Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರತಿಯೊಬ್ಬರಲ್ಲೂ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಿ  : ಡಾ. ಬಿ.ಕೆ. ಸುಂದರ್ 

ಬಳ್ಳಾರಿ, ಜ01:: ಆರೋಗ್ಯವೇ ಮಹಾಭಾಗ್ಯ ಎನ್ನುವಂತೆ ಆರೋಗ್ಯವಿದ್ದಲ್ಲಿ ಎಲ್ಲಾ ಕೆಲಸ ಕಾರ್ಯಗಳನ್ನು ಸುಸೂತ್ರವಾಗಿ ನಡೆಸಿಕೊಂಡು ಹೋಗಬಹುದು ಕಾರಣ ಪ್ರತಿಯೊಬ್ಬರೂ ಆರೋಗ್ಯ ಸಂರಕ್ಷಣೆಗಾಗಿ ಹೆಚ್ಚಿನ ಆದ್ಯತೆ ನೀಡಬೇಕಾದ ಅನಿವಾರ್ಯತೆ ಇದೆ  ಎಂದು ಡಾ. ಬಿ.ಕೆ. ಸುಂದರ್  ತಿಳಿಸಿದ್ದಾರೆ‌.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಸದಸ್ಯರುಗಳಿಗೆ 'ಆರೋಗ್ಯ ಮಹತ್ವ'ದ ಕುರಿತು‌ ಅವರು ಮಂಗಳವಾರ ಮಾತನಾಡಿ, ಪ್ರತಿಯೊಬ್ಬರೂ ದೈಹಿಕ ಚಟುವಟಿಕೆಗಳಲ್ಲಿ ಕಡ್ಡಾಯವಾಗಿ ಪಾಲ್ಗೊಂಡು ಆರೋಗ್ಯವಂತರಾಗಬೇಕು, ಇತ್ತೀಚಿನ ದಿನಗಳಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಮಯ - ಹಣ ಮತ್ತು ಜ್ಞಾನವನ್ನು ವಿನಿಯೋಗ ಮಾಡಲಾಗುತ್ತಿದೆ. ಆರೋಗ್ಯದ ಕಡೆ ಪ್ರತಿಯೊಬ್ಬರೂ ಗಮನ ನೀಡುತ್ತಿದ್ದಾರೆ ಎಂದರು.
ಆರೋಗ್ಯ ಸುಧಾರಣೆಗಾಗಿ ಪ್ರೇರಣೆ ನೀಡುವ ವ್ಯವಸ್ಥೆ ನಿರ್ಮಾಣವಾಗಿದೆ. ಆಹಾರ ಪದ್ಧತಿಯೂ ಬದಲಾಗಿದೆ. ಆದರೆ, ಆರೋಗ್ಯ ಸುಧಾರಣೆಯಲ್ಲಿ ನಿರಂತರತೆಯ ಅಗತ್ಯವಿದೆ ಎಂದರು.
ಒತ್ತಡ, ಜೀವನಶೈಲಿ, ಆಹಾರ, ಇನ್ನಿತರೆಗಳ ಕಾರಣ 'ಒಬೆಸಿಟಿ' - ಹೃದ್ರೋಗ ; ಡಯಾಬಿಟಿಸ್ ಹೀಗೇ ಆರೋಗ್ಯ ಸಮಸ್ಯೆಗಳು ಅನೇಕರನ್ನು ಸಹಜವಾಗಿಯೇ ಕಾಡುತ್ತಿವೆ. ಈ ದಿನಗಳಲ್ಲಿ ಆರೋಗ್ಯ ಸುಧಾರಣೆಗೆ ದೈಹಿಕ ಶ್ರಮ ಅಗತ್ಯ ಎಂದರು.
ಬಳ್ಳಾರಿ ‌ಸೈಕ್ಲಿಸ್ಟ್ ಅಂಡ್ ರನ್ನರ್ಸ್  ಫೌಂಡೇಶನ್ ಆಗಸ್ಟ್ ‍2ರ ಭಾನುವಾರ ಏರ್ಪಡಿಸಿರುವ 'ಸ್ಟೀಲ್‌ ಸಿಟಿ ರನ್'' ನಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು ಎಂದರು.
ಅಲ್ಲದೇ, ಡಾ.ಬಿ.ಕೆ‌. ಸುಂದರ್ ಅವರು, ಸಿಪಿಆರ್ ನಲ್ಲಿ ಲುಕ್,‌ ಲಿಸನ್  ಅಂಡ್ ಫೀಲ್ ಮಾಡಬೇಕು. ಎದೆಯ ಮಧ್ಯಭಾಗದಲ್ಲಿ ಎದೆಯನ್ನು ಒತ್ತುವ ಕುರಿತು ಜಾಗೃತಿ ಮೂಡಿಸಿದರು. 
ಬಳ್ಳಾರಿ ‌ಸೈಕ್ಲಿಸ್ಟ್ ಅಂಡ್ ರನ್ನರ್ಸ್  ಫೌಂಡೇಶನ್ ನ ಡಾ. ರವಿಶಂಕರ್ ಸಜ್ಜಲ್ ಅವರು, ದೈಹಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ಪ್ರತಿಯೊಬ್ಬರೂ ಆರೋಗ್ಯ ಸುಧಾರಣೆ ಮಾಡಿಕೊಳ್ಳಬೇಕು ಎಂದರು.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಅವ್ವಾರು ಮಂಜುನಾಥ್ ಹಾಗೂ ಗೌರವ ಕಾರ್ಯದರ್ಶಿಗಳಾದ ಕೆ. ಸಿ. ಸುರೇಶಬಾಬು ಅವರು‌‌ ಡಾ. ಬಿ.ಕೆ. ಸುಂದರ್ ಅವರನ್ನು ಗೌರವಿಸಿದರು.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಹಿರಿಯ ಉಪಾಧ್ಯಕ್ಷರಾದ ಎಸ್. ದೊಡ್ಡನಗೌಡ, ಉಪಾಧ್ಯಕ್ಷರಾದ ಸೊಂತ ಗಿರಿಧರ್, ಜಂಟಿ ಕಾರ್ಯದರ್ಶಿಗಳಾದ ಡಾ. ಮರ್ಚೇಡ್ ಮಲ್ಲಿಕಾರ್ಜುನಗೌಡ ಹಾಗೂ ವಿ. ರಾಮಚಂದ್ರ, ಖಜಾಂಚಿಗಳಾದ ಸಿ.ಎಸ್. ಸತ್ಯನಾರಾಯಣ, 
ಬಳ್ಳಾರಿ ‌ಸೈಕ್ಲಿಸ್ಟ್ ಅಂಡ್ ರನ್ನರ್ಸ್  ಫೌಂಡೇಶನ್ ನ ಪ್ರಶಾಂತ ಶಾರಡ, ಸಂದೀಪ್ ಶರ್ಮ, ಎ.ಕೆ. ವೆಂಕಟೇಶ್ ಹಾಗೂ‌‌ ವಿವಿಧ‌ ಕಮಿಟಿಗಳ ಚೇರ್ಮೆನ್ ಗಳು,‌‌‌ ವಿಶೇಷ ಆಹ್ವಾನಿತರು, ವಿಶೇಷ ಸಮನ್ವಯ ಸಮಿತಿ ಸದಸ್ಯರು ಸೇರಿದಂತೆ ಸಂಸ್ಥೆಯ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ