LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bijapur

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ: ಶಿಕ್ಷಣ ಇಲಾಖೆಯಿಂದ ಅಭಿನಂದನಾ ಪತ್ರ

ತಾಳಿಕೋಟೆ ಸಂಗಮೇಶ್ವರ ಪ್ರೌಢಶಾಲೆಗೆ ಶೇ.೧೦೦ ಫಲಿತಾಂಶದ ಗೌರವ



ತಾಳಿಕೋಟೆ,ಸೆ,೧೬ : ೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.೧೦೦ರಷ್ಟು ಫಲಿತಾಂಶ ದಾಖಲಿಸಿದ ತಾಳಿಕೋಟೆಯ ಶ್ರೀ ಸಂಗಮೇಶ್ವರ ಪ್ರೌಢಶಾಲೆಗೆ ಶಿಕ್ಷಣ ಇಲಾಖೆಯಿಂದ ಅಭಿನಂದನಾ ಪತ್ರ ನೀಡಿ ಗೌರವಿಸಲಾಗಿದೆ.
ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದ ಪರಿಶ್ರಮವೇ ಕಾರಣವಾಗಿದೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಉತ್ತಮ ಫಲಿತಾಂಶ ಸಾಧಿಸಿರುವ ಶಾಲೆಯ ಕಾರ್ಯಕ್ಕೆ ಶಿಕ್ಷಣ ಇಲಾಖೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ. ಸಂಗಮೇಶ್ವರ ವಿದ್ಯಾ ಸಂಸ್ಥೆಯ ಆವರಣದಲ್ಲಿ  ಮಂಗಳವಾರ ರಂದು  ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಎಚ್.ಎಸ್. ಪಾಟೀಲ್ ಅವರು ಅಭಿನಂದನಾ ಪತ್ರವನ್ನು ಶಾಲೆಯ ಮುಖ್ಯೋಪಾಧ್ಯಾಯರಿಗೆ ಹಸ್ತಾಂತರಿಸಿದರು.
ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳನ್ನು ಅಭಿನಂದಿಸಿರುವ ಶಿಕ್ಷಣ ಇಲಾಖೆ, ಮುಂದಿನ ದಿನಗಳಲ್ಲಿಯೂ ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡುವಂತೆ ಶುಭ ಹಾರೈಸಿದೆ. ಈ ಗೌರವದಿಂದ ಶಾಲೆಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಸಂತಸ ಮೂಡಿದ್ದು, ಶೈಕ್ಷಣಿಕ ಪ್ರಗತಿಗೆ ಮತ್ತಷ್ಟು ಪ್ರೋತ್ಸಾಹ ದೊರೆತಂತಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಚ್.ಎಸ್.ಪಾಟೀಲ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಸಚಿನ ಎಚ್. ಪಾಟೀಲ ಕಾರ್ಯದರ್ಶಿಗಳು, ಕಿರಣ ಎಚ್. ಪಾಟೀಲ ಆಡಳಿತಾಧಿಕಾರಿಗಳು, ಮುಖ್ಯೋಪಾಧ್ಯಾಯ ಅಶೋಕ ಕಟ್ಟಿ, ಮುಖ್ಯ ಅತಿಥಿಗಳಾದ ಪ್ರವೀಣ ಜಿ. ಘೋರ್ಪಡೆ, ಹಿರಿಯ ಶಿಕ್ಷಕ ಬಿ. ಆಯ್. ಹಿರೇಹೊಳಿ, ಎಸ್.ವಿ. ಜಾಮಗೊಂಡಿ, ಎಚ್.ಬಿ. ಪಾಟೀಲ, ಎಸ್.ಸಿ. ಗುಂಡಗುಂಟಿ, ಎಮ್.ಎಸ್. ರಾಯಗೊಂಡ, ಯು.ಎಚ್. ಗಟನೂರ, ಶ್ರೀಮತಿ ರೇಣುಕಾ ಬಿರಾದಾರ, ಶ್ರೀಮತಿ ಎ.ಸಿ. ಗುಮಶೆಟ್ಟಿ, ಕೆ.ಎನ್. ನಾಲತವಾಡ, ಬಿ.ಪಿ. ಕೊಣ್ಣುರ, ಸುನೀಲ ಮತ್ತಿಗಟ್ಟಿ ಹಾಗೂ ಸಿದ್ದನಗೌಡ ಮುದನೂರ ಪಾಲ್ಗೊಂಡಿದ್ದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪರಸ್ಪರ ಸಹಾಯ ಸಹಕಾರದಿಂದ ದೇವಸ್ಥಾನಗಳ ಅಭಿವೃದ್ಧಿ :ಬಾಬಾಸಾಹೇಬ ಪಾಟೀಲ ಶ್ರೀ ವೇಮನ್ ಕೋ-ಆಪ್. ಕ್ರೆಡಿಟ್ ಸೊಸಾಯಿಟಿಗೆ 3.06 ಕೋಟಿ ರೂ. ಲಾಭ : ಸಂತೋಷ ಸೋನವಾಲ್ಕರ ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಕರ ಮತ್ತು ಅಭಿಯಂತರರ ಪಾತ್ರ ಮಹತ್ವಪೂರ್ಣವಾದುದು :  ಡಾ.ಅಲ್ಲಮಪ್ರಭು ಮಹಾಸ್ವಾಮಿಗಳುಅಲ್ಪಸಂಖ್ಯಾತರ ಕಲ್ಯಾಣ ಯೋಜನೆಗಳು ಕಾಲಮಿತಿಯೊಳಗೆ ಜನರಿಗೆ ತಲುಪಿಸಿ: ಜಿಲ್ಲಾಧಿಕಾರಿ ಡಾ. ಸುರೇಶ ಇಟ್ನಾಳಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ: ಶಿಕ್ಷಣ ಇಲಾಖೆಯಿಂದ ಅಭಿನಂದನಾ ಪತ್ರಅಭಿಯಂತರರು ಸಮಾಜದ ಅಭಿವೃದ್ಧಿಗೆ ಹೊಸ ದಿಕ್ಕು ನೀಡಲಿ : ಶಾಸಕರಾದ ವಿನಯ ಕುಲಕರ್ಣಿಪ್ರಜಾಪ್ರಭುತ್ವ ಉಳಿಸಲು ಯುವಜನತೆ ನಾಯಕತ್ವ ಗುಣ ಬೆಳೆಸಿಕೊಳ್ಳಿ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜ ಕರೆ            ’ವಕ್ರತುಂಡ’ ಚಿತ್ರದ ಧಮಾಕಾ : ’ಜೈ ಗಣೇಶ’ ಟೈಟಲ್ ಟ್ರ್ಯಾಕ್ ಸಾಂಗ್ ಭರ್ಜರಿ ಸದ್ದು  ಮಹಿಳೆ ಕಾಣೆ: ಪತ್ತೆಗೆ ಮನವಿಕಲ್ಯಾಣ ಕರ್ನಾಟಕ ಉತ್ಸವ: ಬಳ್ಳಾರಿಯಲ್ಲಿ ಸಚಿವ ಟಿ. ರಘುಮೂರ್ತಿ ಅವರಿಂದ ಧ್ವಜಾರೋಹಣ