Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರ ಪುರಸ್ಕೃತ ಯೋಜನೆಗಳ ಪರಿಣಾಮಕಾರಿ ಅನುಷ್ಟಾನಕ್ಕೆ  ಜಿ.ಪಂ. ಸಿಇಓ ಸೂಚನೆ

ಗದಗ ಜೂನ್ 13: ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಅನುಷ್ಟಾನ ಪರಿಣಾಮಕಾರಿಯಾಗಿ ಮಾಡಬೆಕು. ನಿಗದಿಪಡಿಸಿದ ಗುರಿಗೂ ಅಧಿಕ ಸಾಧನೆ ಇಲಾಖೆ ಅಧಿಕಾರಿಗಳಿಂದ ನಿರೀಕ್ಷಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್ ತಿಳಿಸಿದರು.

ಗುರುವಾರ ನಗರದ ಜಿಲ್ಲಾಡಳಿತ ಭವನದ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕೇಂದ್ರ ಪುರಸ್ಕøತ ಯೋಜನೆಗಳ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ತೋಟಗಾರಿಕೆ ಇಲಾಖೆಯಲ್ಲಿ ನರೇಗಾ ಕಾಮಗಾರಿ ಕೈಗೊಳ್ಳಲು ಸಾಕಷ್ಟು ವಿಫುಲ ಅವಕಾಶ ಒದಗಿಸಲಾಗಿದೆ. ಜಿಲ್ಲೆಯ ರೈತರಿಗೆ ತೋಟಗಾರಿಕೆ ಬೆಳೆಗಳನ್ನು ಬೆಳೆದು ಇರುವ ರಿಯಾಯತಿ ಸೌಲಭ್ಯಗಳನ್ನು ಹಾಗೂ ಸಹಾಯಧನವನ್ನು ಸರಿಯಾಗಿ ತಲುಪಿಸಬೆಕು. ನರೇಗಾ ಯೋಜನೆಯಡಿ ತೋಟಗಾರಿಕೆ ಮಾಡುವವರಿಗೆ ಪ್ರೋತ್ಸಾಹ ನೀಡುವ ಮೂಲಕ ರೈತರನ್ನು ಸ್ವಾವಲಂಬಿಗಳಾಗಿಸುವಲ್ಲಿ ಇಲಾಖೆಯ ಅಧಿಕಾರಿಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿದರು.

ಅದೇ ತರಹ ಕೃಷಿ ಇಲಾಖೆ, ರೇಶ್ಮೆ ಇಲಾಖೆ, ಮೀನುಗಾರಿಕಾ ಇಲಾಖೆ, ಪಶು ಸಂಗೋಪನಾ ಇಲಾಖೆಯ  ಅಧಿಕಾರಿಗಳೂ ಸಹ ಕೇಂದ್ರ ಪುರಸ್ಕøತ ಯೋಜನೆಗಳ ಅನುಷ್ಟಾನದಲ್ಲಿ ವಿಳಂಬ ಮಾಡದೇ ಗುರಿಗೂ ಅಧಿಕ ಸಾಧನೆ ಮಾಡುವಂತೆ ಸೂಚಿಸಿದ ಅವರು ನರೇಗಾ ಕಾಮಗಾರಿಗಳನ್ನು ಸಂಪೂರ್ಣ ಸದ್ಭಳಕೆ ಮಾಡಿಕೊಂಡು ದುಡಿಯುವ ಕೈಗಳಿಗೆ ಕೆಲಸ ನೀಡಿ ಕಾರ್ಮಿಕ ವರ್ಗದ ಆರ್ಥಿಕಾಭಿವೃದ್ಧಿ ಸಾದಿಸುವುದರೊಂದಿಗೆ ಸ್ವಯಂ ಉದ್ಯೋಗಕ್ಕೂ ಇಲಾಖೆಯ ಯೋಜನೆಗಳು ಪೂರಕವಾಗಿವೆ . ಅವುಗಳನ್ನು ಅರ್ಹರೆಲ್ಲರಿಗೂ ತಲುಪಿಸುವ ಕಾರ್ಯ ಇಲಾಖಾ ಅಧಿಕಾರಿಗಳ ಕರ್ತವ್ಯವೆಂದರು.

ಜಿಲ್ಲಾ ಪಂಚಾಯತ್‍ದೊಂದಿಗೆ ಸಂಬಂಧಿತ ಇಲಾಖೆಯ ಅಧಿಕಾರಿಗಳು ಸಮನ್ವಯ ಸಾಧಿಸಿ ಕ್ರಿಯಾ ಯೋಜನೆ ತಯಾರಿಯಿಂದ ಹಿಡಿದು ಕಾಮಗಾರಿ ಅನುಷ್ಟಾನದವರೆಗೂ ಒಟ್ಟುಗೂಡಿ ಕೆಲಸ ನಿರ್ವಹಿಸಬೇಕು. ವಿನಾಕಾರಣ ಬೇರೆ ಇಲಾಖೆಗಳನ್ನು ದೂಷಿಸದೇ ಸಮನ್ವಯದಿಂದ ಕೆಲಸ ನಿರ್ವಹಿಸುವಲ್ಲಿ ಆದ್ಯತೆ ವಹಿಸಬೇಕು ಎಂದರು.

ಮುಂಗಾರು ಹಂಗಾಮು ಆರಂಭವಾಗಿದ್ದು ರೈತಬಾಂಧವರಿಗೆ ಬಿತ್ತನೆಗೆ ಅಗತ್ಯವಿರುವ ರಸಗೊಬ್ಬರ , ಬೀಜಗಳನ್ನು ಸಮರ್ಪಕವಾಗಿ ಪೂರೈಕೆ ಮಾಡುವಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು ಗಮನ ಹರಿಸಬೇಕು. ಅದೇ ತರಹ ಕೇಂದ್ರ ಪುರಸ್ಕøತ ಯೋಜನೆಗಳ ಅನುಷ್ಟಾನದಲ್ಲಿಯೂ ಆಸಕ್ತಿಯಿಂದ ಕೆಲಸ ಮಾಡುವಂತೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶಶಿಕಾಂತ ಕೋಟೆಮನಿ, ಪಶು ಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ. ಹುಲಗಣ್ಣವರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಸಿಬ್ಬಂದಿಗಳು ಹಾಜರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ