LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ರಾಮದುರ್ಗದಲ್ಲಿ ಗಾಂಧಿ ಜಯಂತಿ: "ಕೋಮುವಾದದ ಅಪಾಯಗಳು ಮತ್ತು ಸವಾಲುಗಳು" ವಿಚಾರ ಸಂಕಿರಣ


ರಾಮದುರ್ಗ: ಪಟ್ಟಣದ ಕಾರ್ಮಿಕ ಕಚೇರಿಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಕೋಮುವಾದ ಅಪಾಯಗಳು & ಸವಾಲಗಳು ವಿಚಾರ ಸಂಕಿರಣ ಕಾರ್ಯಕ್ರಮವನ್ನು ಸೌಹಾರ್ದ ಕರ್ನಾಟಕ ವೇದಿಕೆ ಮತ್ತು ಭಗತಸಿಂಗ್ ಕ್ರಾಂತಿ ವೇದಿಕ ಆಶ್ರಯದಲ್ಲಿ ಆಯೋಜಿಸಲಾಗಿತ್ತು.
ವಿಚಾರಣ ಸಂಕೀರ್ಣ ಕಾರ್ಯಕ್ರಮ ಉದ್ದೇಶಿಸಿ ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಮುಖಂಡ ಎಸ್.ಬಿ. ಸೊಪ್ಪಿನ ಅವರು ಮಾತನಾಡಿ, ಕೋಮುವಾದದ ಅಪಾಯಗಳು ಮತ್ತು ಸವಾಲುಗಳು ಎಂಬುದು ವಿಚಾರ ಸಂಕಿರಣದ ಪ್ರಮುಖ ವಿಷಯವಾಗಿದ್ದು, ಸಮಾಜದಲ್ಲಿ ಕೋಮು ಸೌಹಾರ್ದತೆ, ಸಹಬಾಳ್ವೆ ಹಾಗೂ ಸಂವಿಧಾನದ ಆಶಯಗಳನ್ನು ಕಾಪಾಡುವ ಕುರಿತು ಚರ್ಚೆ ನಡೆಯಬೇಕಾಗಿದೆ ಎಂದರು.
ಇಂದಿನ ಸಂದರ್ಭದಲ್ಲಿ ಸಮಾಜದಲ್ಲಿ ಉಂಟಾಗುತ್ತಿರುವ ಕೋಮು ವಿಭಜನೆಯಂತಹ ಸವಾಲುಗಳು, ಅವುಗಳಿಂದ ಸಮಾಜದ ಮೇಲೆ ಬೀರುವ ಪರಿಣಾಮಗಳು ಹಾಗೂ ಶಾಂತಿ-ಸೌಹಾರ್ದತೆಯನ್ನು ಉಳಿಸಿಕೊಳ್ಳುವ ಅಗತ್ಯವಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾರ್ಮಿಕ ಮುಖಂಡ ಜಿ.ಎಂ. ಜೈನೆಖಾನ ಮಾತನಾಡಿ, ಮಹಾತ್ಮ ಗಾಂಧೀಜಿಯವರ ಸತ್ಯ ಮತ್ತು ಅಹಿಂಸೆಯ ತತ್ವಗಳನ್ನು ನೆನಪಿಸಿಕೊಳ್ಳುವುದರ ಜೊತೆಗೆ, ಸಮಾಜದಲ್ಲಿ ಶಾಂತಿ, ಸಹೋದರತ್ವ ಮತ್ತು ಸೌಹಾರ್ದತೆಯನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ವಿಚಾರ ಸಂಕಿರಣಗಳು ಮೇಲಿಂದ ಮೇಲೆ ನಡೆಯಬೇಕು. ಗಾಂಧೀಜಿಯವರ ಸಂದೇಶವನ್ನು ಕೇವಲ ಜಯಂತಿ ಆಚರಣೆಗೆ ಸೀಮಿತಗೊಳಿಸದೆ, ನಮ್ಮ ದಿನನಿತ್ಯದ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಭಗತಸಿಂಗ್ ಕ್ರಾಂತಿ ವೇದಿಕೆ ಸಾಮಾಜಿಕ ಕಾರ್ಯಯಲ್ಲಿ ತೊಡಗಿರುವ ಸಂಘಟನೆ ಮುಖಂಡರಿಗೆ ಸನ್ಮಾನಿಸಿದರು. ಈ ಸಂಧರ್ಭದಲ್ಲಿ ದಲಿತ ಮುಖಂಡ ಬಿ.ಆರ್. ದೊಡಮನಿ, ರಾಜಶೇಖರ ಶೇಲೂಡಿ, ಶಶಿಕಾಂತ್ ನೆಲ್ಲೂರ್, ಎಸ್.ಜಿ. ಚಿಕ್ಕನರಗುಂದ ಮಾತನಾಡಿದರು. ಸಭೆಯಲ್ಲಿ ಭಗತ್ ಸಿಂಗ್ ಕ್ರಾಂತಿ ವೇದಿಕೆಯ ಮಹಮದ್ ಬೆಣ್ಣಿ, ಮುದಸರ್ ಯಾದವಾಡ, ಅನ್ವರ್ ತಾಂಬೋಳಿ, ಸಮೀರ್ ಮಹಾತ್, ಅಬೂಬಕ್ಕರ್ ಶೇಖ, ಮಕ್ತುಮ್ ತಾಂಬೋಲಿ, ಕಾರ್ಮಿಕ ಸಂಘದ ಕೇಶವ್ ದಾಸರ, ತುಳಸಮ್ಮ್ ಮಾಳದಕರ್, ಮಾರುತಿ ಮುದಗುರಿ, ಶಿದ್ಲಿಂಗಪ್ಪ ಸಿಂಗಾರಗೊಪ್ಪ ಸೇರಿದಂತೆ ಇತರರು ಇದ್ದರು. ನಾಗಪ್ಪ ಸಂಗೊಳ್ಳಿ ಸ್ವಾಗತಿಸಿ, ವಂದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವನ್ಯಜೀವಿಗಳಿಗೂ ಮಾನವರಂತೆ ಮನಸ್ಸಿದೆ, ಅವುಗಳನ್ನು ಪ್ರೀತಿಸೋಣ: ಡಿಎಫ್‌ಒ ಮಲ್ಲಿನಾಥ ಕುಸನಾಳದೈನಂದಿನ ಜೀವನದಲ್ಲಿ ಪ್ರಾಣಾಯಾಮದಿಂದ ಆರೋಗ್ಯ ಮತ್ತು ಮನಃಶಾಂತಿ: ಅಮೃತಾಂನಂದ ಮಹಾಸ್ವಾಮಿಗಳ ಬೋಧನೆಇಂಡಿ: ಶಾಸಕ ಯಶವಂತರಾಯಗೌಡ ಪಾಟೀಲ ಅವರ 59ನೇ ಜನ್ಮದಿನದ ನಿಮಿತ್ತ ಉಚಿತ ಆರೋಗ್ಯ ತಪಾಸಣಾ ಶಿಬಿರಕೊಪ್ಪಳದಲ್ಲಿ ಶ್ರದ್ಧಾ-ಭಕ್ತಿಯಿಂದ ನಡೆದ ಸಾಮೂಹಿಕ ಪಿಂಡ ಪ್ರದಾನ ಹಾಗೂ ಪಿತೃ ತರ್ಪಣಬಳ್ಳಾರಿಯ ಶ್ರೀ ಸಣ್ಣದುರ್ಗಮ್ಮ ದೇವಸ್ಥಾನದಲ್ಲಿ  11ನೇ ವರ್ಷದ ಶರನ್ನವರಾತ್ರಿ ಉತ್ಸವ ಇಂದು ಹನುಮಾನ್ ದೇವಸ್ಥಾನದ ಕಳಸಾರೋಹಣ ಕಾರ್ಯಕ್ರಮಮೂಳೆಯ ಗುಣಮಟ್ಟ ಕಡಿಮೆ ಇರುವ ರೋಗಿಗಳಲ್ಲಿ ಆಂಕರ್‌ರಹಿತ ರಿಪೇರ್‌ಗೆ ನೆರವಾಗುವ ಸಾಧನ ಅಭಿವೃದ್ಧಿಹೊಸಪೇಟೆಯಲ್ಲಿ ಪಂಡಿತ್ ಪುಟ್ಟರಾಜ ಗವಾಯಿಗಳ ಪುಣ್ಯಸ್ಮರಣೆಗ್ರಾಮೀಣ ಕ್ರೀಡೆಗಳು ನಮ್ಮ ನಾಡಿನ ಸಂಸ್ಕೃತಿ ಮತ್ತು ಪರಂಪರೆಯ ಸಂಕೇತ: ಶಾಸಕ ವಿಶ್ವಾಸ ವೈದ್ಯಸಮಾಜದ ಓರೆಕೋರೆಗಳನ್ನು ತಿದ್ದುವ ವರದಿಗಾರರು ಶ್ರೇ?ರು: ಧರೆಪ್ಪ ಸಾಂಗ್ಲೀಕರ