Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಗೃಹಲಕ್ಷ್ಮಿ  ಸಂಘದ ಪ್ರಮಾಣ ಪತ್ರ ಹಸ್ತಾಂತರ*

ಬೆಂಗಳೂರು (ವಿಧಾನಸೌಧ):*  ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತ ನೋಂದಾಯಿತ ಪ್ರಮಾಣ ಪತ್ರವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರಿಗೆ ಸಹಕಾರ ಇಲಾಖೆಯ ಸಹಕಾರ ಸಂಘಗಳ ಅಪರ ನಿಬಂಧಕರಾದ ಲಕ್ಷ್ಮೀಪತಯ್ಯ ಹಸ್ತಾಂತರಿಸಿದರು.


ವಿಧಾನಸೌಧದ ಕಚೇರಿಯಲ್ಲಿ ಸಚಿವರನ್ನು ಭೇಟಿಯಾದ ಲಕ್ಷ್ಮೀಪತಯ್ಯ ಪ್ರಮಾಣಪತ್ರವನ್ನು ಹಸ್ತಾಂತರಿಸಿದರು.


* *ಸಚಿವರ ಕನಸಿನ ಯೋಜನೆ*

ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮೀ ಯೋಜನೆಯನ್ನು ಕಾರ್ಯರೂಪಕ್ಕೆ ತರುವಲ್ಲಿ ಪ್ರಮುಖ ಪಾತ್ರವಹಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು, ಇದೀಗ ಇನ್ನೊಂದು ಹೆಜ್ಜೆ ಮುಂದೆ ಹೋಗಿ ಗೃಹಲಕ್ಷ್ಮೀ ಯೋಜನೆಯ ಯಜಮಾನಿಯರಿಗಾಗಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಸ್ಥಾಪಿಸಿದ್ದಾರೆ.

 ನವೆಂಬರ್‌ 19 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅಧಿಕೃತ ಚಾಲನೆ ಸಿಗಲಿದೆ.


ಮಹಿಳೆಯರ ಸುರಕ್ಷತೆಗಾಗಿ ಅಕ್ಕಾಪಡೆಯನ್ನು ಸಜ್ಜುಗೊಳಿಸುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು, ಇದೀಗ ಮನೆಯ ಯಜಮಾನಿಯರ ಸಬಲೀಕರಣಕ್ಕಾಗಿ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಗೃಹಲಕ್ಷ್ಮೀ ಯೋಜನೆಗೆ ಮತ್ತೊಂದು ಸ್ವರೂಪ ತಂದಿದ್ದಾರೆ.

ಸುಮಾರು 1 ಕೋಟಿ 24 ಲಕ್ಷದ 12 ಸಾವಿರ ಫಲಾನುಭವಿಗಳು ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆಯುತ್ತಿದ್ದು, ಇದುವರೆಗೂ  52,416 ಕೋಟಿಗೂ ಅಧಿಕ ಮೊತ್ತವನ್ನು ಫಲಾನುಭವಿಗಳ ಖಾತೆಗೆ ಹಾಕಲಾಗಿದೆ. ಗೃಹಲಕ್ಷ್ಮೀ ಯೋಜನೆಯ ಹಣವನ್ನು ಮತ್ತೊಂದು ರೀತಿಯಲ್ಲಿ ತೊಡಗಿಸಿ ಆದಾಯ ಒದಗಿಸುವ ಸಲುವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರ ಕನಸಿನ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘವನ್ನು ಆರಂಭಿಸಲಾಗುತ್ತಿದೆ.


ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘದಲ್ಲಿ ಕಡಿಮೆ ಬಡ್ಡಿ ದರದಲ್ಲಿ 3 ಲಕ್ಷದವರೆಗೂ ಫಲಾನುಭವಿಗಳಿಗೆ ಸಾಲ ನೀಡಲಾಗುವುದು. ಇದರಿಂದ ಮಹಿಳೆಯರಿಗೆ ಮತ್ತಷ್ಟು ಆರ್ಥಿಕ ಶಕ್ತಿ ತುಂಬಿದಂತಾಗುತ್ತದೆ. ಮಹಿಳೆಯರ ಸುರಕ್ಷತೆ ಹಾಗೂ ಆರ್ಥಿಕವಾಗಿ ಸ್ವಾವಲಂಬನೆ ಮಾಡುವುದೇ ನನ್ನ ಹಾಗೂ ನಮ್ಮ ಸರ್ಕಾರದ ಮುಖ್ಯ ಗುರಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.‌


ಇದೇ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಲಕ್ಷ್ಮೀಪತಯ್ಯ ಅವರನ್ನು ಸನ್ಮಾನಿಸಲಾಯಿತು.


ಈ ವೇಳೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಾಮ್ಲಾ‌ ಇಕ್ಬಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ‌ ಮಹೇಶ್ ಬಾಬು, ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್.ವಿಶ್ವನಾಥ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಜಂಟಿ ನಿರ್ದೇಶಕರಾದ ಪುಷ್ಪ ರಾಯರ್, ನಟರಾಜ್, ಎಂ.ಜಿ.ಪಾಲಿ ಸೇರಿದಂತೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


"ಖಾಸಗಿ ಫೈನಾನ್ಸ್‌, ನ್ಯಾಷನಲ್‌ ಬ್ಯಾಂಕ್‌ಗಳಲ್ಲಿ ದುಬಾರಿ ಬಡ್ಡಿಗೆ ಸಾಲ ಪಡೆದು ಮಹಿಳೆಯರು ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿದ್ದಾರೆ. ಇದೀಗ ಗೃಹಲಕ್ಷ್ಮೀ ಹಣದಿಂದಲೇ ಬ್ಯಾಂಕ್‌ ಆರಂಭಿಸಿ ಮಹಿಳೆಯರಿಗೆ ಸಂಕಷ್ಟದಲ್ಲಿ ಸಾಲದ ಸೌಲಭ್ಯ ನೀಡಿ, ಅವರನ್ನು ಸ್ವಾವಲಂಬಿಗಳನ್ನಾಗಿ ಮಾಡುವುದೇ ನಮ್ಮ ಗುರಿʼ-ಸಚಿವೆ ಲಕ್ಷ್ಮೀ ಹೆಬ್ಬಾಳಕರ್.‌
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದತ್ತಿ ನಿಧಿ ಕಾರ್ಯಕ್ರಮ: ಬಸವ ಜಯಂತಿ ನಿಮಿತ್ತ ಕವಿಗೋಷ್ಠಿ ಬಸವಣ್ಣ ಶ್ರೇಷ್ಠ ವಚನಕಾರ: ಬಸವರಾಜ ಚೌಕಿಮಠಘಟಪ್ರಭಾ ಎಡದಂಡೆ ಕಾಲುವೆಗೆ ನೀರು ಬಿಡಲು ಆಗ್ರಹಿಸಿ ರೈತರ ಪ್ರತಿಭಟನೆಕಷ್ಟ, ನೋವು ಸಮರ್ಥವಾಗಿ ಎದುರಿಸಿ ಪ್ರತಿಯೊಬ್ಬರು ಸಾಧಕರಾಗಬೇಕು : ಡಾ.ಅಭಿನವ ಬ್ರಹ್ಮಾನಂದ ಸ್ವಾಮಿಜೀಬುವಿಯ ಬೆಳಕು ಬಸವಣ್ಣ ಕೃತಿ ಬಿಡುಗಡೆ"ಬಿಸಿಲಿನ ದೆಗೆಯಲ್ಲಿ ಬಾರದ ಶುದ್ಧ ಕುಡಿಯುವ ನೀರಿನ ಘಟಕ"ಬಳ್ಳಾರಿಯ  ಬಸವಣ್ಣನ ಪುತ್ಥಳಿಗೆ  ಬಣ್ಣಏಪ್ರಿಲ್ 24ಕ್ಕೆ ಕೊಪ್ಪಳದಲ್ಲಿ ನಟಸಾರ್ವಭೌಮ ಡಾ.ರಾಜ್ ಸಂಭ್ರಮ ಕಾರ್ಯಕ್ರಮ; ಪೂರ್ವಭಾವಿ ಸಿದ್ಧತಾ ಸಭೆ ಮೇರುನಟ ಡಾ.ರಾಜ್‌ಕುಮಾರ್ ಜನ್ಮ ದಿನಾಚರಣೆ ಸಿದ್ಧತೆಗೆ ಸೂಚನೆ’ಜೀವನ ದರ್ಶನ’ ಪ್ರವಚನ ಮಾಲಿಕೆಯಲ್ಲಿ ಒಪ್ಪತ್ತೇಶ್ವರ ಸ್ವಾಮಿಜಿ ನುಡಿ ದಾರ್ಶನಿಕ ಚಿಂತನೆಯಿಂದ ಬದುಕು ಸನ್ಮಾರ್ಗದೆಡೆಗೆ ದೇಸಿ ಮಲೆನಾಡು ಗಿಡ್ಡ ತಳಿ ಹಸುಗಳ ಸಂರಕ್ಷಣೆಗೆ ಡಾ. ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ಕರೆಜಿ.ಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಸೂಚನೆ ರಾಷ್ಟಿçÃಯ ಆರೋಗ್ಯ ಕಾರ್ಯಕ್ರಮಗಳ ಯಶಸ್ವಿಗೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ