Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆಕೆಆರ್‌ಸಿಟಿ ಕಚೇರಿಯಲ್ಲಿ ಫೋನ್ ಇನ್ ಕಾರ್ಯಕ್ರಮ ಯಶಸ್ವಿಗೊಳಿಸಿದ ಜಿಪಂ ಸಿಇಒ

ವಿಜಯಪುರ, ಮೇ.೧೪ : ಸಾರಿಗೆ ಸೌಲಭ್ಯಗಳ ಕುರಿತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಕಾಧಿಕಾರಿಗಳಾದ ರಿಷಿ ಆನಂದ ಅವರು ಫೋನ್ ಇನ್ ಕಾರ್ಯಕ್ರಮ ಯಶಸ್ವಿಗೊಳಿಸಿದರು.
ಸಾರಿಗೆ ಸಂಸ್ಥೆಯ ವೀಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿಗೆ ಆಗಮಿಸಿ, ಜಿಲ್ಲೆಯ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಾರಿಗೆ ವ್ಯವಸ್ಥೆಯ ಕುರಿತು ಫೋನ್ ಇನ್ ಕಾರ್ಯಕ್ರಮದಲ್ಲಿ ಅವಲೋಕನ ಮಾಡಿದರು. ಮಧ್ಯಾಹ್ನ ೩.೩೦ರಿಂದ ೪ ಗಂಟೆ ಅವಧಿಯಲ್ಲಿ ಸಾರಿಗೆ ಸೌಲಭ್ಯಗಳ ಕುರಿತು ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರ ನೂರಾರು ಕರೆಗಳನ್ನು ಸ್ವೀಕರಿಸಿ, ಅವರ ಸಮಸ್ಯೆಗೆ ಸ್ಪಂದಿಸಿದರು.
ಸಾರಿಗೆ ಸೌಲಭ್ಯಗಳ ಕುರಿತು ಪ್ರಯಾಣಿಕರಿಂದ ಬಂದ ಕರೆ ಸ್ವೀಕರಿಸಿ, ಅವರ ಸಮಸ್ಯೆ ಆಲಿಸಿ ಅದಕ್ಕೆ ಪರಿಹಾರ ಕಲ್ಪಿಸಿದರು. ಇಂಡಿ ತಾಲೂಕಿನ ಬಸನಾಳ ಕ್ರಾಸ್‌ಗೆ ವಾಹನ ನಿಲುಗಡೆ ಕುರಿತು ಬಂದ ಬೇಡಿಕೆಗೆ ಸ್ಪಂದಿಸಿದರು. ವಿಜಯಪುರ ನಗರದಲ್ಲಿ ನೂತನ ನಗರ ಸಾರಿಗೆ ವಾಹನಗಳ ಕುರಿತು ಗಣೇಶನಗರದ ಪೂಜಾರಿ ಎನ್ನುವ ನಾಗರೀಕರು ಮೆಚ್ಚುಗೆ ವ್ಯಕ್ತಪಡಿಸಿ ಕರೆ ಮಾಡಿದ್ದನ್ನು ಸ್ವೀಕರಿಸಿ ಸಂತಸ ವ್ಯಕ್ತಪಡಿಸಿದರು. ಸಾರ್ವಜನಿಕರು ಬಸ್ಸುಗಳ ಆಗಮನ, ನಿರ್ಗಮನಗಳ ಮಾಹಿತಿಯನ್ನು ಫೋನ್ ಮೂಲಕ ಕೇಳಿದ್ದನ್ನು ಕಂಡು ಸಂತಸ ವ್ಯಕ್ತಪಡಿಸಿ, ಸಾರ್ವಜನಿಕ ಉತ್ಸಾಹಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರುಬರ ಸೇರಿದಂತೆ ಮತ್ತಿತರರು ಇದ್ದರು. 

 

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಣ್ಣೂರಿನಲ್ಲಿ ರಸ್ತೆ ಕಾಮಗಾರಿಗೆ ಭೂಮಿಪೂಜೆ7 ಗಂಭೀರ ವಿಷಯ:  ಸಚಿವರು, ಶಾಸಕರು, ಜಿಲ್ಲಾಧಿಕಾರಿಗಳ ಜೊತೆ ನೇರ ಚರ್ಚೆಗೆ ಎಫ್ಒಎಬಿ ನಿರ್ಧಾರ*ಗೃಹಲಕ್ಷ್ಮಿ ಯೋಜನೆಯ ಸಾರ್ಥಕತೆ: 624 ಅಂಕ ಗಳಿಸಿದ ವಿದ್ಯಾರ್ಥಿನಿಗೆ ಇಲಾಖೆಯಿಂದ ಅಭಿನಂದನೆ* ೧೮ ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ-೨ಯುವಜನತೆ ಮೊಬೈಲ್ ಗೀಳಿನಿಂದ ಹೊರಬಂದು ನಮ್ಮ ನೆಲದ ಸಂಸ್ಕೃತಿಯನ್ನು ಅರಿತುಕೊಳ್ಳಬೇಕು: ಸಿ.ಪಿ.ಐ ವಿಶ್ವನಾಥ ಹಿರೇಗೌಡ್ರಮೇ 16 ಕ್ಕೆ ರಾಷ್ಟ್ರೀಯ  ಡೆಂಗ್ಯೂ ದಿನಾಚರಣೆ: ಭಿತ್ತಿ ಪತ್ರ ಬಿಡುಗಡೆತಾಯಿ ಮತ್ತು ಶಿಶು ಮರಣ ಪ್ರಮಾಣ ಶೂನ್ಯಕ್ಕೆ ಇಳಿಸಿ: ಡಾ.ಸುರೇಶ ಬಿ.ಇಟ್ನಾಳ್ಕೊಪ್ಪಳವನ್ನು ಗೆಲ್ಲಿಸಿ: ಸಿವಿಸಿ ಕರೆಜೀತ ಪದ್ಧತಿಯಲ್ಲಿ ಸಿಲುಕಿದ್ದ ಒಡಿಶಾ ಮೂಲದ 37 ಕಾರ್ಮಿಕರ  ರಕ್ಷಣೆಜಿಪಂ ಸಿಇಒ ರಿಷಿ ಆನಂದ ಸಿಬ್ಬಂದಿಗೆ ಕಿವಿಮಾತು