LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಅರ್ಜಿ ವಜಾಗೊಂಡರೂ ಸಿದ್ದರಾಮಯ್ಯ ವಿರುದ್ಧದ ಪಟ್ಟು ಸಡಿಲಿಸದ ಸ್ನೇಹಮಯಿ

ಮೈಸೂರು, ಫೆಬ್ರವರಿ 07: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ನೀಡಲು ಕರ್ನಾಟಕ ಹೈಕೋರ್ಟ್​ನ ಧಾರವಾಡ ಪೀಠ ನಕಾರ ವ್ಯಕ್ತಪಡಿಸಿದೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ಸಿಬಿಐಗೆ ನೀಡಬೇಕೆಂದು ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.

ನ್ಯಾಯಾಲಯದ ತೀರ್ಪು ಪ್ರಕಟವಾಗುತ್ತಿದ್ದಂತೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ದೂರುದಾರ ಸ್ನೇಹಮಯಿ ಕೃಷ್ಣ, ಕಾನೂನು ಹೋರಾಟ ಮುಂದುವರಿಸುತ್ತೇವೆ. ಹೈಕೋರ್ಟ್​ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಹೋಗುತ್ತೇನೆ. ಹೈಕೋರ್ಟ್ ಆದೇಶದ ಪ್ರತಿ ಸಿಕ್ಕಿ ಮೇಲೆ ಪರಿಶೀಲಿಸಿದ ಬಳಿಕ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸುತ್ತೇವೆ. ಲೋಕಾಯುಕ್ತ ತನಿಖೆ ಬಗ್ಗೆ ನಮಗೆ ನಂಬಿಕೆ ಇಲ್ಲ. ಪ್ರಕರಣದ ತನಿಖೆ ಸಿಬಿಐಗೆ ನೀಡುವಂತೆ ಹೋರಾಟ ಮುಂದುವರಿಯುತ್ತೆ ಎಂದರು.

ನ್ಯಾಯಾಲಯ ಯಾವ ವಿಚಾರವನ್ನು ಇಟ್ಟುಕೊಂಡು ವಜಾ ಮಾಡಿದೆ ಗೊತ್ತಿಲ್ಲ. ಆ ಅಂಶಗಳನ್ನು ನೋಡಿ ನಮ್ಮ ವಕೀಲರ ಜೊತೆ ಮಾತಾಡುತ್ತೇನೆ. ಸಿದ್ದರಾಮಯ್ಯ ಅವರು ಹೇಳಿದಂತೆ ತನಿಖೆ ನಡೆಯುತ್ತಿದೆ ಎಂಬ ಅನುಮಾನ ಇತ್ತು. ಅದಕ್ಕಾಗಿ ನಾವು ಸಿಬಿಐಗೆ ಹೋಗಬೇಕೆಂದು ಹೋರಾಟ ಮಾಡುತ್ತಿದ್ದೇವೆ. ಮುಂದಿನ ವಾರ ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುತ್ತೇವೆ. ಸಿಬಿಐಗೆ ನೀಡುವಂತೆ ನಾವು ಹೋರಾಟ ಮಾಡುತ್ತೇವೆ. ಸರ್ವೋಚ್ಚ ನ್ಯಾಯಾಲಯ ಸಿಬಿಐಗೆ ನೀಡುತ್ತದೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

ಯುದ್ಧದಲ್ಲಿ ಸೋಲು ಗೆಲುವು ಸಹಜ. ಇದುವರೆಗೆ ನಾವು ಗೆದ್ದಿದ್ವಿ ಈಗ ಸಣ್ಣ ಹಿನ್ನಡೆಯಾಗಿದೆ. ಇದರಿಂದ ನಾನು ವ್ಯತಿರಿಕ್ತವಾಗುವುದಿಲ್ಲ. ಈಗಲೂ ನನಗೆ ಲೋಕಾಯುಕ್ತದ ತನಿಖೆ ಮೇಲೆ ನಂಬಿಕೆ ಇಲ್ಲ ಎಂದು ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್