Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಗದೀಶ್ ಶೆಟ್ಟರ್ ಪರ ಮತಯಾಚಿಸಿದ ಮಾಜಿ ಸಚಿವ ಬೈರತಿ ಬಸವರಾಜ

ಬೆಳಗಾವಿ04: ಇದು ದೇಶದ ಚುನಾವಣೆ, ನಿಮ್ಮ ಅಮೂಲ್ಯ ಮತ ಜಗದೀಶ್ ಶೆಟ್ಟರ್ ಅವರಿಗೆ ನೀಡುವ ಮೂಲಕ ಮೋದಿಯವರ ಕೈ ಬಲ‌ ಪಡಿಸಬೇಕು ಎಂದು ಮಾಜಿ ಸಚಿವರಾದ ಬೈರತಿ ಬಸವರಾಜ ಅವರು ಕರೆ ನೀಡಿದ್ದಾರೆ.


ಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿ ಉತ್ತರ ಮತಕ್ಷೇತ್ರದ ಸಮರ್ಥ ನಗರದಲ್ಲಿ ಪ್ರಚಾರ ಸಭೆ ನಡೆಸಿ, ಮತಯಾಚನೆ ಮಾಡಲಾಯಿತು. ಈ ವೇಳೆ ಮಾತನಾಡಿದ ಅವರು, ನಾನು ನಗರಾಭಿವೃದ್ಧಿ ಸಚಿನಾಗಿದ್ದಾಗ ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಬೆಳಗಾವಿ ನಗರಕ್ಕೆ ಸಾಕಷ್ಟು ಕೊಡುಗೆ ಕೊಟ್ಟಿದ್ದೇವೆ.‌ ರಸ್ತೆಗಳ ಉನ್ನತ್ತಿಕರಣ, ವಿದ್ಯುತ್ ದೀಪಗಳ ಅಳವಡಿಕೆ, ಕುಡಿಯುವ ನೀರಿನ ಯೋಜನೆ ಅನುಷ್ಠಾನ, ಟ್ರಾಫಿಕ್ ಸಮಸ್ಯೆ ಬಗೆಹರಿಸುವುದು ಸೇರಿದಂತೆ ಅನೇಕ ಯೋಜನೆಗಳನ್ನು ಅನುಷ್ಠಾನ ಮಾಡಿದ್ದೇವೆ. ವಿಶೇಷವಾದ ಬಸ್ ನಿಲ್ದಾಣ ಕೂಡ ನಿರ್ಮಾಣ  ಮಾಡಿದ್ದೇವೆ ಎಂದು ತಿಳಿಸಿದರು.


ಈ ದೇಶದ ಭದ್ರತೆ ದೃಷ್ಟಿಯಿಂದ, ಈ ದೇಶದ ಅಭಿವೃದ್ಧಿ ದೃಷ್ಟಿಯಿಂದ, ಎಲ್ಲರೂ ನರೇಂದ್ರ ಮೋದಿಯವರನ್ನು ಬೆಂಬಲಿಸಬೇಕು. ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸಬೇಕು.‌ ವಿಷೇಶವಾಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರನ್ನು ಬೆಂಬಲಿಸಿಸುವ ಮೂಲಕ ಅವರನ್ನು ಲೋಕಸಭೆಗೆ ಕಳುಹಿಸಬೇಕು. ಮುಂದೆ ಅನೇಕ ಯೋಜನೆಗಳು ಬೆಳಗಾವಿ ಲೋಕಸಭಾ ವ್ಯಾಪ್ತಿಯಲ್ಲಿ ಬರಬೇಕು. ಜಗದೀಶ್ ಶೆಟ್ಟರ್ ಅವರಿಗೆ ಅನೇಕ ಇಲಾಖೆಯಲ್ಲಿ ಸಚಿವರಾಗಿ ಕೆಲಸ ಮಾಡಿದ ಅನುಭವ ಇದೆ. ಜಗದೀಶ್ ಶೆಟ್ಟರ್ ಅವರನ್ನು ಲೋಕಸಭೆಗೆ ಆರಿಸಿ ಕಳುಹಿಸಿದರೆ ಈ ಲೋಕಸಭಾ ಕ್ಷೇತ್ರ ಅಭಿವೃದ್ಧಿ ಆಗಲಿದೆ. ನರೇಂದ್ರ ಮೋದಿಯವರು ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣಗಳ ಅಭಿವೃದ್ಧಿ ಮಾಡಿದ್ದಾರೆ. ರಾಮ ಮಂದಿರ ನಿರ್ಮಾಣ ಆಗಿದೆ.‌ ಕಾಶ್ಮೀರಕ್ಕೆ ಇದ್ದ ವಿಶೇಷ ಸ್ಥಾನಮಾನ ರದ್ದು ಮಾಡಿಲಾಗಿದೆ, ಹಾಗಾಗಿ ಜಗದೀಶ್ ಶೆಟ್ಟರ್ ಅವರಿಗೆ ಮತ ನೀಡಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಹೇಳಿದರು.‌


ಸಂದರ್ಭದಲ್ಲಿ ಬಿಜೆಪಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್, ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ  ಅನಿಲ ಬೆನಕೆ, ಪ್ರಮುಖರಾದ ನೇತ್ರಾವತಿ ಬಾಗವತ್, ಮುರಘಂದ್ರಗೌಡ ಪಾಟೀಲ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ