್ಷಗಳಲ್ಲಿ ಪರಿಸರ ಮತ್ತು ಪ್ರಕೃತಿ ಸಂರಕ್ಷಣೆಗಾಗಿ ಅರಣ್ಯ ಇಲಾಖೆಯ ಸುಮಾರು 65 ಸಿಬ್ಬಂದಿ ಹಾಗೂ ಅಧಿಕಾರಿಗಳು ಪ್ರಾಣ ತ್ಯಾಗ ಮಾಡಿದ್ದಾರೆ. ಕಳೆದ ಐದು ವರ್ಷಗಳಲ್ಲೇ ಸುಮಾರು 17 ಮಂದಿ ಮೃತಪಟ್ಟಿದ್ದಾರೆ. ವೀರಪ್ಪನ್ ವಿರುದ್ಧದ ಕಾರ್ಯಾಚರಣೆಯಲ್ಲಿ ಪಿ. ಶ್ರೀನಿವಾಸ್ ಸೇರಿದಂತೆ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಆನೆ, ಹುಲಿ ಹಾಗೂ ಚಿರತೆಗಳ ದಾಳಿ, ಕಾಡ್ಗಿಚ್ಚು ನಂದಿಸುವ ಕಾರ್ಯ ಮತ್ತು ಮಾನವ–ವನ್ಯಜೀವಿ ಸಂಘರ್ಷದ ಸಂದರ್ಭದಲ್ಲಿಯೂ ಅನೇಕ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಾ ಪ್ರಾಣ ತ್ಯಾಗ ಮಾಡಿದ್ದಾರೆ. ಧಾರವಾಡದ ಎ. ಪೂಜಾರಿ (1996) ಹಾಗೂ ಗದಗ ಜಿಲ್ಲೆಯ ಎಂ.ಬಿ. ಶಿರಹಟ್ಟಿ (2005) ಅವರು ಕೂಡ ಪರಿಸರ ಸಂರಕ್ಷಣೆಗಾಗಿ ಪ್ರಾಣ ಕಳೆದುಕೊಂಡವರಲ್ಲಿ ಸೇರಿದ್ದಾರೆ ಎಂದರು.

1730 ರಲ್ಲಿ ಜೋಧ್‍ಪುರದ ಖೇಜರ್ಲಿ ಪ್ರದೇಶದಲ್ಲಿ ಮರಗಳ ರಕ್ಷಣೆಗಾಗಿ ಅಮೃತಾ ದೇವಿ ಸೇರಿದಂತೆ ಬಿμÉ್ಣೂೀಯ್ ಸಮುದಾಯದ 363 ಮಂದಿ ಪ್ರಾಣ ತ್ಯಾಗ ಮಾಡಿದ ಘಟನೆಯ ಸ್ಮರಣಾರ್ಥ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಆಚರಿಸಲಾಗುತ್ತಿದೆ. ಅರಣ್ಯ ಮತ್ತು ಪ್ರಕೃತಿ ಸಂರಕ್ಷಣೆಗೆ ತಮ್ಮ ಪ್ರಾಣವನ್ನೇ ಅರ್ಪಿಸಿದ ಎಲ್ಲ ಹುತಾತ್ಮರ ತ್ಯಾಗವನ್ನು ಸ್ಮರಿಸಲಾಯಿತು ಎಂದು ಅವರು ಹೇಳಿದರು.

ಅರಣ್ಯ ಸಂರಕ್ಷಣೆಗೆ ಅರಣ್ಯ ಇಲಾಖೆಯೊಂದಿಗೆ ಅಭಿವೃದ್ಧಿ ಇಲಾಖೆಗಳು ಹಾಗೂ ಅಧಿಕಾರಿಗಳ ಸಹಕಾರ ಅತ್ಯವಶ್ಯಕ. ಕಾಡಿನಲ್ಲಿ ಅಡಗಿರುವ ವೈರಸ್‍ಗಳು ಭವಿಷ್ಯದಲ್ಲಿ ಮನುಕುಲಕ್ಕೆ ಅಪಾಯ ತಂದೊಡ್ಡಬಹುದು. ಅರಣ್ಯ ಹುತಾತ್ಮರ ಧೈರ್ಯ, ಕರ್ತವ್ಯನಿμÉ್ಠ ಹಾಗೂ ಆದರ್ಶಗಳನ್ನು ನಮ್ಮ ಕರ್ತವ್ಯದಲ್ಲಿ ಅಳವಡಿಸಿಕೊಂಡು ಪ್ರಕೃತಿ ಸಂರಕ್ಷಿಸುವುದೇ ಅವರಿಗೆ ಸಲ್ಲಿಸುವ ನಿಜವಾದ ಗೌರವಿಸುವದು. ಹುತಾತ್ಮರ ತ್ಯಾಗದಿಂದ ಪ್ರೇರಣೆ ಪಡೆದು ಒಗ್ಗಟ್ಟು, ಸುರಕ್ಷತೆ ಹಾಗೂ ಮುನ್ನೆಚ್ಚರಿಕೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು.

ಹುಬ್ಬಳ್ಳಿ- ಧಾರವಾಡ ಪೆÇಲೀಸ್ ಆಯುಕ್ತ ಭೊಷಣ್ ಬೋರಸೆ ಅವರು ಮಾತನಾಡಿ, ಅರಣ್ಯ ಇಲಾಖೆಯ ಕರ್ತವ್ಯಕ್ಕಾಗಿ ಹುತಾತ್ಮರು ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ. ಇದು ಅವರ ಸೇವೆ ಮತ್ತು ತ್ಯಾಗಕ್ಕೆ ಗೌರವ ಸಲ್ಲಿಸುವ ಸಂದರ್ಭವಾಗಿದೆ. ಪ್ರಕೃತಿಯನ್ನು ಕಾಪಾಡುವುದು ಕೇವಲ ಅರಣ್ಯ ಇಲಾಖೆಯ ಜವಾಬ್ದಾರಿಯಲ್ಲ. ಪ್ರತಿಯೊಬ್ಬ ಸರ್ಕಾರಿ ಅಧಿಕಾರಿ ಹಾಗೂ ಪ್ರತಿಯೊಬ್ಬ ನಾಗರಿಕನೂ ಪ್ರಕೃತಿ ಸಂರಕ್ಷಣೆಯ ಜವಾಬ್ದಾರಿಯನ್ನು ಹೊಂದಿದ್ದಾರೆ. ಮನುಷ್ಯರು ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಸಾಕಷ್ಟು ಮುಂದುವರಿದಿದ್ದೇವೆ, ನಾವೇ ಶ್ರೇಷ್ಠ ಜೀವಿಗಳು ಎಂಬ ಅಹಂಕಾರ ಹೊಂದಿರುತ್ತೇವೆ. ಆದರೆ ಕೋವಿಡ್‍ನಂತಹ ಸಣ್ಣ ವೈರಸ್ ಕೂಡ ಮೂರು-ನಾಲ್ಕು ವರ್ಷಗಳ ಕಾಲ ಇಡೀ ಜಗತ್ತಿಗೆ ಸಂಕಷ್ಟ ತಂದಿತು. ಇದರಿಂದ ಪ್ರಕೃತಿ ಎಷ್ಟು ಶಕ್ತಿಶಾಲಿಯಾಗಿದೆ ಎಂಬುದು ನಮಗೆ ತಿಳಿಯುತ್ತದೆ ಎಂದು ಅವರು ಹೇಳಿದರು.

ನದಿಗಳಿಗೆ ಆಣೆಕಟ್ಟು ನಿರ್ಮಿಸಿ ನೀರನ್ನು ನಿಯಂತ್ರಿಸಬಹುದು ಎಂಬ ದರ್ಪ ಮನುಷ್ಯರಲ್ಲಿದೆ. ಆದರೆ ಪ್ರಕೃತಿ ವಿಕೋಪಗಳು ಸಂಭವಿಸಿದಾಗ ಮನುಷ್ಯ ಪ್ರಕೃತಿಯ ಮುಂದೆ ಎಷ್ಟು ಸಣ್ಣವನು ಎಂಬುದು ಅರಿವಾಗುತ್ತದೆ. ಆದ್ದರಿಂದ ಪ್ರಕೃತಿಯ ಬಗ್ಗೆ ಅಹಂಕಾರ ಇರಬಾರದು. ನಮಗೆ ಸ್ವಚ್ಛ ಹಾಗೂ ಉತ್ತಮ ಪರಿಸರ ದೊರೆತಿದೆ. ಅದೇ ರೀತಿಯ ಸ್ವಚ್ಛ ಪರಿಸರವನ್ನು ಮುಂದಿನ ಪೀಳಿಗೆಗೂ ನೀಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಅರಣ್ಯ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದರು. ಪೆÇಲೀಸ್ ಇಲಾಖೆಯಿಂದ ಗೌರವಂದನೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಉಪ ವಿಭಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುನಿತಾ ನಿಂಬರಗಿ ಹಾಗೂ ಸಂಜಯ್ ಗುಪ್ತಾ ಅವರು ಮಾತನಾಡಿದರು. ವಿವೇಕ ಟಿ.ಕವರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಯುನಿವರ್ಸಿಟಿ ಪಬ್ಲಿಕ್ ಶಾಲೆಯ ಶಿಕ್ಷಕಿ ಡಾ.ಇಂದು ರವಿಕುಮಾರ ನಿರೂಪಿಸಿದರು. ಗಸ್ತು ಅರಣ್ಯ ಪಾಲಕ ಪ್ರಕಾಶ ಕಂಕಣವಾಡಿ ವಂದಿಸಿದರು.

ವೇದಿಕೆಯಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಅಲ್ಲಪ್ಪ ಎಂ.ಬಡಿಗೇರ, ಉತ್ತರ ಕರ್ನಾಟಕ ನಿವೃತ್ತ ಅರಣ್ಯ ಅಧಿಕಾರಿಗಳ ಸಂಘದ ಅಧ್ಯಕ್ಷ ವಿ.ಎಮ್. ಹಲಗತ್ತಿ, ಕೆ.ಎಫ್.ಡಿ.ಸಿಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುರೇಶ ತೇಲಿ, ಕಾರ್ಯ ಯೋಜನೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಪರಿಮಳ ವಿ.ಹೆಚ್, ಕೆ.ಎಸ್.ಎಪ್.ಆಯ್.ಸಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಹೇಶ ಹಿರೇಮಠ, ವಲಯ ಅರಣ್ಯ ಅಧಿಕಾರಿ ಕಿರಣಕುಮಾರ ಕರತಂಗಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸುಮನಾ ಜಯಂತ, ಸವಿತಾ ಎಂ. ದೊಣ್ಣಿ, ಶಿವಪ್ರಸಾದ ಕುಬಸದ, ವೀರೇಶ ಪಟ್ಟಣಶೆಟ್ಟಿ, ಶೈಲಾ ಕಿತ್ತೂರ, ಪಿ.ಡಿ. ಲಮಾಣಿ, ಮಂಜುನಾಥ ಭಾಗನ್ನವರ, ಉಮಾ ಪಾಟೀಲ, ಭಾರತಿ ಸಾಲಿಯಾನ ಸೇರಿದಂತೆ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗುಣಾತ್ಮ ಶಿಕ್ಷಣ, ಒಳ್ಳೆಯ ಸಂಸ್ಕಾರ ನೀಡುವುದು ಶಿಕ್ಷಕರ ಆಧ್ಯ ಕರ್ತವ್ಯ: ಶಾಸಕ ಂiಶವಂತರಾಯಗೌಡ ಪಾಟೀಲಬರ ಪೀಡಿತ ತಾಲೂಕು ಘೋಷಣೆ ಶೇ.೨೦೦ ಖಚಿತ-ಶಾಸಕ ನಾಡಗೌಡಮುದ್ದೇಬಿಹಾಳ ಹಾಗೂ ವಿಜಯಪುರ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಲು ಎ.ಎಸ್. ಪಾಟೀಲ್ ನಡಹಳ್ಳಿ ಆಗ್ರಹಸಿಎಂ ಡಿ.ಕೆ.ಶಿವಕುಮಾರ್ ಜೊತೆ ಚರ್ಚೆ; ರೈತರ ಹೆಸರಿನಲ್ಲಿ ರಾಜಕೀಯ ಮಾಡುವವರ ಬಗ್ಗೆ ಕಿವಿಗೊಡಬೇಡಿಅರಣ್ಯ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ನ್ಯಾಯಾಧೀಶ ಎನ್.ವಿ.ವಿಜಯಸೆ.೧೩ರಂದು ತಾಳಿಕೋಟೆ ತಾಲೂಕಿನ ಹಲವು ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯಹಿರೇಬಾಗೇವಾಡಿಯಲ್ಲಿ ಶ್ರಾವಣ ಮಾಸದ ವಿಶೇಷ ಪೂಜೆ: ಲಕ್ಷ್ಮೀ ಹೆಬ್ಬಾಳಕರ್ ಭಾಗಿ*ಗೃಹಲಕ್ಷ್ಮಿ ಹಣದಿಂದ ರಥ ನಿರ್ಮಾಣಕ್ಕೆ ಗ್ರಾಮಸ್ಥರ ಕೊಡುಗೆ*; *ಲಕ್ಷ್ಮೀ ಹೆಬ್ಬಾಳಕರ್ ಪ್ರಶಂಸೆ*ಸತೀಶ ಅಭಿಮಾನಿಗಳಿಂದ ಪ್ರತಿಭಟನೆಪೌಷ್ಠಿಕ ಆಹಾರ ಸೇವನೆಯಿಂದ ರಕ್ತಹೀನತೆ, ಅಪೌಷ್ಠಿಕತೆ ತಡೆ ಸಾಧ್ಯ: ನ್ಯಾ. ಮಹಾಂತೇಶ ದರಗದ