Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂಭ್ರಮದಿಂದ ನೆರವೇರಿದ ಶ್ರೀ ಉಳವಿ ಚನ್ನಬಸವೇಶ್ವರರ ಮಹಾ ರಥೋತ್ಸವ

ಧಾರವಾಡ,ಆ.೧೮ ಶ್ರಾವಣ ಮಾಸದ ಕೊನೆಯ ದಿನವಾದ ಸೋಮವಾರದಂದು ಇತಿಹಾಸ ಪ್ರಸಿದ್ಧ ಶ್ರೀ ಉಳವಿ ಚನ್ನಬಸವೇಶ್ವರ ದೇವಸ್ಥಾನದಲ್ಲಿ ಮುಂಜಾನೆಯಿಂದ ಚನ್ನಬಸವೇಶ್ವರರಿಗೆ ವಿಶೇಷ ಪೂಜೆ, ಅಭಿಷೇಕ, ರುದ್ರ ಪಠಣ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಿದವು.
ಸಂಜೆ ೪ ಗಂಟೆಗೆ ನಡೆದ ರಥೋತ್ಸವಕ್ಕೆ ಮುರುಘಾಮಠದ ಡಾ. ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಹಾಗೂ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ದೇವಸ್ಥಾನದದಿಂದ ಹೊರಟ ರಥವು ಉಳವಿ ಚನ್ನಬಸವೇಶ್ವರ ವರ್ತುಳ ಹಾಗೂ ಹಿಂದಿ ಪ್ರಚಾರ ಸಭಾ ಮುಖ್ಯ ರಸ್ತೆ ಮೂಲಕ ಸಂಚರಿಸಿ ಮರಳಿ ದೇವಸ್ಥಾನಕ್ಕೆ ತಲುಪಿ ಸಂಪನ್ನಗೊಂಡಿತು. ರಥೋತ್ಸವದುದ್ದಕ್ಕೂ ಭಕ್ತರು ಭಾರತ ದೇಶ, ಜೈ ಚನ್ನಬಸವೇಶ ಹರ... ಹರ... ಮಹಾದೇವ ಎಂಬ ಘೋಷಣೆ ಕೂಗಿದರು. ಅಲ್ಲದೇ ನೆರೆದಿದ್ದ ಅಪಾರ ಜನಸ್ತೋಮವು ರಥಕ್ಕೆ ಹಣ್ಣು, ಉತ್ತತ್ತಿ, ಬಾಳೆ, ಕಿತ್ತಳೆ ಫಲ ಪುಷ್ಪ ಸಮರ್ಪಿಸಿ ಭಕ್ತಿಯ ಸಾಗರದಲ್ಲಿ ಮಿಂದೆದ್ದರು.

ಮುಂಜಾನೆಯಿಂದ ಸಂಜೆವರೆಗೂ ದೇವಸ್ಥಾನಕ್ಕೆ ಆಗಮಿಸಿದ ಸಾವಿರಾರು ಸಂಖ್ಯೆಯ ಭಕ್ತರು ಚನ್ನಬಸವೇಶ್ವರ ದರ್ಶನ ಪಡೆದು ಮಹಾಪ್ರಸಾದದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಶ್ರೀ ಉಳವಿ ಬಸವೇಶ್ವರ ಧರ್ಮ ಫಂಡ ಸಂಸ್ಥೆಯ ಅಧ್ಯಕ್ಷ ಡಾ. ಎಸ್.ಆರ್. ರಾಮನಗೌಡರ, ಕಾರ್ಯಾಧ್ಯಕ್ಷ ಡಾ. ಕೆ.ಎಂ. ಗೌಡರ, ಗೌರವ ಕಾರ್ಯದರ್ಶಿ ಆರ್.ವೈ.ಸುಳ್ಳದ, ಹಾಗೂ ಧರ್ಮದರ್ಶಿಗಳಾದ ಟಿ ಎಲ್ ಪಾಟೀಲ, ಬಸವರಾಜ ಸೂರಗೊಂಡ, ಜಿ.ಬಿ. ಅಳಗವಾಡಿ, ಎನ್.ಬಿ. ಗೋಲಣ್ಣವರ, ಸುರೇಶ ಪಟ್ಟಣಶೆಟ್ಟಿ, ಸುರೇಶ ಹೆಗ್ಗೇರಿ, ಶಂಕರ ಪಾಗದ, ವಿಜಯೇಂದ್ರ ಪಾಟೀಲ, ಜಿ.ಟಿ.ಶಿರೋಳ, ಸಂಜೀವಕುಮಾರ ಲಕಮನಹಳ್ಳಿ ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ