Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಚ್ಛೇದನ ಪ್ರಕರಣ ಎದುರಿಸುತ್ತಿದ್ದ ದಂಪತಿಗಳನ್ನು ಒಂದು ಗೂಡಿಸಿದ ರಾಷ್ಟ್ರೀಯ ಲೋಕ ಅದಾಲತ

ರಾಮದುರ್ಗ: ರಾಮದುರ್ಗ ನ್ಯಾಯಾಲಯದಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತನಲ್ಲಿ ವಿಚ್ಛೇದನ ಪ್ರಕರಣದಲ್ಲಿ ದಂಪತಿಗಳನ್ನು ಒಂದಾಗಿಸುವ ಮೂಲಕ ಇಲ್ಲಿನ ನ್ಯಾಯಾಧೀಶರ ಪ್ರಯತ್ನ ಲೋಕದಾಲತ್ ಮಹತ್ವಕ್ಕೆ ಕಾರಣವಾಗಿದೆ.

ಹಲವಾರು ವರ್ಷಗಳಿಂದ ಪ್ರತ್ಯೇಕವಾಗಿದ್ದು, ವಿಚ್ಛೇದನ ಪ್ರಕರಣ ಎದುರಿಸುತ್ತಿದ್ದ  ಜೋಡಿ ದಂಪತಿಗಳನ್ನು ಒಂದು ಗೂಡಿಸುವ ಮೂಲಕ ರಾಮದುರ್ಗ  ನ್ಯಾಯಾಲಯ ಗಮನ ಸೆಳೆದಿದ್ದು, ಪ್ರತ್ಯೇಕವಾಗಿದ್ದ ಸತಿ-ಪತಿಗಳನ್ನು ಒಂದಾಗಿಸಿದ ಕೀರ್ತಿಗೆ ಸಾಕ್ಷಿಯಾಗಿದೆ.

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ, ರಾಮದುರ್ಗ ತಾಲೂಕಾ ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘದ ಸಹಯೋಗದೊಂದಿಗೆ ನಡೆದ  ರಾಷ್ಟ್ರೀಯ ಮೆಗಾ ಲೋಕ ಅದಾಲತ್ ನಲ್ಲಿ  ರಾಮದುರ್ಗ ನ್ಯಾಯಾಲಯದಲ್ಲಿ  ಗೌರವಾನ್ವಿತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ  ಹಾಗೂ ಹಿರಿಯ ದಿವಾಣಿ ನ್ಯಾಯಾಧೀಶರಾದ ಪುಷ್ಪಲತಾ ಕೆ, ಮತ್ತು ದಿವಾಣಿ ನ್ಯಾಯಾಧೀಶರಾದ ಭಾಗ್ಯಶ್ರೀ ಮಾದರ  ಇವರ  ಸಮ್ಮುಖದಲ್ಲಿ ರಾಜಿ ಸಂಧಾನದ ಮೂಲಕ ಒಂದಾದ ಪತಿ ಪತ್ನಿ ತಮ್ಮ ಮುಂದಿನ ಬಾಳ ಜೀವನಕ್ಕೆ ಕಾಲಿಡಲು ಪೂರಕವಾಯಿತು ಈ ಲೋಕ ಅದಾಲತ್. 
ಲೋಕ ಅದಾಲತನಲ್ಲಿ ಸಾಮಾನ್ಯವಾಗಿ ವಿಚ್ಛೇದನ ಅಥವಾ ಕೌಟುಂಬಿಕ ಕಲಹದ ಕಾರಣದಿಂದ ದೂರಾಗಿದ್ದ ಜೋಡಿಗಳಿಗೆ ನ್ಯಾಯಾಧೀಶರು, ವಕೀಲರು ಮತ್ತು ಸಂಧಾನಕಾರರು ಸೂಕ್ತ ಸಮಾಲೋಚನೆ  ನಡೆಸಿ, ಅವರ ಮನವೊಲಿಸುವ ಮೂಲಕ ಮತ್ತೆ ಒಂದಾಗಲು ದಾರಿ ಮಾಡಿಕೊಟ್ಟಿದ್ದಾರೆ.

 

Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
೨೦ ವರ್ಷಗಳ ಹಿಂದೆ ಆದ ರಸ್ತೆ * ರಸ್ತೆ ತುಂಬೆಲ್ಲಾ ತಗ್ಗುದಿನ್ನಿಗಳದ್ದೇ ದರ್ಬಾರುಅದ್ದೂರಿ ಜನ್ಮದಿನ ಆಚರಣೆ ಬೇಡ; ಸೇವಾ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಎ.ಎಸ್. ಪಾಟೀಲ ನಡಹಳ್ಳಿಶೈಕ್ಷಣಿಕ ಉತ್ಕೃಷ್ಟತೆ, ಸಂಶೋಧನೆ ಹಾಗೂ ನಾವೀನ್ಯತೆಗೆ ಒತ್ತು : ಡಾ. ಪ್ರಭಾಕರ ಕೋರೆ ಎಮ್ಮೆ ಹಾಲು ಪೂರೈಕೆಯಲ್ಲಿನ ಕುಸಿತ : ತೀವ್ರ ಕಳವಳ ವ್ಯಕ್ತಪಡಿಸಿದ ಬಾಲಚಂದ್ರ ಜಾರಕಿಹೊಳಿ ದಿ. 22-07-2026 ರಂದು ಶಾಸಕ ಬಾಬಾಸಾಹೇಬ ಪಾಟೀಲರ ಜನ್ಮದಿನದ ಪ್ರಯುಕ್ತ ರಕ್ತಧಾನ ಶಿಬಿರಆರೋಗ್ಯ ಕಾಳಜಿ ಮತ್ತು ಸುತ್ತ-ಮುತ್ತಲಿನ ಪರಿಸರ ಸ್ವಚ್ಛತಾ ಉಪನ್ಯಾಸದಲ್ಲಿ ಡಾ.ಜಗದೀಶ ಜಿಂಗಿ ಅಭಿಪ್ರಾಯಪ್ರತಿಭಾವಂತರಿಗೆ ಪುರಸ್ಕಾರ, ಬಸವ ಭವನ ನಿರ್ಮಾಣಕ್ಕೆ ವೇಗ: ವೀರಶೈವ ಲಿಂಗಾಯತ ಮಹಾಸಭಾ ನಿರ್ಧಾರಜಿಲ್ಲೆಯ ನರಗುಂದ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಬೆಳೆ ವೀಕ್ಷಣೆ ನಡೆಸಿದ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ಪಿಂಚಣಿ ಸೇರಿದಂತೆ ಯಾವುದೇ ನಿವೃತ್ತಿ ಸೌಲಭ್ಯ ಸಿಗುವ ಮುನ್ನವೇ ಮುಖ್ಯೋಪಾಧ್ಯಾಯರ ನಿಧನ: ಎಸ್.ವಿ. ಸಂಕನೂರರ ತೀವ್ರ ಸಂತಾಪವಿಜಯನಗರ ಜಿಲ್ಲೆಯಲ್ಲಿ ಬೀದಿ ಬದಿ ವ್ಯಾಪಾರಿಗಳ ಹಕ್ಕುಗಳ ರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ