Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯೋಗದಿಂದ ಉತ್ತಮ ಆರೋಗ್ಯ ಮತ್ತು ಮಾನಸಿಕ ನೆಮ್ಮದಿ ಸಾಧ್ಯ: ಡಾ.ಟಿ. ಫಣೇಂದರ್

ಬಳ್ಳಾರಿಯಲ್ಲಿ ಯೋಗ ಜಾಗೃತಿಗಾಗಿ ‘ನಡಿಗೆ ಜಾಥಾ’


ಬಳ್ಳಾರಿ,ಜ20: ಅಂತರರಾಷ್ಟಿçÃಯ ಯೋಗ ದಿನಾಚರಣೆಯ ಅಂಗವಾಗಿ ಸಾರ್ವಜನಿಕರಲ್ಲಿ ಆರೋಗ್ಯ ಮತ್ತು ಯೋಗದ ಮಹತ್ವದ ಕುರಿತು ಜಾಗೃತಿ ಮೂಡಿಸಲು ಶುಕ್ರವಾರ ನಗರದಲ್ಲಿ ಬೃಹತ್ ‘ನಡಿಗೆ ಜಾಥಾ’ (ವಾಕಥಾನ್) ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಹಾಗೂ ವಿವಿಧ ಯೋಗ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಾಥಾಕ್ಕೆ ನಗರದ ನೂತನ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾ ಆಯುಷ್ ಅಧಿಕಾರಿ ಡಾ.ಟಿ. ಫಣೇಂದರ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಯೋಗದಿಂದ ದೇಹಕ್ಕೆ ಮತ್ತು ಮನಸ್ಸಿಗೆ ಅನೇಕ ಆರೋಗ್ಯಕರ ಪ್ರಯೋಜನಗಳಿವೆ. ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕಂಡುಬರುತ್ತಿರುವ ಸಕ್ಕರೆ ಕಾಯಿಲೆ (ಡಯಾಬಿಟಿಸ್) ಮತ್ತು ರಕ್ತದೊತ್ತಡದ (ಬಿಪಿ) ದಂತಹ ಸಮಸ್ಯೆಗಳನ್ನು ನಿಯಂತ್ರಿಸಲು ಯೋಗ ಅತ್ಯುತ್ತಮ ಮಾರ್ಗವಾಗಿದೆ. ಆರೋಗ್ಯಕರ ಮತ್ತು ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ ಜೂ.21 ರಂದು ಯೋಗ ದಿನಾಚರಣೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.
ಆಧುನಿಕ ಜೀವನಶೈಲಿಯಲ್ಲಿ ಎದುರಾಗುವ ಒತ್ತಡ ಮತ್ತು ಆರೋಗ್ಯ ಸಮಸ್ಯೆಗಳಿಗೆ ಯೋಗ ಅತ್ಯುತ್ತಮ ಮದ್ದಾಗಿದೆ. ಯೋಗವನ್ನು ಕೇವಲ ಒಂದು ದಿನಕ್ಕೆ ಸೀಮಿತಗೊಳಿಸದೆ, ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದ ಭಾಗವಾಗಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸಾರ್ವಜನಿಕರನ್ನು ಪ್ರೇರೇಪಿಸಲು ಈ ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಜಾಥಾವು ನೂತನ ಜಿಲ್ಲಾಡಳಿತ ಭವನದ ಆವರಣದಿಂದ ಪ್ರಾರಂಭಗೊAಡು ಸಂಗA ವೃತ್ತ, ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ರೈಲ್ವೆ ಸ್ಟೇಷನ್ ರಸ್ತೆಯ ಮೂಲಕ ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ತಲುಪಿ ಅಂತ್ಯಗೊAಡಿತು.
ಜಾಥಾದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಯೋಗ ಪಟುಗಳು, ಸಾರ್ವಜನಿಕರು ಹಾಗೂ ಹಿರಿಯ ನಾಗರಿಕರು ಅತ್ಯಂತ ಉತ್ಸಾಹದಿಂದ ಪಾಲ್ಗೊಂಡಿದ್ದರು. ‘ಆರೋಗ್ಯವೇ ಭಾಗ್ಯ’, ‘ದಿನವೂ ಮಾಡಿ ಯೋಗ, ದೂರವಿಡಿ ರೋಗ’ ಎಂಬ ಘೋಷಣೆಗಳುಳ್ಳ ಫಲಕಗಳನ್ನು ಹಿಡಿದು ಸಾರ್ವಜನಿಕರ ಗಮನ ಸೆಳೆಯಲಾಯಿತು.
ಈ ವೇಳೆ ಜಿಲ್ಲಾ ಆಯುಷ್ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲೆಯ ವಿವಿಧ ಯೋಗ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ