ನೇಸರಗಿ.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ (ರಿ) ಯೋಜನಾ ವತಿಯಿಂದ ಕೊಳದೂರ ಗ್ರಾಮದ ಬಸವನಗರ ಕಾರ್ಯಕ್ಷೇತ್ರದ ಶ್ರೀ ಚಿಗುರು ಶ್ರೀ ಕರೆಮ್ಮ ದೇವಿ ಜ್ಞಾನವಿಕಾಸ ಕೇಂದ್ರದಲ್ಲಿ ಮತ್ತು ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಉಚಿತ ಹೊಲಿಗೆ ತರಬೇತಿ ಕಾರ್ಯಕ್ರಮ ಉದ್ಘಾಟನೆ ನೆರವೇರಿತು.ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ್ಞಾನ ವಿಕಾಸ ಕೇಂದ್ರದ ಅಧ್ಯಕ್ಷರಾದ ಶ್ರೀಮತಿ ದ್ರಾಕ್ಷಾಯಿಣಿ ಮಜ್ಜಿಗಿ ಉದ್ಘಾಟಕರಾಗಿ ಗ್ರಾಮ ಪಂಚಾಯಿತಿ ಸಿಬ್ಬಂದಿಯಾದ ಶ್ರೀಮತಿ ಸುನಿತಾ ಅಗಸಿಮನೆ ಮುಖ್ಯ ಅತಿಥಿಗಳಾಗಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ನಿರ್ಮಲಾ ಕಡಕೋಳ, ತರಬೇತಿ ಶಿಕ್ಷಕರಾದ ಶ್ರೀಮತಿ ಶಶಿಕಲಾ ಪತ್ತಾರ, ತಾಲೂಕಿನ ಜ್ಞಾನವಿಕಾಸ ಸಮನ್ವೇದಿಕಾರಿ ಶ್ರೀಮತಿ ಶೈಲಾ ವಲಯದ ಮೇಲ್ವಿಚಾರಕರಾದ ಸೈಯದ ಅವರ ಸಮ್ಮುಖದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಜ್ಞಾನವಿಕಾಸ ಸಮನ್ವೇದಿಕಾರಿ ಶ್ರೀಮತಿ ಶೈಲಾ ಜಕ್ಕನವರ ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಹಾಗೂಆದ ಅದರ ಸದುಪಯೋಗ ಸ್ವ ಉದ್ಯೋಗ ಆಧಾರಿತ ತರಬೇತಿಗಳು ಸಣ್ಣ ಪ್ರಮಾಣದ ಕೈ ಕೆಲಸ ಟೈಲರಿಂಗ್ ತರಬೇತಿ ಇಂತಹ ಹತ್ತಾರು ಕಾರ್ಯಕ್ರಮಗಳನ್ನು ಕೈಗೊಂಡ ಪೂಜ್ಯ ವೀರೇಂದ್ರ ಹೆಗ್ಗಡೆ ಮಾತೃಶ್ರೀ ಹೇಮಾವತಿ ಅಮ್ಮನವರು ಬಡವರಿಗೆಂದೇ ಇಂತಹ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು ನಿಮ್ಮೆಲ್ಲರ ಭಾಗ್ಯ ಕಾರ್ಯಕ್ರಮಗಳ ಉಪಯೋಗ ಎಲ್ಲರೂ ಪಡೆದುಕೊಳ್ಳಬೇಕು ಎಂದರು.
ವಲಯದ ಮೇಲ್ವಿಚಾರಕರಾದ ಸೈಯದ ಮಾತನಾಡಿ ಯೋಜನೆ ಕಾರ್ಯಕ್ರಮಗಳ ಬಗ್ಗೆ ಸಮುದಾಯ ಅಭಿವೃದ್ಧಿ ಮಾಶಾಸನ ವಾತ್ಸಲ್ಯ, ಸುಜ್ಞಾನಿಧಿ ಶಿಷ್ಯವೇತನ ಜಲಮಂಗಳ ಆರೋಗ್ಯ ರಕ್ಷಾ ಸಂಪೂರ್ಣ ಸುರಕ್ಷಾ ಆರೋಗ್ಯ ವಿಮೆ ಬಗ್ಗೆ ಕುರಿತು ಮಾಹಿತಿ ನೀಡಿದರು
ಈ ಸಂದರ್ಭದಲ್ಲಿ ನಿರೂಪಣೆ ಸೇವಾ ಪ್ರತಿನಿಧಿ ಶ್ರೀಮತಿ ಲಕ್ಷ್ಮಿ ಮಾಸ್ತಮರಡಿ, ಸ್ವಾಗತ ಶ್ರೀಮತಿ ನಿರ್ಮಲಾ ತಿಗಡಿ , ವಿಕಾಸ ಕೇಂದ್ರದ ಸಂಘದ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಕಾರ್ಯಕ್ರಮ ಯಶಸ್ವಿಗೊಳಿಸಲಾಯಿತು.