Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಳಿಕೆ ರಜೆಗಾಗಿ ಸರ್ಕಾರಿ ನೌಕರರ ಸಂಘ ಚುನಾವಣಾ ಆಯೋಗಕ್ಕೆ ಪತ್ರ

ಬೆಂಗಳೂರು, ಮೇ 18: ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಮತದಾನ ಮುಕ್ತಾಯಗೊಂಡಿದೆ. ಏಪ್ರಿಲ್ 26 ಮತ್ತು ಮೇ 7ರಂದು ಎರಡು ಹಂತದಲ್ಲಿ ಮತದಾನ ಪೂರ್ಣಗೊಂಡಿದ್ದು, ಜೂನ್ 4ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ರಾಜ್ಯದ ಸರ್ಕಾರಿ ನೌಕರರು ಚುನಾವಣಾ ಕಾರ್ಯವನ್ನು ಮುಗಿಸಿಕೊಂಡು ಕೆಲಸಕ್ಕೆ ಹಾಜರಾಗಿದ್ದಾರೆ. ಶಿಕ್ಷಕರ ಬೇಸಿಗೆ ರಜೆಗಳು ಮುಗಿಯುತ್ತಿದ್ದು, ಮೇ 29ರಿಂದ ಶಾಲೆಗಳು ಆರಂಭವಾಗಲಿವೆ. ಚುನಾವಣಾ ಕಾರ್ಯದಲ್ಲಿ ತೊಡಗಿದ್ದ ಶಿಕ್ಷಕರು ಈಗ ಚುನಾವಣಾ ಆಯೋಗದ ಮುಂದೆ ಬೇಡಿಕೆಯೊಂದನ್ನು ಇಟ್ಟಿದ್ದಾರೆ

ಗಳಿಕೆ ರಜೆ ನೀಡಲು ಕೋರಿ ಪತ್ರ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ. ಎಸ್. ಷಡಾಕ್ಷರಿ ಅವರು ಮುಖ್ಯ ಚುನಾವಣಾಧಿಕಾರಿಗಳು, ಕರ್ನಾಟಕ ಇವರಿಗೆ ಪತ್ರವೊಂದನ್ನು ಬರೆದಿದ್ದಾರೆ. ಮತಗಟ್ಟೆ ಮಟ್ಟದ (ಬಿ.ಎಲ್.ಓ) ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುವ ಶಿಕ್ಷಕರಿಗೆ ಗಳಿಕೆ ರಜೆ ಮಂಜೂರು ಮಾಡುವ ಬಗ್ಗೆ ಎಂಬ ವಿಷಯವನ್ನು ಪತ್ರ ಒಳಗೊಂಡಿದೆ. ಅಲ್ಲದೇ ಬಿ.ಎಲ್.ಓ. ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರ ಮನವಿ ದಿನಾಂಕ 14/4/2024 ಉಲ್ಲೇಖ ಮಾಡಲಾಗಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ, ರಾಜ್ಯಾದ್ಯಂತ ಕರ್ತವ್ಯ ಶಿಕ್ಷಕರು ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳಾಗಿ (ಬಿ.ಎಲ್.ಓ) ಚುನಾವಣಾ ಕಾರ್ಯ ನಿರ್ವಹಿಸುತ್ತಿದ್ದು, ಸಾರ್ವತ್ರಿಕ ರಜಾ ಅವಧಿಯಲ್ಲಿಯೂ ಸಹ ಕಾರ್ಯನಿರ್ವಹಿಸುತ್ತಿರುವುದರಿಂದ ಗೌರವಧನದ ಜೊತೆಗೆ ಗಳಿಕೆ ರಜೆಯನ್ನು ಮಂಜೂರು ಮಾಡುವಂತೆ ಉಲ್ಲೇಖಿತ ಪತ್ರದಲ್ಲಿ ಮನವಿ ಮಾಡಿಕೊಂಡಿರುತ್ತಾರೆ.

ಮತಗಟ್ಟೆ ಮಟ್ಟದ ಅಧಿಕಾರಿಗಳಾಗಿ (ಬಿ.ಎಲ್.ಓ) ಚುನಾವಣೆಗಳಿಗೆ ಪೂರಕವಾದ ಕರ್ತವ್ಯಗಳನ್ನು ನಿರ್ವಹಿಸುವ ಶಿಕ್ಷಕರಿಗೆ ಗಳಿಕೆ ರಜೆಯನ್ನು ಮಂಜೂರು ಮಾಡುವ ಸಂಬಂಧ ಈ ಅಂಶಗಳನ್ನು ತಮ್ಮ ಅವಗಾಹನೆಗೆ ತರಬಯಸುತ್ತೇವೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*