ನೇಸರಗಿ . ದಿ. 14-11-2026 ರಂದು ಬೆಂಗಳೂರಿನಲ್ಲಿ ನಡೆದ 73ನೇ ಅಖಿಲ ಭಾರತ ಸಹಕಾರ ಸಪ್ತಾಹ – 2026ರ ರಾಜ್ಯಮಟ್ಟದ ಸಮಾರಂಭದಲ್ಲಿ, ಸಹಕಾರಿ ರಂಘದಲ್ಲಿ ಸಲ್ಲಿಸಿದ ಅಮೋಘ ಸೇವೆ ಪರಿಗಣಿಸಿ, ಚನ್ನಮ್ಮನ ಕಿತ್ತೂರು ಕ್ಷೇತ್ರದ ಮಾಜಿ ಶಾಸಕರು, ಬೆಳಗಾವಿ ಜಿಲ್ಲಾ ಬಿ ಡಿ ಸಿ ಸಿ ಬ್ಯಾಂಕಿನ ಮಾಜಿ ಉಪಾಧ್ಯಕ್ಷರು ಹಾಗೂ ನಿರ್ದೇಶಕರು, ಅನೇಕ ಸಹಕಾರಿ ಸಂಘಗಳ ಮಾರ್ಗದರ್ಶಕರಾದ ಮಹಾಂತೇಶ ದೊಡ್ಡಗೌಡರ ಅವರಿಗೆ ಪ್ರತಿಷ್ಠಿತ “ಸಹಕಾರ ರತ್ನ” ಪ್ರಶಸ್ತಿ ನೀಡಿ ಗೌರವಿಸಿದೆ.
ಈ ಸಮಾರಂಭದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಸಹಕಾರ ಸಚಿವರಾದ ಲಕ್ಷ್ಮಣ ಸವದಿ, ಸಹಕಾರ ಮಹಾಮಂಡಳದ ಅಧ್ಯಕ್ಷರಾದ ಜಿ.ಟಿ. ದೇವೇಗೌಡ, ವಸತಿ ಮಹಾಮಂಡಳದ ಅಧ್ಯಕ್ಷರಾದ ಎಸ್.ಟಿ. ಸೋಮಶೇಖರ, ಸಹಕಾರಿ ಧುರೀಣರು, ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.