LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Politics News

ಪ್ರಜ್ವಲ್ ಫಾರಿನ್‌ಗೆ ಹೋಗೋ ಮೋದಲು ಇವ್ರೇನು ಕತ್ತೆ ಕಾಯ್ತಿದ್ರಾ?

ಕಲಬುರಗಿ,24: ಪ್ರಜ್ವಲ್​ ರೇವಣ್ಣ ಪಾಸ್‌ಪೋರ್ಟ್​ ರದ್ಧತಿಗಾಗಿ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಎರಡನೇ ಬಾರಿ ಪತ್ರ ಬರೆದ ವಿಚಾರವಾಗಿ ಕಲಬುರಗಿ ಏರ್‌ಪೋರ್ಟ್‌ನಲ್ಲಿ ಗುರುವಾರ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿದರು. ಕಲಬುರಗಿಯಲ್ಲಿ ಈಶಾನ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ್​ ಪರ ಮತಯಾಚಿಸಲು ಸಚಿವರು ಬಂದಿದ್ದರು.

"ಪ್ರಜ್ವಲ್​ ರೇವಣ್ಣ ಪೆನ್ ಡ್ರೈವ್ ಹೊರಬಂದಿದ್ದು ಏಪ್ರಿಲ್ 21ರಂದು. ಅವರು ವಿದೇಶಕ್ಕೆ ಹೋಗಿದ್ದು ಏ.27ರಂದು. ಹಾಗಾದರೆ ಅಲ್ಲಿಯವರೆಗೆ ಇವರೇನು ಕತ್ತೆ ಕಾಯುತ್ತಿದ್ದರಾ?. ಪಾಸ್‌ಪೋರ್ಟ್​ ರದ್ದುಪಡಿಸಲು ಅದರದೇ ಆದ ಪ್ರಕ್ರಿಯೆಗಳಿವೆ. ಡಿಪ್ಲೋಮ್ಯಾಟ್ ಪಾಸ್‌ಪೋರ್ಟ್ ರದ್ದತಿಗೆ ನ್ಯಾಯಾಲಯದಲ್ಲಿ ಕೇಸ್ ಫೈಲ್ ಮಾಡಲಾಗಿದೆ. ಹೊರದೇಶಕ್ಕೆ ಹೋದವರನ್ನು ತರುವುದಕ್ಕೆ ಅದರದೇ ಆದ ಪ್ರೊಸೆಸ್ ಇದೆ. ಭಾರತ ಸರಕಾರ ಕಾನೂನು ಪ್ರಕಾರ ಏನು ಮಾಡಬೇಕೋ ಮಾಡುತ್ತಿದೆ. ರಾಜ್ಯ ಸರಕಾರಕ್ಕೆ ಸಹಕಾರ ನೀಡಲು ತಯಾರಿದೆ. ಇವರು ಪತ್ರ ಬರೆದ ತಕ್ಷಣ ಪಾಸ್‌ಪೋರ್ಟ್‌ ರದ್ದು ಆಗಬೇಕು ಅಂತಲ್ಲ, ಇದನ್ನು ಬಿಜೆಪಿ ಮೇಲೆ ಹಾಕುವ ಪ್ರಯತ್ನ ಮಾಡುತ್ತಿದ್ದಾರೆ. ನಾನು ಕೇಳುವ ಪ್ರಶ್ನೆಗೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್​, ಜಿ.ಪರಮೇಶ್ವರ್​ ಅವರಿಗೆ ಇದುವರೆಗೂ ಉತ್ತರ ಕೊಡಲು ಆಗುತ್ತಿಲ್ಲ. ಒಕ್ಕಲಿಗ ಸಮುದಾಯದ ಓಟ್ ಮೇಲೆ ಕಣ್ಣಿಟ್ಟು ಅಲ್ಲಿ ಚುನಾವಣೆ ಮುಗಿಯುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ.ಇದು ಅತ್ಯಂತ ಗಂಭೀರ ಪ್ರಕರಣ. ಪ್ರಜ್ವಲ್ ವಿಚಾರಣೆ ಎದುರಿಸಲೇಬೇಕು. ಅವರು ತಪ್ಪು ಮಾಡಿದ್ದೇ ಆಗಿದ್ದರೆ ಕಠಿಣ ಕ್ರಮ ಆಗಲೇಬೇಕು. ಇದರಲ್ಲಿ ಯಾವುದೇ ಅನುಕಂಪ ಇಲ್ಲ. ಕರ್ನಾಟಕ ಸರಕಾರ ಇದರಲ್ಲಿ ತನಿಖೆಗಿಂತ ಹೆಚ್ಚು ರಾಜಕಾರಣ ಮಾಡಹೊರಟಿದೆ"- ಪ್ರಹ್ಲಾದ್ ಜೋಶಿ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್