Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಡಪದ ಅಪ್ಪಣ್ಣ ವಚನ ಸಾಹಿತ್ಯ ಇಂದಿಗೂ ಪ್ರಸ್ತುತ: ಸಿದ್ದನಗೌಡರ 


ಬೈಲಹೊಂಗಲ: ಹನ್ನೆರಡನೆಯ ಶತಮಾನದ ವಚನ ಚಳುವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರ ಬಸವಣ್ಣನವರ ಆಪ್ತ ಸಾಹಾಯಕರಾದ ಹಡಪದ ಅಪ್ಪಣ್ಣನವರು ವಚನ ಸಾಹಿತ್ಯ ಇಂದಿಗೂ ಅಂತ್ಯತ ಪ್ರಸ್ತುತವಾಗಿವೆ ಎಂದು ನ್ಯಾಯವಾದಿ ಎಫ್.ಎಸ್.ಸಿದ್ದನಗೌಡರ ಹೇಳಿದರು.


ಸಮೀಪದ ಹೊಸೂರ ಗ್ರಾಮದ ಪಂಚಾಯತಿ ಕಾರ್ಯಾಲಯದಲ್ಲಿ ಹಡಪದ ಅಪ್ಪಣ್ಣನವರ 890ನೇ ಜಯಂತಿ ಉದ್ಘಾಟಿಸಿ ಮಾತನಾಡಿ,  ಬಸವಣ್ಣನವರ ಬಾಲ್ಯದ ಒಡನಾಡಿಗಳಾಗಿದ್ದ ಇವರು ವಿಶ್ವದ ಪ್ರಪ್ರಥಮ ಪ್ರಜಾಪ್ರಭುತ್ವದ ಸಂಸತ್ತು ಎಂದೇ ಹೆಸರಾದ ಅನುಭವ ಮಂಟಪದಲ್ಲಿ ಬಸವಣ್ಣನವರಿಗೆ ಪ್ರಧಾನ ಕಾರ್ಯದರ್ಶಿಗಳಾಗಿ, ಬಸವಣ್ಣನವರಿಗೆ ಯಾವುದೇ ರೀತಿಯ ಮುಜುಗುರವಾಗದಂತೆ ಕಾರ್ಯನಿರ್ವಹಿಸಿದ ಹೆಗ್ಗಳಿಕೆ ಇವರದ್ದಾಗಿದೆ. ಇವರ ಕಾರ್ಯಕ್ಷಮತೆಗೆ ಇಂದಿನ ಜನಾಂಗಕ್ಕೆ ಕನ್ನಡಿಯಾಗಿದೆ.


12 ಶತಮಾನದಲ್ಲಿ ಲಿಂಗಾಯತರೆಲ್ಲರೂ ಶೂದ್ರರೆ ಆಗಿದ್ದರು. ಕಾಲಕ್ಕೆ ತಕ್ಕಂತೆ ತಮ್ಮ ಆಹಾರ ಜೀವನ ಶೈಲಿ ಹಾಗೂ ಉದ್ಯೋಗದ ಆದಾರದ ಮೇಲೆ ಬೇರೆ ಬೇರೆಯಾಗಿದ್ದಾರೆ. ಆರ್ಥಿಕ ಸ್ಥಿತಿಗತಿಯ ಮೇಲೆ ಶೈಕ್ಷಣಿಕ ಹಾಗೂ ಉದ್ಯೋಗ ಮಿಸಲಾತಿಯನ್ನು ಅವಶ್ಯಕವಾಗಿ ಸರ್ಕಾರ ನೀಡಬೇಕು. ಹಡಪದ ಅಪ್ಪಣ್ಣ ಸುಮಾರು 250ಕ್ಕೂ ಹೆಚ್ಚು ವಚನಗಳನ್ನು ಅಪ್ಪಣ್ಣ ಪ್ರಿಯ ಚನ್ನಬಸವಣ್ಣ ಎಂಬ ಅಂಕಿತನಾಮದಿಂದ ವಚನಗಳನ್ನು ರಚಿಸಿದ್ದಾರೆ. ಬಸವಣ್ಣನವರಿಗೆ ಅಪ್ಪಣ್ಣನವರು ಪ್ರಾಣವೇ ಆಗಿದ್ದರೆಂಬುದಕ್ಕೆ ಕಲ್ಯಾಣಕ್ರಾಂತಿಯ ಕೊನೆಯ ದಿನಗಳನ್ನು ತಿಳಿದುಕೊಂಡರೆ ಗೊತ್ತಾಗುತ್ತದೆ. ಒಬ್ಬ ಕಾರ್ಯದರ್ಶಿ ಹೇಗೆ ಕಾರ್ಯನಿರ್ವಹಿಸಬೇಕೆಂಬುದಕ್ಕೆ ಹಡಪದ ಆಪ್ಪಣ್ಣನವರು ಒಂದು ಉತ್ತಮ ಉದಾಹರಣೆಯಾಗಿರುತ್ತಾರೆ. ಇವರ ಜೀವನದ ಬಗ್ಗೆ ಇನ್ನೂ ಹೆಚ್ಚಿನ ಸಂಶೋದನೆಯಾಗಬೇಕಾಗಿದೆ ಎಂದರು.


ಗ್ರಾಪಂ ಅಧ್ಯಕ್ಷೆ ಶ್ರೀದೇವಿ ತಳವಾರ ಹಾಗೂ ಗ್ರಾಪಂ ಅಭಿವೃದ್ಧಿ ಅಧಿಕಾರ ಡಿ.ಎಸ್.ಕನಕ್ಕನ್ನವರ ಮಾತನಾಡಿ, ಅಂದು ಹಡಪದ ಸಮಾಜದವರು ಬೆಳಿಗ್ಗೆ ಎದರುಗಡೆ ಬಂದರೆ ಏನೋ ಆಗುತ್ತದೆ ಎಂಬ ಮೂಢ ನಂಬಿಕೆಯನ್ನು ಹೋಗಲಾಡಿಸುವುದಕ್ಕಾಗಿಯೆ ಬಸವಣ್ಣನವರು ಯಾರೇ ಬಂದರೂ ಮೊದಲು ಹಡಪದ ಅಪ್ಪಣ್ಣನವರನ್ನು ನೊಡಿಕೊಂಡು ಬರಬೇಕೆಂಬ ನಿಯಮವನ್ನು ಮಾಡಿದ್ದರೆಂಬ ಪ್ರತೀತಿ ಇದೆ. ಇವರ ಧರ್ಮಪತ್ನಿ ಲಿಂಗಮ್ಮನವರೂ ಸಹ ಮಹಾನ್ ವಚನಗಾರ್ತಿಯಾಗಿದ್ದರು. ಇವರ ವಿಜಯಪುರ ಜಿಲ್ಲೆಯ ತಂಗಡಗಿಯಲ್ಲಿ ಜನಿಸಿ ಅಲ್ಲಿಯೆ ಇವರ ಸಮಾಧಿಯೂ ಸಹ ಇದೆ ಎಂದರು.


ಕಾರ್ಯಕ್ರಮದಲ್ಲಿ ಗ್ರಾಪಂ ಸದಸ್ಯರಾದ  ಬಸವರಾಜ ಪೇಂಟೆದ, ಮಲ್ಲಿಕಾರ್ಜುನ ಕರಡಿಗುದ್ದಿ, ಮಡಿವಾಳಪ್ಪ ಕಮತಗಿ, ಸಂಜು ಪಾಟೀಲ, ಮಲ್ಲವ್ವ ಬಾರಿಗಿಡದ, ಗಂಗವ್ವ ಅರವಳ್ಳಿ, ರುಕ್ಸಾನ್ ಶೇಖ, ದೀಪಾ ಪಾಟೀಲ, ಮಲ್ಲವ್ವ ಸುತಗಟ್ಟಿ,  ಈರಪ್ಪ ಹಡಪದ, ಮಡಿವಾಳಪ್ಪ ಹಡಪದ, ಶಂಕರ್ ನಾವಲಗಿ,  ಮಹದೇವಪ್ಪ ಹಡಪದ, ಮಡಿವಾಳಪ್ಪ ಮದಲಬಾವಿ, ಮಲ್ಲಿಕಾರ್ಜುನ ನವಲಗಿ, ಬಸವರಾಜ ನವಲಗಿ, ಶಂಕರ್ ಹಡಪದ, ಈಶ್ವರ  ಹಡಪದ  ಹಾಗೂ ಗ್ರಾಮಸ್ಥರು ಇದ್ದರು.
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ