Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿವಗಿರಿ ಸೊಸೈಟಿಯಿಂದ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ವಿತರಣೆ



ಬೆಳಗಾವಿ:   ಶೈಕ್ಷಣಿಕ ವರ್ಷದ ಆರಂಭದ ಅಂಗವಾಗಿ ಶಿವಗಿರಿ ಕೋ ಆಪ್ ಕ್ರೆಡಿಟ್ ಸೊಸೈಟಿ  ವತಿಯಿಂದ ಬಿಲ್ಲವರ ಅಸೋಸಿಯೇಶನ್ ಸಹಯೋಗದೊಂದಿಗೆ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಉಚಿತ ನೋಟ್ ಬುಕ್ ಮತ್ತು ಲೇಖನ ಸಾಮಗ್ರಿ ವಿತರಿಸಲಾಯಿತು.

ಈ ವೇಳೆ  ದಂತ ವೈದ್ಯರಾದ ಡಾ. ತೇಜಸ್ವಿನಿ ಹೊಂಗಲ್  ಅವರು ಮಾತನಾಡಿ,  ಸಾಮಾಜಿಕ ಜವಾಬ್ದಾರಿ ನಿಧಿಯ ಅಡಿಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಸಹ ಸಂಘವು ಈ ಜನಪರ ಕಾರ್ಯಕ್ರಮವನ್ನು ಆಯೋಜಿಸಿದೆ ಸಂತೋಷವಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಕ್ಷಣದ ಹಾದಿ ಸುಲಭವಾಗಲಿ ಎಂಬ ಉದ್ದೇಶದಿಂದ ಶಿವಗಿರಿ ಕ್ರೆಡಿಟ್ ಸೊಸೈಟಿಯು ನಿರಂತರ ಸೇವೆಯನ್ನು ಒದಗಿಸುತ್ತಾ ಬಂದಿದೆ.  ಸಂಘದ ಸದಸ್ಯರ ಮಕ್ಕಳು ಹಾಗೂ ಸ್ಥಳೀಯ ಶಾಲಾ-ಕಾಲೇಜುಗಳ ನೂರಾರು ವಿದ್ಯಾರ್ಥಿಗಳು ಆಗಮಿಸಿದಕ್ಕೆ ದನ್ಯವಾದ, ನಿಮ್ಮ ಭವಿಷ್ಯ ಉಜ್ವಲವಾಗಲೆಂದು ಹಾರೈಸಿದರು.

ಸೊಸೈಟಿಯ ಈ ಶ್ಲಾಘನೀಯ ಸಾಮಾಜಿಕ ಕಾರ್ಯಕ್ಕೆ ಸಾರ್ವಜನಿಕ ವಲಯದಿಂದ ಹಾಗೂ ವಿದ್ಯಾರ್ಥಿಗಳ ಪೋಷಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಶಿವಗಿರಿ ಸೊಸೈಟಿಯ ಅಧ್ಯಕ್ಷರಾದ ಸುಜನ್ ಕುಮಾರ್ , ಬಿಲ್ಲವ ಸಂಘದ ಅಧ್ಯಕ್ಷರಾದ ಸುನಿಲ್  ಆರ್ ಪೂಜಾರಿ ಹಾಗು ಸೊಸೈಟಿಯ ಕಟ್ಟಡ ಮಾಲಿಕರು ಹಾಗು ಉದ್ಯಮಿಗಳಾದ ಸುನಿಲ್ ನಾಯ್ಕ ರವರು  ವಿದ್ಯಾರ್ಥಿಗಳು  ಹಾಗು ಪೋಷಕರನ್ನು ಉದ್ದೇಶಿಸಿ ಮಾತನಾಡಿದರು.

ಈ ವೇಳೆ ಸಂಘದ  ಹಿತೈಷಿಗಳಾದ ಉಡುಪಿಯಲ್ಲಿ ಪ್ರಾಧ್ಯಾಪಕರಾಗಿ  ಕಾರ್ಯನಿರ್ವಹಿಸಿ ನಿವೃತ್ತರಾಗಿರುವ ಡಾ.  ಸುನೀತಾ ಬಂಗೇರರವರು 11000   ರೂ.  ದೇಣಿಗೆ ನೀಡಿದರು.

ನೂರಾರು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಪುಸ್ತಕಗಳನ್ನು ಪಡೆದುಕೊಂಡರು . ಸೊಸೈಟಿಯ ನಿರ್ದೇಶಕರುಗಳು ಹಾಗು ಸಿಬ್ಬಂದಿವರ್ಗ , ಬಿಲ್ಲವ ಸಂಘದ ಕಾರ್ಯಕಾರಿ ಮಂಡಳಿ ಸದಸ್ಯರು ಹಾಗು ಮಹಿಳಾ ಮಂಡಳಿಯ ಸದಸ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು. ವ್ಯವಸ್ಥಾಪಕರಾದ ಚಂದ್ರ ಎಚ್ .ಪೂಜಾರಿ ನಿರೂಪಿಸಿ ವಂದಿಸಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ