LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧಿಸುವ ದುಸ್ಸಾಹಸಕ್ಕೆ ಕೈ ಹಾಕಬಾರದು: ಮಾಜಿ ಸಿಎಂ ಯಡಿಯೂರಪ್ಪ

ಹುಬ್ಬಳ್ಳಿ, ಏಪ್ರಿಲ್ 15: ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿಯವರು 'ರೋಡ್‌ ಶೋ' ಗು ಮೊದಲು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿ ಮಾಜಿ ಸಿಎಂ ಯಡಿಯೂರಪ್ಪ ಅವರು, ಧಾರವಾಡ ಮತ ಕ್ಷೇತ್ರದಲ್ಲಿ ಜನರು ಪ್ರಹ್ಲಾದ್ ಜೋಶಿಯವರ ಪರವಾಗಿದ್ದಾರೆ. ಶ್ರೀ ಶಿರಹಟ್ಟಿಮಠದ ಶ್ರಿ ಫಕೀರ ದಿಂಗಾಲೇಶ್ವರ ಸ್ವಾಮೀಜಿಗಳು ಪಕ್ಷೇತರವಾಗಿ ಸ್ಪರ್ಧಿಸುವ ದುಸ್ಸಾಹಸಕ್ಕೆ ಕೈ ಹಾಕಬಾರದು ಎಂದು ಅವರು ಹೇಳಿದರು.

ಧಾರವಾಡ ಮತ ಕ್ಷೇತ್ರದಲ್ಲಿ ಮತದಾರರು ಬಿಜೆಪಿಯ ಪರವಾಗಿದ್ದಾರೆ. ನೀವು ಪ್ರಹ್ಲಾದ್ ಜೋಶಿ ಅವರ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಕೈ ಹಾಕಬಾರದು. ತಮ್ಮ ರಾಜಕೀಯ ನಿರ್ಧಾರ ಕೈ ಬಿಡಬೇಕು ಎಂದು ಯಡಿಯೂರಪ್ಪ ಅವರಲ್ಲಿ ಮನವಿ ಮಾಡಿದರು.

ಕರ್ನಾಟಕದಲ್ಲಿ ರಾಜ್ಯದಲ್ಲಿ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಅಲೆ ಇದೆ. ಪ್ರಹ್ಲಾದ್ ಜೋಶಿ ಅವರು ಪ್ರಬುದ್ಧ ರಾಜಕಾರಣಿ. ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ. ಅಭಿವೃದ್ಧಿ ಕಾರ್ಯಗಳೇ ಅವರ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದು ತಿಳಿಸಿದರು.

ಪ್ರಹ್ಲಾದ್ ಜೋಶಿ ವಿರುದ್ಧ ದಿಂಗಾಲೇಶ್ವರ ಸ್ವಾಮೀಜಿ ಸ್ಪರ್ಧೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ. ಸ್ವಾಮಿಜಿ ಅವರಿಗೆ ಮತ್ತೊಮ್ಮೆ ವಿನಂತಿ ಮಾಡುತ್ತೇನೆ. ತಮ್ಮ ನಿರ್ಧಾರದಿಂದ ಹಿಂದೆ ಸರಿಯಬೇಕು. ಈ ಕುರಿತು ಈಗಾಗಲೇ ಅವರೊಂದಿಗೆ ಮಾತನಾಡಿದ್ದೇನೆ. ಇನ್ನೊಮ್ಮೆ ಫೋನ್ ಕರೆ ಮೂಲಕ ಅವರನ್ನು ಮನವೊಲಿಸುವ ಕೆಲಸ ಮಾಡುವೆ ಎಂದು ಹೇಳಿದರು

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್