Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆಂಜನೇಯನ ಗುಡಿಯಿಂದ ಗ್ರಾಮದೇವಿ ಗುಡಿವರೆಗೆ ಉರುಳು ಸೇವೆ ಸಲ್ಲಿಸಿ ಸಂಕಲ್ಪ

ಶಾಸಕ ಜಿ. ಎಸ್.‌ ಪಾಟೀಲರಿಗೆ ಸಚಿವ ಸ್ಥಾನಕ್ಕಾಗಿ ಉರುಳು ಸೇವೆ

 

 

ನರೇಗಲ್:‌  ರೋಣ ಶಾಸಕ ಜಿ. ಎಸ್.‌ ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ನರೇಗಲ್‌ ಬ್ಲಾಕ್‌ ಕಾಂಗ್ರೆಸ್‌ ಹಾಗೂ ಅವರ ಅಭಿಮಾನಿಗಳು ಪಟ್ಟಣದ ಸಂತೆ ಬಜಾರದಲ್ಲಿರುವ ಆಂಜನೇಯ ದೇವಸ್ಥಾನದಿಂದ ಗ್ರಾಮದೇವಿ ದೇವಾಲಯದ ಆವರಣದವರೆಗೆ ಶನಿವಾರ ಉರುಳು ಸೇವೆ ಸಲ್ಲಿಸಿ, ದೇವರಲ್ಲಿ ಪ್ರಾರ್ಥಿಸಿ ಸಂಕಲ್ಪ ಮಾಡಿದರು.

          ಈ ವೇಳೆ ಮಾತನಾಡಿದ ನರೇಗಲ್‌ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಶರಣಪ್ಪ ಬೆಟಗೇರಿ, ಜಿಲ್ಲೆಯ ಹಿರಿಯ ಶಾಸಕರಾಗಿ ಎಲ್ಲರನ್ನೂ ಸರಿಸಮನಾಗಿ ಕರೆದುಕೊಂಡು ಹೋಗಿ, ಒಂದೂ ಕಪ್ಪು ಚುಕ್ಕೆ ಇಲ್ಲದಂತೆ ರಾಜಕಾರಣ ಮಾಡಿದ್ದಾರೆ ಹಾಗೂ ಕ್ಷೇತ್ರದ ತುಂಬ ಅನೇಕ ಅಭಿವೃದ್ಧಿ ಕಾರ್ಯಗಳನ್ನು ನಿರಂತರವಾಗಿ ಕೈಗೊಂಡಿದ್ದಾರೆ. ಇಂದಿರಾಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿದ ಅವರ ಹಿರಿತನ ಹಾಗೂ ಪಕ್ಷಕ್ಕಾಗಿ ದುಡಿದ ಅವರ ಸೇವೆಯನ್ನು ಗುರುತಿಸಿ ಸಚಿವ ಸ್ಥಾನ ನೀಡುವ ಮೂಲಕ ಗೌರವಿಸಬೇಕು. ಇಲ್ಲವಾದರೆ ಹೋರಾಟ ಅನಿವಾರ್ಯ ಆಗುತ್ತದೆ ಎಂದರು.

          ಉರುಳು ಸೇವೆ ಮಾಡಿ ಮಾತನಾಡಿದ ಯುವ ಮುಖಂಡರಾದ ಸದ್ದಾಂ ನಶೇಖಾನ ಹಾಗೂ ಗುಡದಪ್ಪ ಗೋಡಿ,  ನೆಲ-ಜಲ ಅಭಿವೃದ್ಧಿ, ರೈತರ ಭೂಮಿ ಹಿತ ಕಾಪಾಡಲು ಕ್ಷೇತ್ರಾದ್ಯಂತ ಸಾಕಷ್ಟು ಕೆರೆಗಳನ್ನು ನಿರ್ಮಿಸಿ ಸಾವಿರ ಕೆರೆಗಳ ಸರದಾರ ಎಂದು ಹೆಸರು ಮಾಡಿದ್ದಾರೆ. ಯುವಕರಿಗೆ ಉದ್ಯೋಗಗಳನ್ನು ಸೃಷ್ಟಿಸಿ ಜೀವನ ಕಲ್ಪಿಸಿಕೊಟ್ಟಿದ್ದಾರೆ. ದೀನ ದಲಿತರಿಗೆ, ಹಿಂದುಳಿದ ವರ್ಗಗಳ ಜನರಿಗೆ ಶ್ರಮಿಕರಿಗೆ ಬದುಕು ಇಟ್ಟುಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದಾರೆ. ಇಂತಹ ನಾಯಕರಿಗೆ ಸಚಿವ ಸ್ಥಾನ ನೀಡದೆ ಅನ್ಯಾಯ ಮಾಡುತ್ತಾ ಬರಲಾಗಿದೆ. ಈಗಲಾದರು ಸಚಿವಸ್ಥಾನ ನೀಡಿ ಸರಿಪಡಿಸಬೇಕು. ಅವರಿಗೆ ಸಚಿವ ಸ್ಥಾನ ಸಿಗಲಿ ಎಂದು ನಮ್ಮೂರಿನ ದೇವರುಗಳಿಗೆ ಹರಕೆ ಹೊತ್ತು ಉರುಳು ಸೇವೆ ಮಾಡಿದ್ದೇವೆ ಎಂದರು.

          ಈ ವೇಳೆ  ನಿಂಗನಗೌಡ ಲಕ್ಕನಗೌಡ್ರ, ವೀರನಗೌಡ ಪಾಟೀಲ, ಅಲ್ಲಾಬಕ್ಷಿ ನದಾಫ್‌, ಸಂತೋಷ ಹನಮಸಾಗರ, ಕಳಕಪ್ಪ ಅಬ್ಬಿಗೇರಿ,  ಶೇಖಪ್ಪ ಜುಟ್ಲದ,  ಎ. ಸಿ. ಪಾಟೀಲ,  ಕಳನಗೌಡ ಪೋಲಿಸ್‌ ಪಾಟೀಲ, ಕುಮಾರಸ್ವಾಮಿ ಕೋರಧಾನ್ಯಮಠ, ಶೇಖಪ್ಪ ಕೆಂಗಾರ, ಎ. ಎ. ನವಲಗುಂದ, ಸೋಮುನೌಡ ಲಕ್ಕನಗೌಡ್ರ , ಬಾಳಪ್ಪ ಸೋಮಗೊಂಡ, ಫಕ್ರುಸಾಬ್‌ ರೇವಡಿಗಾರ, ಮಹ್ಮದಗೌಸ ಹೊಸಮನಿ, ಮಾಸಪ್ಪ ಕೊಂಡಿ,  ವೀರಪ್ಪ ಹಾಲನ್ನವರ, ವೀರಪ್ಪ ಜೋಗಿ, ಆಶೀಫ್‌ ಹೊಸಮನಿ, ಸುರೇಶ ಹುನಗುಂದ, ದಾದಾಸಾಬ ನದಾಫ್‌, ವೀರೇಶ ಪಮ್ಮಾರ, ಪ್ರಕಾಶ ಪಾದಗಟ್ಟಿ ಇದ್ದರು.ನರೇಗಲ್ ಪಟ್ಟಣದ‌ಲ್ಲಿ ಶಾಸಕ ಜಿ. ಎಸ್.‌ ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ಸಂತೆ ಬಜಾರದಲ್ಲಿರುವ ಆಂಜನೇಯ ದೇವಸ್ಥಾನದಿಂದ ಗ್ರಾಮದೇವಿ ದೇವಾಲಯದ ಆವರಣದವರೆಗೆ ಶನಿವಾರ ಉರುಳು ಸೇವೆ ಸಲ್ಲಿಸಿದರು

 ನರೇಗಲ್ ಪಟ್ಟಣದ‌ಲ್ಲಿ ಶಾಸಕ ಜಿ. ಎಸ್.‌ ಪಾಟೀಲ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು   ಸಂತೆ ಬಜಾರದಲ್ಲಿರುವ ಗ್ರಾಮದ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ