LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಹಡಪದ ಅಪ್ಪಣ್ಣನವರ ಬದುಕು ಸಮಾಜಕ್ಕೆ ಬೆಳಕು: ಗುರುಸಿದ್ಧ ಸ್ವಾಮೀಜಿ


ಬೆಳಗಾವಿ: ಬಸವಾದಿ ಶರಣರ ವಚನ ಆಂದೋಲನಕ್ಕೆ ಅಪಾರ ಶ್ರಮ, ತ್ಯಾಗ ಹಾಗೂ ನಿಷ್ಠೆಯಿಂದ ಕೊಡುಗೆ ನೀಡಿದವರಲ್ಲಿ ಕೆಳವರ್ಗದ ಶರಣರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಅದರಲ್ಲೂ ಹಡಪದ ಅಪ್ಪಣ್ಣನವರ ಬದುಕು ಇಂದಿನ ಸಮಾಜಕ್ಕೆ ದಾರಿದೀಪವಾಗಿದ್ದು, ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಅಗತ್ಯವಿದೆ ಎಂದು ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿ ಹೇಳಿದರು.

ನಗರದ ಕಾರಂಜಿಮಠದಲ್ಲಿ ದಿನಾಂಕ ೧೭ರಂದು ನಡೆದ ೩೦೨ನೇ ಶ್ರಾವಣ ಮಾಸದ ವಿಶೇಷ ಶಿವಾನುಭವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಬಸವಾದಿ ಶರಣರು ಸಮಾಜದಲ್ಲಿ ಸಮಾನತೆ, ಕಾಯಕ, ದಾಸೋಹ ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸುವ ಮೂಲಕ ಸಾಮಾಜಿಕ ಪರಿವರ್ತನೆಗೆ ನಾಂದಿ ಹಾಡಿದರು. ಈ ಮಹಾನ್ ವಚನ ಚಳವಳಿಗೆ ಹಡಪದ ಅಪ್ಪಣ್ಣನಂತಹ ಶರಣರು ನೀಡಿದ ಕೊಡುಗೆ ಸ್ಮರಣೀಯವಾಗಿದೆ ಎಂದು ಅವರು ಹೇಳಿದರು.

ಮುಖ್ಯ ಅತಿಥಿಯಾಗಿ ಮಾತನಾಡಿದ ಡಾ. ವಿಜಯಲಕ್ಷ್ಮಿ ಪುಟ್ಟಿ ಅವರು ಹಡಪದ ಅಪ್ಪಣ್ಣ ಮತ್ತು ಲಿಂಗಮ್ಮ ಶರಣೆಯ ಕುರಿತು ವಿಶೇಷ ಉಪನ್ಯಾಸ ನೀಡಿದರು. ಹಡಪದ ಅಪ್ಪಣ್ಣ ಹಾಗೂ ಲಿಂಗಮ್ಮ ಅವರು ಶರಣತತ್ವದ ಮಾರ್ಗದಲ್ಲಿ ಸಾಗುತ್ತಾ ಸರಳ, ಸುಂದರ ಹಾಗೂ ಆದರ್ಶ ದಾಂಪತ್ಯ ಜೀವನ ನಡೆಸಿದರು. ಬಸವಣ್ಣನವರ ಸಾಮಾಜಿಕ ಕ್ರಾಂತಿಗೆ ಹೆಗಲು ಕೊಟ್ಟು ವಚನ ಚಳವಳಿಯನ್ನು ಬಲಪಡಿಸಿದವರಲ್ಲಿ ಹಡಪದ ಅಪ್ಪಣ್ಣನಂತಹ ಕೆಳವರ್ಗದ ಶರಣರ ಪಾತ್ರ ಗಮನಾರ್ಹವಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶ್ರೀಮತಿ ಸುಧಾ ಪಾಟೀಲ ಮಾತನಾಡಿ, ಬಸವಾದಿ ಶರಣರು ಕನ್ನಡ ನಾಡಿನಲ್ಲಿ ಮಹಿಳೆಯರಿಗೆ ಮುಕ್ತ ಅವಕಾಶ ಕಲ್ಪಿಸುವ ಮೂಲಕ ಮಹಿಳಾ ಸ್ವಾತಂತ್ರ್ಯಕ್ಕೆ ಹೊಸ ಅರ್ಥ ನೀಡಿದರು. ಪುರುಷರೊಂದಿಗೆ ಮಹಿಳೆಯರೂ ಸಮಾನವಾಗಿ ಆಧ್ಯಾತ್ಮಿಕ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಿದ ವಚನ ಚಳವಳಿಯು ಇಂದಿಗೂ ಪ್ರಸ್ತುತವಾಗಿದೆ. ಹಡಪದ ಅಪ್ಪಣ್ಣನವರೊಂದಿಗೆ ಹೆಜ್ಜೆ ಹಾಕಿ ವಚನ ಚಳವಳಿಗೆ ಪ್ರೇರಣೆ ನೀಡಿದ ಲಿಂಗಮ್ಮ ಶರಣೆಯ ಕೊಡುಗೆ ಕೂಡ ಸ್ಮರಣೀಯವಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಬಸವೇಶ್ವರ ಬ್ಯಾಂಕಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸರಳಾ ಹೆರೇಕರ್ ಅವರನ್ನು ಶ್ರೀಮಠದ ವತಿಯಿಂದ ಗುರುಸಿದ್ಧ ಸ್ವಾಮೀಜಿ ಅವರು ಸನ್ಮಾನಿಸಿ ಗೌರವಿಸಿದರು.

ಕುಮಾರೇಶ್ವರ ಸಂಗೀತ ಪಾಠಶಾಲೆಯ ವಿದ್ಯಾರ್ಥಿಗಳು ವಚನ ಪ್ರಾರ್ಥನೆ ಸಲ್ಲಿಸಿದರು. ಶ್ರೀಕಾಂತ ಶಾನವಾಡ ಸ್ವಾಗತಿಸಿದರು. ಎ. ಕೆ. ಪಾಟೀಲ ಕಾರ್ಯಕ್ರಮ ನಿರೂಪಿಸಿದರು. ವಿ. ಕೆ. ಪಾಟೀಲ ವಂದಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರನ್ನ ಅಜರಾಮರ: ಮಲ್ಲಿಕಾರ್ಜುನ ಅರಬಿ೧೦೦ ಮೀಟರ್ ಓಟದಲ್ಲಿ ದ್ವಿತೀಯ: ಜಿಲ್ಲಾ ಮಟ್ಟಕ್ಕೆ ಚೇತನ ನ್ಯಾಮಗೌಡಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹ