Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರೋಟರಿ ಸಂಸ್ಥೆಯಿಂದ ಆಂಬ್ಯುಲೆನ್ಸ್‌ವಾಹನ ಹಸ್ತಾಂತರ

 

ಜಮಖಂಡಿ,19 : ನಗರದ ರಾಮತೀರ್ಥ ರೋಟರಿ ಸಂಸ್ಥೆಯ ವತಿಯಿಂದ 44 ಲಕ್ಷ ರೂ ಮೌಲ್ಯದ ಅತ್ಯಾಧುನಿಕ ಐಸಿಯು ಕಾರ್ಡಿಯಾಕ್‌ ಆಂಬ್ಯುಲೆನ್ಸ್‌ ವಾಹನವನ್ನು ನಗರದ ಸಿದ್ಧಿವಿನಾಯಕ ಆಸ್ಪತ್ರೆ ಹಾಗೂ ರಿಸರ್ಚ್‌ ಸೆಂಟರ್‌ಗೆ ಶನಿವಾರ ಸಂಜೆ ಹಸ್ತಾಂತರಿಸಲಾಯಿತು. ಆಸ್ಪತ್ರೆಯ ಆವರಣದಲ್ಲಿ ನಡೆದ ಸರಳ ಸಮಾರಂಭದಲ್ಲಿ 2024-25 ನೇ ಸಾಲಿನ ರೋಟರಿಯ ಜಿಲ್ಲಾ ಗವರ್ನರ ಶೈರದ್‌ ಪೈ ಹಾಗೂ ರೋಟರಿ ರಾಮತೀರ್ಧದ ಅಧ್ಯಕ್ಷ ಕಿರಣ ಜಾಲಿಹಾಳ ಅವರು ವಾಹನವನ್ನು ಆಸ್ಪತ್ರೆಯ ಆಡಳಿತ ಮಂಡಲಿಗೆ ಹಸ್ತಾಂತರಿಸಿದರು. ಜಿಲ್ಲಾ ಗವರ್ನರ ಶರದ್‌ ಪೈ ಮಾತನಾಡಿ ಗ್ರಾಮೀಣ ಪ್ರದೇಶದ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ರೋಟರಿ ಸಂಸ್ಥೆ ತುರ್ತು ಚಿಕಿತ್ಸಾ ವಾಹನವನ್ನು ವಿತರಿಸಿದೆ. ರೋಟರಿ ಸೇವಾ ಸಂಸ್ಥೆಯಾಗಿದ್ದು ಸಮಾಜ ಸೇವೆಗೆ ಅನೇಕ ಅನುಕೂಲತೆಗಳನ್ನು ಪ್ರತಿವರ್ಷ ಮಾಡಿ ಕೊಡುತ್ತದೆ ಎಂದು ತಿಳಿಸಿದರು. ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿಕಾರ್ಜುನ ಬಡಿಗೇರ ಮಾತನಾಡಿ ಸರ್ಕಾರ ದೊಂದಿಗೆ ಖಾಸಗಿ ಒಡೆತನದ ಆಸ್ಪತ್ರೆಗಳು ಹಾಗೂ ಸೇವಾ ಸಂಘಟನೆಗಳು ಕೈಜೋಡಿಸಿದಾಗ ಗ್ರಾಮಿಣ ಭಾಗದ ಜನರಿಗೆ ಸರಿಯಾದ ಸಮಯಕ್ಕೆ ಆರೋಗ್ಯ ಸೇವೆಗಳನ್ನು ಒದಗಿಸಬಹುದಾಗಿದೆ ಎಂದು ತಿಳಿಸಿದರು. ಕಿರಣ ಜಾಲಿಹಾಳ ಮಾತನಾಡಿ ತಮ್ಮ ಅಧಿಕಾರ ಅವಧಿಯಲ್ಲಿ ಸಮಾಜಕ್ಕೆ ಶಾಶ್ವತ ಯೋಜನೆ ರೂಪಿಸುವ ಉದ್ದೇಶ ದಿಂದ ಐಸಿಯು ಕಾರ್ಡಿಯಾಕ್‌ ಆಂಬ್ಯುಲೆನ್ಸ್‌ ಯೋಜನೆ ಕೈಗೆತ್ತಿ ಕೊಳ್ಳಲಾಗಿತ್ತು. ಸದಸ್ಯರ ಸಹಕಾರ ಹಾಗೂ ರೋಟರಿಯ ಬೆಂಬಲ ಹಾಗೂ ಸಾರ್ವಜನಿಕರ ಪ್ರೋತ್ಸಾಹ ದಿಂದ ಯೋಜನೆ ಯಶಸ್ವಿ ಯಾಗಿದೆ ಎಂದು ತಿಳಿಸಿದರು. ರೋಟರಿ ಅಧ್ಯಕ್ಷ ರಾಜಶೇಖರ ವಾರದ ಅವರು ಮಾತನಾಡಿ ಪ್ರಸಕ್ತ ಸಾಲಿನಲ್ಲಿ ಆರೋಗ್ಯ, ಶಿಕ್ಷಣ ಹಾಗೂ ಸಮಾಜ ಮುಖಿ ಕಾರ್ಯಕ್ರಮಗಳನ್ನು ಇನ್ನಷ್ಟು ವಿಸ್ತರಿಸಿ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು. ಜಿಲ್ಲಾ ಗವರ್ನರ ಅಶೋಕ ನಾಯಕ, ಸಹಾಯಕ ಗವರ್ನರ ನಾರಾಯಣ ಹೆರಕಲ್‌ ಮಾತನಾಡಿದರು. ಆರ್‌.ಪಿ.ನ್ಯಾಮಗೌಡ, ವೈದ್ಯರ ಸಂಘ, ಸೇರಿದಂತೆ ವಿವಿಧ ಸಂಸ್ಥೆಗಳ ಪದಾಧಿಕಾರಿಗಳು ಗಣ್ಯರು ಭಾಗವಹಿಸಿದ್ದರು. ಎಸ್‌.ವೈ.ಪಾಟೀಲ್‌ ಹಾಗೂ ಚಿದಾನಂದ ಸಿದ್ಧಾಪೂರ ಮಠ ಕಾರ್ಯಕ್ರಮ ನಿರೂಪಿಸಿದರು. ಮಲ್ಲಿಕಾರ್ಜುನ ಜಿರಲಿ ವಂದಿಸಿದರು.

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ