Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಫಾರೆಸ್ಟ್  ಮೊದಲ ಹಾಡು ರಿಲೀಸ್

      ಸ್ಯಾಂಡಲ್ ವುಡ್ ಉಪಾಧ್ಯಕ್ಷ ಚಿಕ್ಕಣ್ಣ ಸ್ನೇಹಿತರ ಜೊತೆಗೂಡಿ ಕಾಡಿನ ಕತೆ ಹೇಳೋಕೆ ರೆಡಿ ಆಗಿದ್ದಾರೆ. ಶೇಕಡ 80 ರಷ್ಟು ಸಿನಿಮಾ ಕಾಡಿನಲ್ಲಿಯೇ ಸಾಗುತ್ತದೆ. ಅದಕ್ಕೇನೆ ಚಿತ್ರಕ್ಕೆ ಫಾರೆಸ್ಟ್ ಅಂತಲೇ ಹೆಸರಿಡಲಾಗಿದೆ. ಈ ಸಿನಿಮಾದ ಮೊದಲ ಹಾಡು ಅನಾವರಣಗೊಂಡಿದೆ.


     ಓಡೋ ಓಡೋ ಅಂತಾ ಶುರುವಾಗುವ ಹಾಡಿಗೆ ಪುನೀತ್ ಆರ್ಯ ಕ್ಯಾಚಿ ಮ್ಯಾಚಿ ಪದ ಪೊಣಿಸಿದ್ದಾರೆ, ಖ್ಯಾತ ಗಾಯಕ ಕೈಲಾಸ್ ಖೇರ್ ಹಾಗೂ ಹರ್ಷ ಉಪ್ಪಾರ್ ಧ್ವನಿಯಾಗಿದ್ದಾರೆ. ಧರ್ಮ ವಿಶ್ ಹಾಡಿಗೆ ಸಂಗೀತ ಒದಗಿಸಿದ್ದಾರೆ. ಓಡೋ ಓಡೋ ಹಾಡಿನಲ್ಲಿ ಚಿಕ್ಕಣ್ಣ ರಂಗಾಯಣ ರಘು, ಫಸ್ಟ್ ರ್ಯಾಂಕ್ ರಾಜು, ಅನೀಶ್ ತೇಜೇಶ್ವರ್ ಹಾಗೂ ಅರ್ಚನಾ ಕೊಟ್ಟಿಗೆ ಕಾಣಿಸಿಕೊಂಡಿದ್ದಾರೆ.


     ಈ ಹಿಂದೆ ಡಬಲ್ ಇಂಜಿನ್, ಬಾಂಬೆ ಮಿಠಾಯಿ, ಬ್ರಹ್ಮಚಾರಿ ಸಿನಿಮಾಗಳನ್ನು ನಿರ್ದೇಶನ ಮಾಡಿರುವ ಚಂದ್ರಮೋಹನ್ ಈ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಶೀರ್ಷಿಕೆ ಹೇಳುವಂತೆ ಇದೊಂದು ಫಾರೆಸ್ಟ್ ಅಡ್ವೆಂಚರಸ್ ಕಾಮಿಡಿ ಸಿನಿಮಾವಾಗಿದ್ದು, ಹಿರಿಯ ನಟ ಅವಿನಾಶ್ , ಪ್ರಕಾಶ್ ತುಮ್ಮಿನಾಡ್, ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ದೀಪಕ್ ರೈ ಪಾಣಾಜೆ, ಸೂರಜ್ ಪಾಪ್ಸ್ ಸುನಿಲ್ ಕುಮಾರ್ ತಾರಾಬಳಗದಲ್ಲಿದ್ದಾರೆ.


     'ಫಾರೆಸ್ಟ್' ಸಿನಿಮಾಕ್ಕೆ ಎನ್ ಎಂ ಕೆ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಕಾಂತರಾಜು ಹಣ ಹಾಕುತ್ತಿದ್ದಾರೆ. ಚಿತ್ರಕ್ಕೆ ವಿ ರವಿಕುಮಾರ್ ಛಾಯಾಗ್ರಹಣ ಮಾಡುತ್ತಿದ್ದು, ಸಂಕಲನದ ಹೊಣೆಯನ್ನು ಅರ್ಜುನ್ ಕಿಟ್ಟು ಹೊತ್ತುಕೊಂಡಿದ್ದಾರೆ. ಧರ್ಮವೀರ್ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ ಶೂಟಿಂಗ್ ಮುಗಿರುವ ಚಿತ್ರತಂಡ, ಮಡಿಕೇರಿ, ಮಂಗಳೂರು, ಚಿಕ್ಕಮಗಳೂರು, ಬೆಂಗಳೂರು ಸುತ್ತಮುತ್ತ  ಚಿತ್ರೀಕರಣ ನಡೆಸಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ 'ಫಾರೆಸ್ಟ್' ಚಿತ್ರತಂಡ ಆಗಸ್ಟ್ ತಿಂಗಳಲ್ಲಿ ಸಿನಿಮಾವನ್ನು ತೆರೆಗೆ ತರಲು ಯೋಜನೆ ಹಾಕಿಕೊಂಡಿದೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*