Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಹಾನ್ ದಾರ್ಶಣಿಕ ಬಸವಣ್ಣ ಗ್ರಂಥ ಲೋಕಾರ್ಪಣೆ


ಹಾವೇರಿ. ಮಹಾನ ದಾರ್ಶನಿಕ ಬಸವಣ್ಣ ಗ್ರಂಥ ಲೋಕಾರ್ಪಣೆ ಹಾವೇರಿ-ಕೇಂದ್ರ ಬಸವ ಸಮಿತಿ ಪ್ರಕಟಿಸಿರುವ ಮಹಾನ ದಾರ್ಶನಿಕ ಬಸವಣ್ಣ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮ ಹಾವೇರಿ ಕಸ್ತೂರಿ ಸಿರಿಗನ್ನಡ ವೇದಿಕೆ,  ಅಕ್ಕನ ಬಳಗದ ಸಹಯೋಗದೊಂದಿಗೆ ಹೊಂಡದ ಮಠದ ಆವರಣದಲ್ಲಿ ಶಿಕ್ಷಕಿ ಲಲಿತಾ ನಿರಾಕಾರಿ ಅಧ್ಯಕ್ಷತೆಯಲ್ಲಿ, ಶೈಲಜಾ ಎಮ್. ಕೋರಿಶೆಟ್ಟರ ನೇತೃತ್ವದಲ್ಲಿ ನಡೆಯಿತು.


ಗ್ರಂಥ ಲೋಕಾರ್ಪಣೆ ಗೊಳಿಸಿದ ಶಿಕ್ಷಕಿ ಶೋಭಾ ಜವಟಗೇರಿ   ಅವರು ಮಾತನಾಡಿ  ಕೇಂದ್ರ ಬಸವ ಸಮಿತಿ ಪ್ರಕಟಿಸಿರುವ  *ಮಹಾನ್ ದಾರ್ಶನಿಕ  ಬಸವಣ್ಣ* ಗ್ರಂಥ ಬಸವಣ್ಣನವರ ಜನನ, ಕಪ್ಪಡಿ ಸಂಗಮದಲ್ಲಿ ಬಸವಣ್ಣನವರ ವಿದ್ಯಾಭ್ಯಾಸ, ಕಾಯಕ ಜೀವನ, ಕಲ್ಯಾಣದಲ್ಲಿ ಬಸವಣ್ಣನವರ ಸಾಧನೆಗಳು, ಬಸವ ಮಹಾಮನೆ, ಪ್ರಸಾದ- ದಾಸೋಹ, ಅನುಭವ ಮಂಟಪದ ಸ್ಥಾಪನೆ, ಬಸವ ಪೂರ್ವದ ಪರಿಸ್ಥಿತಿ ಹಾಗೂ ನಂತರದ ಸಾಮಾಜಿಕ, ಆರ್ಥಿಕ, ಸಾಹಿತ್ಯಕ, ಶೈಕ್ಷಣಿಕ ಪರಿಸ್ಥಿತಿ ವಿವರದೊಡನೆ ಬಸವಣ್ಣನವರ ಘನ ವ್ಯಕ್ತಿತ್ವ ಹಾಗೂ ಜೀವನದ ಘಟನೆಗಳನ್ನು ಒಳಗೊಂಡು ಜನರಿಗೆ ಒಳ್ಳೆಯ ಸಂದೇಶಗಳನ್ನು ತಲುಪಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು.


ಹಾವೇರಿಯ ಕಸ್ತೂರಿ ಸಿರಿಗನ್ನಡ ವೇದಿಕೆ ಅಧ್ಯಕ್ಷ ಅಧ್ಯಕ್ಷರಾದ ಶೈಲಜಾ ಕೋರಿಶೆಟ್ಟರ ಮಾತನಾಡಿ ಸಕಲ ಜೀವಾತ್ಮರಿಗೆಲೇಸನೆ ಬಯಸಿದ ಮಹಾನ್ ಮಾನವತಾವಾದಿ, ಕಲ್ಯಾಣಕ್ಕಾಗಿ ಹಗಲಿರುಳು ಶ್ರಮಿಸಿದ ವಿಶ್ವದ ಯುಗಪುರುಷ ಬಸವಣ್ಣನವರು ಮಹಾ ಮಾನವತಾವಾದಿ, ಸ್ವತಂತ್ರ ವಿಚಾರವಾದಿ, ಸಮತಾವಾದಿ, ದಲಿತೋದ್ಧಾರಕ, ಶ್ರೇಷ್ಠ ಅರ್ಥಶಾಸ್ತ್ರಜ್ಞ, ಸ್ತ್ರೀಕುಲೋದ್ಧಾರಕ, ಪ್ರಾಮಾಣಿಕ ಬದುಕಿನ ಪಾರದರ್ಶಕ ವ್ಯಕ್ತಿತ್ವದ ಮಹಾನ್ ದಾರ್ಶನಿಕರಾಗಿದ್ದರು. ಇಂದಿನ ವಿದ್ಯಾರ್ಥಿಗಳಲ್ಲಿ ಇಂತಹ ಕಲ್ಪನೆ ಬಿತ್ತುವುದು  ನಮ್ಮ ಜವಾಬ್ದಾರಿಯಾಗಿದೆ ಎಂದರು.


ಉದಯೋನ್ಮುಖ ಬರಹಗಾರ ಅರುಣ ರೇವಣೆಪ್ಪ ಬಂಕಾಪುರ  ಅವರು ಮಾತನಾಡಿ ಬಸವ ಸಮಿತಿಯು ಈಗಾಗಲೇ 50 ಭಾಷೆಗಳಲ್ಲಿ ವಚನಗಳನ್ನು ಭಾಷಾಂತರಿಸಿದೆ. ಶಾಲೆಯಿಂದ ಶಾಲೆಗೆ, ಕಾಲೇಜಿನಿಂದ ಕಾಲೇಜಿಗೆ, ವಚನಕಾರರು ಮತ್ತು ವ್ಯಕ್ತಿತ್ವ ಕಾರ್ಯಕ್ರಮವನ್ನು ಹಮ್ಮಿಕೊಂಡು ಲಕ್ಷಾಂತರ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನವಾಗಿದೆ ಎಂದು ಹೇಳಿದರು.


ಶಿಕ್ಷಕರ ದಿನಾಚರಣೆಯ ನಿಮಿತ್ತ ಶಿಕ್ಷಕಿಯರಾದ ಶೋಭಾ ಜವಟಗೇರಿ,  ಲಲಿತಾ ನಿರಾಕಾರಿ ಅವರು ಸನ್ಮಾನಿಸಲಾಯಿತು.  ರಶ್ಮಿ ತುಪ್ಪದ ಸ್ವಾಗತಿಸಿದರು,ಕುಮಾರಿ ಕಾವ್ಯಾ ಪ್ರಾರ್ಥನೆ ಮಾಡಿದರು,

ರುದ್ರಾಕ್ಷಿ ಬೆಂಬಳಗಿ  ನಿರೂಪಿಸಿದರು,    ಸಿದ್ದುಮತಿ ನೇಲುಗಿ,  ಸುಧಾ ಆನೂರ್ ಶೆಟ್ಟರ, ಪ್ರೇಮಕ್ಕ ಅರವಿಬೃಂಗಿಮಠ ಅಕ್ಕನ ಬಳಗದ ಅಧ್ಯಕ್ಷರಾದ ವಿಮಲಾ ಮರ್ತೂರ್ ,ರೇಷ್ಮಾ ಮುಷ್ಟಿ, ತೋಟಕ್ಕ ಅಕ್ಕಿ, ರೇಖಾ ಬಸೂನಾಳ, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ