ಸಿಎಂ ಸಿದ್ದರಾಮಯ್ಯ ಅನುಮತಿ ಇಲ್ಲದೇ ಲಾಠಿ ಚಾರ್ಜ್ ಆಗಿದ್ದು ಹೇಗೆ? ಹಾಗೆ ಆಗಿದ್ದೇ ನಿಜವಾದರೆ ಕೂಡಲೇ ಆ ಅಧಿಕಾರಿಯನ್ನು ಅಮಾನತು ಮಾಡಿ ಎಂದು ಜಯಮೃತ್ಯುಂಜಯ ಶ್ರೀ ಆಗ್ರಹಿಸಿದ್ದಾರೆ. ಜತೆಗೆ, ನಿಮ್ಮ ಊರಲ್ಲಿ ರಸ್ತೆ ತಡದು ಹೋರಾಟ ಮಾಡಿ ಎಂದು ಎಲ್ಲಾ ಲಿಂಗಾಯತ ಸಮುದಾಯದವರಿಗೆ ಕರೆ ನೀಡಿದ್ದಾರೆ.
ಇತ್ತ ಲಾಠಿ ಚಾರ್ಜ್ ಸಮರ್ಥಿಸಿಕೊಂಡಂತೆ ಮಾತನಾಡಿರುವ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್, ಗಲಾಟೆ ಮಾಡುವ ಉದ್ದೇಶದಿಂದಲೇ ಹೋರಾಟಗಾರರು ಬಂದಿದ್ದರು ಎಂದಿದ್ದಾರೆ.