Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಚಿತ ಫ್ಯಾಷನ್ ಡಿಸೈನಿಂಗ್ ಮತ್ತು ಉದ್ಯಮಶೀಲತಾ ತರಬೇತಿ: ಅರ್ಜಿ ಆಹ್ವಾನ


ಬಳ್ಳಾರಿ,ಜು.07 : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಪ್ರಾಯೋಜಕತ್ವದಲ್ಲಿ, ಬಳ್ಳಾರಿಯ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ವತಿಯಿಂದ ಸ್ವಯಂ ಉದ್ಯೋಗ ಪ್ರಾರಂಭಿಸಲು ಆಸಕ್ತಿ ಹೊಂದಿರುವ ಪರಿಶಿಷ್ಟ ಪಂಗಡದ ಮಹಿಳಾ ಫಲಾನುಭವಿಗಳು ಹಾಗೂ ಯುವನಿಧಿ ಯೋಜನೆಯ ಫಲಾನುಭವಿಗಳಿಗಾಗಿ 24 ದಿನಗಳ ಉಚಿತ ‘ಫ್ಯಾಷನ್ ಡಿಸೈನಿಂಗ್’ ವಲಯಾಧಾರಿತ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಫ್ಯಾಷನ್ ಡಿಸೈನಿಂಗ್ ಕುರಿತು ಪ್ರಾಯೋಗಿಕ ಮತ್ತು ಸಿದ್ಧಾಂತ ತರಬೇತಿಯೊಂದಿಗೆ, ಉದ್ಯಮಶೀಲತೆಯ ಗುಣಲಕ್ಷಣಗಳು, ಸ್ವಯಂ ಉದ್ಯೋಗ ಆರಂಭಿಸುವ ಹಂತಗಳು, ಸರ್ಕಾರದ ಯೋಜನೆಗಳು, ಬ್ಯಾಂಕ್ ವ್ಯವಹಾರ, ಸಾಲ ಹಾಗೂ ಹಣಕಾಸು ಸೌಲಭ್ಯಗಳು, ಲೆಕ್ಕಪತ್ರ ನಿರ್ವಹಣೆ ಮತ್ತು ಯೋಜನಾ ವರದಿ ತಯಾರಿಕೆಯ ಬಗ್ಗೆ ಅನುಭವಿ ಉಪನ್ಯಾಸಕರಿಂದ ಮಾಹಿತಿ ನೀಡಲಾಗುವುದು.
ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವಲ್ಲಿ ಅಭ್ಯರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ಸಹಾಯವನ್ನು ಒದಗಿಸಲಾಗುವುದು.
*ಅರ್ಹತೆಗಳು:*
ವಯೋಮಿತಿಯು 18 ರಿಂದ 35 ವರ್ಷದೊಳಗಿನವರಾಗಿರಬೇಕು. ಕನಿಷ್ಠ ಎಸ್‌ಎಸ್‌ಎಲ್‌ಸಿ ತೇರ್ಗಡೆಯಾಗಿರಬೇಕು. ಪರಿಶಿಷ್ಟ ಪಂಗಡದ ಮಹಿಳೆಯರು ಹಾಗೂ ಯುವನಿಧಿ ಯೋಜನೆಯ ಆಸಕ್ತ ಫಲಾನುಭವಿಗಳು ಅರ್ಹರಾಗಿರುತ್ತಾರೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಜುಲೈ 15, 2026 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರದ ಕಟ್ಟಡ, ಹೊಸಪೇಟೆ ರಸ್ತೆ, ಬಳ್ಳಾರಿ - 583102. ಮೊ.9449226221/7483538942 ಗೆ ಸಂಪರ್ಕಿಸಬಹುದಾಗಿದೆ ಎಂದು ಸಿಡಾಕ್ ನ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜೆಇಇಯಲ್ಲಿ ಸಾಧನೆಗೈದ ಇಂದಿರಾಬಾಯಿಗೆ ಸನ್ಮಾನಪಂ. ಪಂಚಾಕ್ಷರ ಗವಾಯಿ ಪಂ. ಪುಟ್ಟರಾಜ ಗವಾಯಿಗಳ ಹಾಗೂ ಎಲಿವಾಳ ಸಿದ್ದಯ್ಯ ಸ್ವಾಮಿಗಳ 19ನೇ ವರ್ಷದ ಜಾತ್ರಾ ಮಹೋತ್ಸವ. ಟ್ರೀ ಪಾರ್ಕನ್ನು ಅತ್ಯುತ್ತಮವಾದ ಹೈಟೇಕ್ ಪ್ರವಾಸಿ ತಾಣವನ್ನಾಗಿ ಮಾಡಲಾಗುವುದು : ಸಿ.ಎಸ್.ನಾಡಗೌಡಕೆ.ಎಲ್.ಇ. ಸಂಸ್ಥೆಯ ನೂತನ ಕಾರ್ಯದರ್ಶಿಯಾಗಿ ಡಾ. ಸುನೀಲ ಜಲಾಲಪುರೆ ಸರ್ವಾನುಮತದಿಂದ ಆಯ್ಕೆಅಕ್ರಮ ಕಟ್ಟಡ ತೆರವು ವಿಚಾರ : ಮುಂದುವರಿದ ಧರಣಿ ಹೋರಾಟಸಮಗ್ರ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷರಣೆ : ಶೇ. ೬೯.೯೭ ರಷ್ಟು ಫಾರ್‍ಮಗಳ ಹಂಚಿಕೆಪ್ರವಾಸಿ ತಾಣದ ಫುಡ್ ಪ್ಲಾಜಾ" ನಿರ್ಮಾಣ ಕಾಮಗಾರಿಯ ಭೂಮಿ ಪೂಜೆ ನೆರವೇರಿಸಿ ಶಾಸಕ ಗವಿಯಪ್ಪ.ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರ ಪೋಟೋ  ಬ್ಯಾನರ್ ನಲ್ಲಿ ಇಲ್ಲ.ಶಾಸಕ ಗವಿಯಪ್ಪ ಅವರಿ ಎಚ್ಚರಿಕೆ ನೀಡಿದ ಮಾದಿಗ ಸಮುದಾಯ.ಉಚಿತ ಫ್ಯಾಷನ್ ಡಿಸೈನಿಂಗ್ ಮತ್ತು ಉದ್ಯಮಶೀಲತಾ ತರಬೇತಿ: ಅರ್ಜಿ ಆಹ್ವಾನಹಾಸನ ತುಮಕೂರು ಹಾಗೂ ಮಂಡ್ಯ ಜಿಲ್ಲೆಗಳಲ್ಲಿ  ಅಕ್ರಮ ಬೀಜ ದಾಸ್ತಾನು ಜಪ್ತಿ