LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

ಉಚಿತ ಸಮವಸ್ತ್ರ, ಬ್ಯಾಗ್ ವಿತರಣೆ ಕಾರ್ಯಕ್ರಮ

ಇಂಡಿ: ಶಾಲೆಯ ಸಮಗ್ರ ಬೆಳವಣಿಗೆಗೆ ಸಮುದಾಯದ ಪಾಲ್ಗೊಳ್ಳುವಿಕೆ ಅತ್ಯಗತ್ಯ. ಶಾಲೆ ಕೇವಲ ಸರಕಾರದ ಸ್ವತ್ತಲ್ಲ, ಅದು ಇಡೀ ಗ್ರಾಮ ಅಥವಾ ಜಗತ್ತಿನ ಭವಿ? ರೂಪಿಸುವ ಕೇಂದ್ರಬಿಂದು ಎಂದು ಎಸ್ ಡಿ ಎಂ ಸಿ ಅಧ್ಯಕ್ಷ ಅಲ್ಲಾಭಕ್ಷ ಮಕಾನದಾರ ಹೇಳಿದರು.
         ಮಂಗಳವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ ಉಚಿತ ಸಮವಸ್ತ್ರ, ಬ್ಯಾಗ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 
        ಗ್ರಾಮದ ರೈತ ಚಿದಾನಂದ ಉಪ್ಪಾರ ಅವರ ಮನವೊಲಿಸಿ ಉರ್ದು ಶಾಲೆಯ ಮಕ್ಕಳಿಗೆ ಉಚಿತ ಸಮವಸ್ತ್ರ, ಬ್ಯಾಗ್ ನೀಡುವಲ್ಲಿ ಶಾಲೆಯ ಶಿಕ್ಷಕ ಸಂತೋ? ಬಂಡೆ ಅವರ ಪಾತ್ರ ಅನನ್ಯ. ಈ ಮೂಲಕ ಮಕ್ಕಳ ಶಿಕ್ಷಣಕ್ಕೆ ಉತ್ತೇಜನ ನೀಡುತ್ತಿರುವದು ಸಂತಸ ತಂದಿದೆ ಎಂದು ಹೇಳಿದರು.
        ಉರ್ದು ಕ್ಲಸ್ಟರ್ ಸಿ ಆರ್ ಪಿ ಬಾದಶಾ ಚಪ್ಪರಬಂದ ಮಾತನಾಡಿ, "ನಮ್ಮ ಹಳ್ಳಿ, ನಮ್ಮ ಶಾಲೆ, ನಮ್ಮ ಮಕ್ಕಳು" ಎಂಬ ಮಮಕಾರ, ಜವಾಬ್ದಾರಿಯನ್ನು ಸಮುದಾಯ ಬೆಳೆಸಿಕೊಂಡಾಗ ಮಾತ್ರ ಸರಕಾರಿ ಶಾಲೆಗಳು ಜ್ಞಾನದ ದೇಗುಲಗಳಾಗಿ ಯಶಸ್ವಿಯಾಗಿ ಹೊರಹೊಮ್ಮಲು ಸಾಧ್ಯ ಎಂದು ಹೇಳಿದರು.
       ಕನ್ನಡ ಸಿ ಆರ್ ಪಿ ಮಂಜುನಾಥ ತೇಲಿ ಮಾತನಾಡಿ, ಸರಕಾರಿ ಶಾಲೆಗಳ ಬಲವರ್ಧನೆಗೆ ಸಮುದಾಯದ ಸಹಭಾಗಿತ್ವ ಮತ್ತು ಸಹಕಾರ ಅತ್ಯಗತ್ಯವಾಗಿದೆ ಎಂದು ಹೇಳಿದರು.
        ಮುಖ್ಯ ಶಿಕ್ಷಕ ಕೆ ಐ ಮಕಾನದಾರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶಿಕ್ಷಕ ಸಂತೋ? ಬಂಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಸಮವಸ್ತ್ರ, ಬ್ಯಾಗ್ ದಾನಿಗಳಾದ ಚಿದಾನಂದ ಉಪ್ಪಾರ, ರಾಮು ಝಳಕಿ, ಸುರೇಶ ದಳವಾಯಿ, ಸಂತೋ? ಉಪ್ಪಾರ ಅವರನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು. ಬಾ?ಸಾಬ ಅಂಗಡಿ, ಎಸ್ ಎಸ್ ಅರಬ, ಎನ್ ಬಿ ಚೌಧರಿ, ಎಸ್ ಪಿ ಪೂಜಾರಿ, ಅಫ್ತಾಬ್ ಮುಲ್ಲಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಎಲ್ಲ ಮಕ್ಕಳಿಗೆ ಸಮವಸ್ತ್ರ, ಬ್ಯಾಗ್ ವಿತರಿಸಲಾಯಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಂಕರಗೌಡ ಪಾಟೀಲಗೆ ಶಿಕ್ಷಣ ಸೇವಾರತ್ನ ಪ್ರಶಸ್ತಿ ಪ್ರದಾನಹತಾಷಭಾವನೆಯಿಂದ ನಡಹಳ್ಳಿ ಹೋರಾಟ-ಪ್ರಭುಗೌಡಕಂಟೆಪ್ಪಗೌಡ ಪಾಟೀಲ ನಿಧನವಿದ್ಯಾರ್ಥಿಗಳು ಕಲಿಕಾ ಮಟ್ಟ ಸುಧಾರಿಸಿಕೊಳ್ಳಬೇಕು: ಜಮಗೊಂಡಿಕೃಷಿ ಸಖಿ ಮಾಡ್ಯೂಲ್-ಗಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ*27 ದಿನಗಳಲ್ಲಿ 40 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚಾರ; ಎಐಸಿಸಿ ಸಂಯೋಜಕರಾಗಿ ಮೃಣಾಲ್ ಹೆಬ್ಬಾಳಕರ್ ಸಕ್ರಿಯ ಭಾಗಿ*ಕಾಗವಾಡ ಬರಪೀಡಿತ ಪಟ್ಟಿಯಿಂದ ಹೊರಕ್ಕೆ: ನಿರಂತರ ವಿದ್ಯುತ್ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರ ಬೃಹತ್ ರಸ್ತೆ ತಡೆ ಪ್ರತಿಭಟನೆಗುಡದಳ್ಳಿ ಗ್ರಾಮದಲ್ಲಿ ಅಂತರಾಷ್ಟಿçÃಯ ಹಾವು ಕಡಿತ ಜಾಗೃತಿ ದಿನ ಕಾರ್ಯಕ್ರಮಕಿತ್ತೂರು ಬಸ್ ನಿಲ್ದಾಣಕ್ಕೆ ಟ್ರ್ಯಾಕ್ಟರ್ ಅಡ್ಡಹಾಕಿ ಗ್ರಾಮಸ್ಥರು, ವಿದ್ಯಾರ್ಥಿಗಳ ಪ್ರತಿಭಟನೆರಾಮದುರ್ಗವನ್ನು ಸಂಪೂರ್ಣ ಬರಪೀಡಿತ ತಾಲೂಕು ಎಂದು ಘೋಷಿಸಲು ಸರ್ಕಾರಕ್ಕೆ ಮನವಿ