Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹರ್ಷ ಟ್ರೋಫಿ - 2026 ರ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ!

ಹಿರೇಬಾಗೇವಾಡಿ, ಮೇ 17: ಗ್ರಾಮೀಣ ಯುವ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಹಿರೇಬಾಗೇವಾಡಿ ಗ್ರಾಮದಲ್ಲಿ ಆಯೋಜಿಸಲಾದ ‘ಹರ್ಷ ಟ್ರೋಫಿ – 2026’ ಮೊದಲ ಆವೃತ್ತಿಯ ಕ್ರಿಕೆಟ್ ಪಂದ್ಯಾವಳಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಶನಿವಾರ ಚಾಲನೆ ನೀಡಿದರು.
ಗ್ರಾಮದ ಕ್ರೀಡಾಂಗಣದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗಗಳಲ್ಲಿ ಕ್ರೀಡಾ ಚಟುವಟಿಕೆಗಳು ಹೆಚ್ಚಾಗುತ್ತಿರುವುದು ಸಂತಸದ ಸಂಗತಿ. ಕ್ರೀಡೆ ಯುವಕರಲ್ಲಿ ಶಿಸ್ತು, ತಂಡಭಾವನೆ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುತ್ತದೆ. ಇಂತಹ ಪಂದ್ಯಾವಳಿಗಳು ಪ್ರತಿಭಾವಂತ ಆಟಗಾರರಿಗೆ ಉತ್ತಮ ವೇದಿಕೆಯಾಗುವುದರ ಜೊತೆಗೆ, ಯುವಕರನ್ನು ಸಕಾರಾತ್ಮಕ ಚಟುವಟಿಕೆಗಳತ್ತ ಸೆಳೆಯುತ್ತವೆ ಎಂದು ಹೇಳಿದರು.
 ಕ್ರೀಡೆಯೊಂದಿಗೆ ಶಿಕ್ಷಣ ಮತ್ತು ಸಾಮಾಜಿಕ ಜವಾಬ್ದಾರಿಗಳನ್ನೂ ಸಮಾನವಾಗಿ ಗಮನಿಸಬೇಕೆಂದು ಕರೆ ನೀಡಿದ ಅವರು, ಮುಂದಿನ ದಿನಗಳಲ್ಲಿ ಹರ್ಷ ಟ್ರೋಫಿಯನ್ನು ಇನ್ನಷ್ಟು ದೊಡ್ಡ ಮಟ್ಟದಲ್ಲಿ ಆಯೋಜಿಸಿ ಜಿಲ್ಲೆಯ ಮಟ್ಟದ ಕ್ರೀಡಾಕೂಟವನ್ನಾಗಿ ರೂಪಿಸುವ ವಿಶ್ವಾಸ ವ್ಯಕ್ತಪಡಿಸಿದರು.
ಪಂದ್ಯಾವಳಿಯ ಉದ್ಘಾಟನಾ ಸಂದರ್ಭದಲ್ಲಿ ಆಟಗಾರರನ್ನು ಪರಿಚಯಿಸಿಕೊಂಡ ಚನ್ನರಾಜ ಹಟ್ಟಿಹೊಳಿ ಅವರು, ಬ್ಯಾಟಿಂಗ್ ಮೂಲಕ ಪಂದ್ಯಾವಳಿಗೆ ಅಧಿಕೃತ ಚಾಲನೆ ನೀಡಿದರು. 
ವಿವಿಧ ಗ್ರಾಮಗಳಿಂದ ಆಗಮಿಸಿದ್ದ ತಂಡಗಳು ಉತ್ಸಾಹದಿಂದ ಪಂದ್ಯಗಳಲ್ಲಿ ಭಾಗವಹಿಸಿದ್ದವು. ಕ್ರೀಡಾಂಗಣದಲ್ಲಿ ಯುವಕರ ಸಂಭ್ರಮ, ಪ್ರೇಕ್ಷಕರ ಚೀರಾಟ ಮತ್ತು ಕ್ರಿಕೆಟ್ ಹಬ್ಬದ ವಾತಾವರಣ ಗಮನ ಸೆಳೆಯಿತು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಪ್ರಮುಖ ಮುಖಂಡರು, ಯುವ ಕಾರ್ಯಕರ್ತರು, ಕ್ರೀಡಾಭಿಮಾನಿಗಳು ಹಾಗೂ ವಿವಿಧ ತಂಡಗಳ ಆಟಗಾರರು ಉಪಸ್ಥಿತರಿದ್ದರು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಳೆ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನಾಚರಣೆ 6 ಜನ ದ್ವಿಚಕ್ರ ವಾಹನ ಕಳ್ಳರ ಬಂಧನಐನಾಪುರದಲ್ಲಿ ೧೧೦ ಕೆವಿ ಸ್ಟೇಶನ್ ನಿರ್ಮಾಣಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿಕೆಕ್ರೀಡಾ ಚಟುವಟಿಕೆಗಳಿಂದ ಜಿಲ್ಲೆಗೆ ಹೊಸ ಔಟ್‌ಲುಕ್ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅಭಿಮತಸಿಐಡಿ ತನಿಖೆಯಿಂದ,  ಶಿವಂ ಅಸೋಸಿಯೇಟ್ಸ್ ಹಗರಣ  ವಂಚನೆ ಸ್ಪಷ್ಟ ಮಾಹಿತಿ ; ಸಚಿವ ಸತೀಶ್‌ ಜಾರಕಿಹೊಳಿಕಾರ್ಯಕರ್ತರಲ್ಲಿ ವ್ಯಕ್ತಿತ್ವ, ಶಿಸ್ತು ರೂಪಿಸುವಲ್ಲಿ ಪ್ರಶಿಕ್ಷಣವರ್ಗ ಸಹಕಾರಿ :ಜಗದೀಶ ಶೆಟ್ಟರಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ ಹೊಸ ಪಠ್ಯ ಪುಸ್ತಕಗಳ ವಿತರಣೆಗೆ ಸಕಲ ಸಿದ್ಧತೆ - ಬಿಇಓ ಬಸಣ್ಣವರನೀಟ್‌ ರದ್ದತಿಗೆ ನೊಂದು ಬೆಂಗಳೂರಿಗ ಸೇರಿ 4 ವಿದ್ಯಾರ್ಥಿಗಳು ಸಾವಿಗೆ ಶರಣು!ಕೊಳವೆಬಾವಿ ದುರಂತ: ಮೊಮ್ಮಗನ ರಕ್ಷಣೆಗೆ ಹೋದ ಅಜ್ಜ ಸಾವುಭಾರಿ ಗಾತ್ರದ ಕಾಡುಕೋಣ ಸೆರೆಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ