LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News | Districts Belagavi

ಸಮಾಜ ಸಂಘಟನೆಯಲ್ಲಿ ಹಾನಗಲ್ ಕುಮಾರಸ್ವಾಮಿಗಳ ಕೊಡುಗೆ ಅನನ್ಯ-ಪ್ರೊ ಮಿಥುನ ಅಂಕಲಿ ಅಭಿಮತ

ಲಿಂಗಾಯತ ಭವನದಲ್ಲಿ ಅಮವಾಸ್ಯೆ ಅನುಭಾವ ಗೋಷ್ಠಿ


ಬೆಳಗಾವಿ, ಸೆ. ೧೨: ಶತಮಾನಗಳಿಂದ ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದ್ದ ವೀರಶೈವ ಲಿಂಗಾಯತ ಸಮಾಜವನ್ನು ಸಂಘಟಿಸಿ, ಅಕ್ಷರ ಮತ್ತು ಜ್ಞಾನದ ಬೆಳಕಿನತ್ತ ಕೊಂಡೊಯ್ದು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಹಾನಗಲ್ ಕುಮಾರಸ್ವಾಮಿಗಳ ಕೊಡುಗೆ ಅನನ್ಯವಾಗಿದೆ ಎಂದು ನಿಪ್ಪಾಣಿ ಜಿ.ಐ. ಬಾಗೇವಾಡಿ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಪ್ರೊ. ಮಿಥುನ ಅಂಕಲಿ ಹೇಳಿದರು. 
ನಗರದ ಶಿವಬಸವನಗರದ ಲಿಂಗಾಯತ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ವತಿಯಿಂದ ಆಯೋಜಿಸಿದ್ದ ಅಮವಾಸ್ಯೆ ಅನುಭಾವ ಗೋಷ್ಠಿಯಲ್ಲಿ ‘ಶ್ರೀ ಹಾನಗಲ್ ಕುಮಾರಸ್ವಾಮಿಗಳ ಜೀವನ ಚರಿತ್ರೆ ಕುರಿತು ಅವರು ಉಪನ್ಯಾಸ ನೀಡಿದರುಹಾನಗಲ್ ಕುಮಾರಸ್ವಾಮಿಗಳು ಸಮಾಜದ ಶೈಕ್ಷಣಿಕ, ಧಾರ್ಮಿಕ ಹಾಗೂ ಸಾಮಾಜಿಕ ಪ್ರಗತಿಗೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಮಹಾನ್ ಸಮಾಜ  ಸುಧಾರಕರಾಗಿದ್ದರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯನ್ನು ಸ್ಥಾಪಿಸುವ ಮೂಲಕ ಸಮಾಜವನ್ನು ಸಂಘಟಿಸಿ, ಶಿಕ್ಷಣ ಮತ್ತು ಸಾಮಾಜಿಕ ಜಾಗೃತಿಗೆ ಹೊಸ ದಿಕ್ಕನ್ನು ನೀಡಿದರು ಎಂದು ಪ್ರೊ. ಮಿಥುನ ಅಂಕಲಿ ತಿಳಿಸಿದರು.ಶಿವಯೋಗ ಮಂದಿರವನ್ನು ಸ್ಥಾಪಿಸಿ ಜ್ಞಾನ ದಾಸೋಹಕ್ಕೆ ಅನುವು ಮಾಡಿಕೊಟ್ಟ ಅವರು, ಸಮಾಜದ ಯುವಜನರಲ್ಲಿ ಧಾರ್ಮಿಕ ಹಾಗೂ ಸಾಮಾಜಿಕ ಪ್ರಜ್ಞೆಯನ್ನು ಬೆಳೆಸುವ ಕಾರ್ಯಕ್ಕೆ ಬುನಾದಿ ಹಾಕಿದರು. ಮಠ-ಮಂದಿರಗಳ ವ್ಯಾಪ್ತಿಯನ್ನು ಮೀರಿ ಸಮಾಜದ ಪ್ರತಿಯೊಬ್ಬರಿಗೂ ಶಿಕ್ಷಣ ಮತ್ತು ಜ್ಞಾನದ ಅವಕಾಶ ದೊರೆಯಬೇಕು ಎಂಬ ದೂರದೃಷ್ಟಿಯನ್ನು ಹೊಂದಿದ್ದರು ಎಂದು ಹೇಳಿದರು.
ಸಿರಸಂಗಿ ಲಿಂಗರಾಜರು, ಅರಟಾಳ ರುದ್ರಗೌಡರು, ಗಿಲಗಂಚಿ ಗುರುಸಿದ್ಧಪ್ಪನವರಂತಹ ಮಹನೀಯರನ್ನು ಸಮಾಜದ ಮುಖ್ಯವಾಹಿನಿಗೆ ತಂದು ಅವರ ಮೂಲಕ ಸಾಮಾಜಿಕ ಜಾಗೃತಿ ಮೂಡಿಸುವಲ್ಲಿ ಕುಮಾರಸ್ವಾಮಿಗಳು ಪ್ರಮುಖ ಪಾತ್ರ ವಹಿಸಿದರು. ತಮ್ಮ ಜೀವನದಲ್ಲಿ ಅನೇಕ ಕಷ್ಟ-ಸಂಕಷ್ಟಗಳನ್ನು ಎದುರಿಸಿದರೂ ಅವರು ಎಂದಿಗೂ ಎದೆಗುಂದಲಿಲ್ಲ. ಸಮಾಜದ ಒಳಿತಿಗಾಗಿ ತಮ್ಮ ವೈಯಕ್ತಿಕ ಬದುಕನ್ನೇ ಸಮರ್ಪಿಸಿಕೊಂಡ ಅವರ ಸೇವೆ ಇಂದಿಗೂ ಪ್ರೇರಣಾದಾಯಕವಾಗಿದೆ ಎಂದರು.ಕಾರಂಜಿಮಠದ ಪೂಜ್ಯ ಗುರುಸಿದ್ಧ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ಹಾನಗಲ್ ಕುಮಾರಸ್ವಾಮಿಗಳ ಜೀವನ ಮತ್ತು ಸಮಾಜಸೇವೆಯ ಆದರ್ಶಗಳನ್ನು ಇಂದಿನ ಪೀಳಿಗೆ ಅರಿತುಕೊಂಡು ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಸಮಾಜದ ಸಂಘಟನೆ, ಶಿಕ್ಷಣ ಮತ್ತು ಜಾಗೃತಿಗಾಗಿ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗುವುದು ಅವರ ಸ್ಮರಣೆಗೆ ಸಲ್ಲಿಸುವ ನಿಜವಾದ ಗೌರವವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಾಸಭೆಯ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ ಮಾತನಾಡಿ, ಹಾನಗಲ್ ಕುಮಾರಸ್ವಾಮಿಗಳು ಸಮಾಜವನ್ನು ಸಂಘಟಿಸುವುದರ ಜೊತೆಗೆ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ ದೂರದೃಷ್ಟಿಯ ನಾಯಕರು. ಅವರ
ಸಮಾಜಮುಖಿ ಚಿಂತನೆಗಳನ್ನು ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ಇಂದಿನ ಪೀಳಿಗೆಯ ಮೇಲಿದೆ ಎಂದು ಹೇಳಿದರು. ಪ್ರೇಮಾ ದೇಶನೂರ ವಚನ ಪ್ರಾರ್ಥನೆ ನೆರವೇರಿಸಿದರು. ವಿದ್ಯಾ ಗೌಡರ ಸ್ವಾಗತಿಸಿದರು. ಮಮತಾ ಪಾಟೀಲ ವಚನ ವಿಶ್ಲೇಷಣೆ ಮಾಡಿದರು. ಜ್ಯೋತಿ ಚರಾಟೆ ಅತಿಥಿಗಳನ್ನು ಪರಿಚಯಿಸಿದರು. ರಕ್ಷಾ ನೇಗಿನಹಾಳ ಕಾರ್ಯಕ್ರಮ ನಿರೂಪಿಸಿದರು. ನಂದಾ ಲೋಕನ್ನವರ ವಂದಿಸಿದರು. ಕಾರ್ಯಕ್ರಮದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಪದಾಧಿಕಾರಿಗಳು, ಸದಸ್ಯರು ಹಾಗೂ ಸಮಾಜದ ಗಣ್ಯರು ಉಪಸ್ಥಿತಿದರು.
              ****

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ಲ್ಯಾಬ್ ಕಾಮಗಾರಿಗೆ ಮೃಣಾಲ್ ಹೆಬ್ಬಾಳಕರ್ ಸೇರಿ ಗಣ್ಯರಿಂದ ಪೂಜೆ**ಶ್ರೀ ವರದ ಶಂಕರ ಪೂಜೆ ಮತ್ತು ಮಹಾಪ್ರಸಾದ**ರೈತರಿಂದ ಮತ್ತು ಬಿಜೆಪಿಯಿಂದ  ಲೋಡ್ ಶೆಡ್ಡಿಂಗ್ ವಿರೋಧಿಸಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ. ತನವ್ ಮೋಹನ್ ಗೆ ವರ್ಷದ ಕನ್ನಡಿಗ ಪ್ರಶಸ್ತಿರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಪಿ.ಟಿ. ಪರಮೇಶ್ವರ ನಾಯ್ಕ ಪ್ರವಾಸಸಮಾಜ ಸಂಘಟನೆಯಲ್ಲಿ ಹಾನಗಲ್ ಕುಮಾರಸ್ವಾಮಿಗಳ ಕೊಡುಗೆ ಅನನ್ಯ-ಪ್ರೊ ಮಿಥುನ ಅಂಕಲಿ ಅಭಿಮತಬಳ್ಳಾರಿ: ಕಂಪ್ಲಿ ಮತ್ತು ಕುಡುತಿನಿ ವ್ಯಾಪ್ತಿಯ 3 ಗ್ರಾಮಗಳಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ನಿಷೇಧ - ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಮಾದಕ ವ್ಯಸನಮುಕ್ತ ಸಮಾಜದಿಂದ ಮಾತ್ರ ಸದೃಢ ದೇಶ ನಿರ್ಮಾಣ ಸಾಧ್ಯ: ಡಾ. ವೀರೇಂದ್ರ ಕುಮಾರ್ ಕರೆಗುಣಾತ್ಮ ಶಿಕ್ಷಣ, ಒಳ್ಳೆಯ ಸಂಸ್ಕಾರ ನೀಡುವುದು ಶಿಕ್ಷಕರ ಆಧ್ಯ ಕರ್ತವ್ಯ: ಶಾಸಕ ಂiಶವಂತರಾಯಗೌಡ ಪಾಟೀಲಬರ ಪೀಡಿತ ತಾಲೂಕು ಘೋಷಣೆ ಶೇ.೨೦೦ ಖಚಿತ-ಶಾಸಕ ನಾಡಗೌಡ