LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ವಿಧಾನಪರಿಷತ್​ ಮಾಜಿ ಸಭಾಪತಿ ಎನ್‌. ತಿಪ್ಪಣ್ಣ ಕೊನೆಯುಸಿರು

ಬಳ್ಳಾರಿ: ವಿಧಾನಪರಿಷತ್​ ಮಾಜಿ ಸಭಾಪತಿ, ಹಿರಿಯ ನ್ಯಾಯವಾದಿ, ಅಖಿಲ ಭಾರತ ವಿರಶೈವ‌ ಮಹಾಸಭಾ ರಾಜ್ಯ ಘಟಕದ ಮಾಜಿ ಅಧ್ಯಕ್ಷರೂ ಆಗಿದ್ದ ಎನ್‌. ತಿಪ್ಪಣ್ಣ (97) ಅವರು ಶುಕ್ರವಾರ ಮುಂಜಾನೆ ಇಲ್ಲಿನ ಗಾಂಧಿನಗರದಲ್ಲಿ ಕೊನೆಯುಸಿರೆಳೆದರು.


ತಿಪ್ಪಣ್ಣ ಅವರಿಗೆ ಒಬ್ಬ ಪುತ್ರ ಇದ್ದಾರೆ. ಅವರ ಅಂತ್ಯ ಸಂಸ್ಕಾರವನ್ನು ನಾಳೆ ಹುಟ್ಟೂರು ಚಿತ್ರದುರ್ಗ ಜಿಲ್ಲೆಯ ತುರವಿನೂರಿನಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಬಳ್ಳಾರಿಯ ಅವರ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.


ವಕೀಲರಾಗಿ ಹಲವು ವರ್ಷಗಳ ಕಾಲ ಕಾರ್ಯ ನಿರ್ವಹಿಸಿದ್ದ ಅವರು, ಬಳಿಕ ರಾಜಕೀಯ ಕ್ಷೇತ್ರ ಪ್ರವೇಶಿಸಿದ್ದರು. ನಾಲ್ಕು ಬಾರಿ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದರು. ಪ್ರತಿಪಕ್ಷದ ಉಪ ನಾಯಕರಾಗಿದ್ದರು. ಅಲ್ಪ ಅವಧಿಗೆ ಸಭಾಪತಿಯಾಗಿಯೂ ಸೇವೆ ಸಲ್ಲಿಸಿದ್ದಾರೆ.


ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರೊಂದಿಗೆ ಗುರುತಿಸಿಕೊಂಡಿದ್ದ ತಿಪ್ಪಣ್ಣ ಜನತಾದಳದಿಂದ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ಬಳಿಕ ಜೆಡಿಯುನಲ್ಲಿ ಇದ್ದ ಅವರು ಪಕ್ಷವನ್ನು ಜೆಡಿಎಸ್‌ನಲ್ಲಿ ವಿಲೀನಗೊಳಿಸಿದ ಬಳಿಕ, ಜೆಡಿಎಸ್‌ನ ರಾಜ್ಯ ಘಟಕದ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ಮುದ್ದೇಬಿಹಾಳ ಬರಪೀಡಿತ ತಾಲೂಕು ಘೋಷಣೆ: ರೈತರಿಗೆ ಸಿಹಿ ಸುದ್ದಿಇಂದು ಅನಂತಪೂರ ಹೋಬಳಿ ಮಟ್ಟದ ಪ್ರಜಾ ಸೇವೆ ಆಂದೋಲನ ಸಭೆ