LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Bijapur

ದಿ ೨೦ರಂದು ಗುರುಸಿದ್ದೇಶ್ವರ ಬ್ಯಾಂಕ್ ವಾರ್ಷಿಕ ಸರ್ವ ಸಾಧಾರಣ ಸಭೆ

 

 ಬೀಳಗಿ- ಇಲ್ಲಿನ ಪ್ರತಿಷ್ಠಿತ ಗುರುಸಿದ್ದೇಶ್ವರ ಪತ್ತಿನ ಸಹಕಾರಿ ಸಂಘ ನಿಯಮಿತದ 21 ನೇ ವಾರ್ಷಿಕ ಸರ್ವ ಸಾಧಾರಣ ಸಭೆಯನ್ನು ದಿ 20 ರಂದು ಭಾನುವಾರ 11 ಗಂಟೆಗೆ ಪಟ್ಟಣದ ಶ್ರೀ ಕಲ್ಮಠದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ ಶ್ರೀಶೈಲ ಯಂಕಂಚಿಮಠ ತಿಳಿಸಿದರು.

ಬ್ಯಾಂಕಿನ ಸಭಾಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ ೨೧ ವರ್ಷಗಳಿಂದ ಸಂಘವು ರೈತರು,ವ್ಯಾಪಾರಸ್ಥರು, ಸಣ್ಣ ಪುಟ್ಟ ಉದ್ಯೋಗಿಗಳಿಗೆ ಸಾಲ ವಿತರಿಸಿ ಎಲ್ಲಾ ಜನರ ಆರ್ಥಿಕ ಶಕ್ತಿ ಬೆಳೆಸುವ ಕಾರ್ಯ ಮಾಡುತ್ತ ಬಂದಿದ್ದು, ಗ್ರಾಹಕರು, ಷೇರುದಾರರು ಮತ್ತು ಸರ್ವ ಸದಸ್ಯರ ಸಹಕಾರದಿಂದ, ಸಂಘದ ಆಡಳಿತ ಮಂಡಳಿ, ಸಿಬ್ಬಂದಿಯ ಪ್ರಾಮಾಣಿಕ ಕೆಲಸದಿಂದ ಸಂಘವು ಬೆಳೆದು ನಿಲ್ಲಲು ಕಾರಣವಾಗಿದ್ದು ಸಂಘವು ಪ್ರಸಕ್ತ ಸಾಲಿನಲ್ಲಿ 1.20 ಕೋಟಿ ನಿವ್ವಳ ಲಾಭಗಳಿಸಿದೆ,ಜೊತೆಗೆ ಎಲ್ಲಾ ಜನರ,ಆಡಳಿತ ಮಂಡಳಿ ತಿರ್ಮಾನದಂತೆ ಸದ್ಯ ಬಾಗಲಕೋಟೆ,ಗಲಗಲಿ ಮತ್ತು ಮುಧೋಳ ಪಟ್ಟಣಗಳಲ್ಲಿ ತನ್ನ ಶಾಖೆಗಳನ್ನು ಆರಂಭಿಸಿದ್ದು ಬರುವ ದಿನಮಾನಗಳಲ್ಲಿ ಕೆರೂರ, ವಿಜಯಪುರ ನಗರದಲ್ಲಿ ತನ್ನ ಶಾಖೆ ಆರಂಭಿಸುವ ಗುರಿ ಇಟ್ಟುಕೊಳ್ಳಲಾಗಿದೆ,ದಿ 20 ರಂದು ಜರುಗುವ ಸಭೆಗೆ ಸಂಘದ ಸರ್ವ ಸದಸ್ಯರು, ಹಿತೈಷಿಗಳು,ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಕೆಂಪಯ್ಯ ವಿರಕ್ತಮಠ, ನಿರ್ದೇಶಕರಾದ ಎಸ್ ಎಚ್ ಯಾಳವಾರಮಠ,ಎಸ್ ಆಯ್ ಗೋಠೆ,ಆಯ್ ಎಸ್ ಬಂಗಾರಿಮಠ, ಎನ್ ಎಸ್ ಹಿರೇಮಠ,ಎಸ್ ಸಿ ಹಿರೇಮಠ,ಹಾಗೂ ಸಂಘದ ಮುಖ್ಯ ಕಾರ್ಯನಿರ್ವಾಹಕರಾದ ಪಂಚಾಕ್ಷರಿ ಹಿರೇಮಠ,ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ೩೦ ಮೀಟರ್ ಉದ್ದದ ತ್ರಿವರ್ಣ ಧ್ವಜದೊಂದಿಗೆ ಬೃಹತ್ ಶೋಭಾಯಾತ್ರೆಅನ್ನಪೂರ್ಣಾ ಯತ್ತಿನಮನಿ ನಿಧನ. ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ನಾಡಗೌಡರಿಂದ ಚಾಲನೆಎಂಆರ್‌ಎನ್‌ ಗ್ರೂಪ್ ಬ ಬಯೋಪ್ಲಾಸ್ಟಿಕ್ ಕಾರ್ಖಾನೆಗೆ ರಾಜ್ಯ ಸರ್ಕಾರದ ನಿರಾಕರಣೆ: ಮುರುಗೇಶ್ ನಿರಾಣಿ ಅಸಮಾಧಾನಇಂಡಿಯಲ್ಲಿ 'ವಿಶಾಲ ಸೌಹಾರ್ದ' ಬ್ಯಾಂಕ್‌ 12ನೇ ಶಾಖೆ ಉದ್ಘಾಟನೆ: ನಿರಾಣಿ ಕುಟುಂಬದ ಸಹಕಾರಿ ಸೇವೆ ಶ್ಲಾಘನೀಯ ಎಂದ ಶಾಸಕ ಯಶವಂತರಾಯಗೌಡ ಪಾಟೀಲಇಂಡಿ, ಚಡಚಣ, ತಾಳಿಕೋಟೆ ತಾಲೂಕುಗಳು ಶೀಘ್ರದಲ್ಲೇ ಬರಪೀಡಿತ ಎಂದು ಘೋಷಣೆ: ಶಾಸಕ ಯಶವಂತರಾಯಗೌಡ ಪಾಟೀಲರೈತರ ವಿಷಯದಲ್ಲಿ ನಿರ್ಲಕ್ಷ ವಹಿಸಿದರೆ ಸಹಿಸಲ್ಲಾ-ಸೋಮನಗೌಡತಾಲ್ಲೂಕಾ ಮಟ್ಟದಲ್ಲಿ ಲಕ್ಷ್ಮೀಗುಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಡ್ಢಿಯಲ್ಲಿ ಪ್ರಥಮ: ಜಿಲ್ಲಾಮಟ್ಟಕ್ಕೆ ಆಯ್ಕೆ*ವಿವಿಧ ಗ್ರಾಮಗಳ ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳಿಗೆ ಭೇಟಿ ನೀಡಿದ ಚನ್ನರಾಜ ಹಟ್ಟಿಹೊಳಿ*ವಿವಿಧೆಡೆ ಗಣೇಶ ಮೂರ್ತಿ ದರ್ಶನ ಪಡೆದು ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್