Web Stories
Hasiru Kranti
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟಿಬೆಟ್‌ನಲ್ಲಿ ಸೋಮವಾರ ಬೆಳಗಿನ ಜಾವ 2.41ಕ್ಕೆ ಭಾರಿ ಭೂಕಂಪನ

ಟಿಬೆಟ್: ಚೀನಾ ಆಕ್ರಮಿತ ಟಿಬೆಟ್‌ನಲ್ಲಿ ಸೋಮವಾರ ಬೆಳಗಿನ ಜಾವ 2.41ಕ್ಕೆ ಭಾರಿ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪದ ತೀವ್ರತೆ 5.7ರಷ್ಟು ದಾಖಲಾಗಿದೆ. ಭೂಮಿ ನಡುಗುತ್ತಿದ್ದಂತೆ, ಭಯಭೀತರಾದ ಜನರು ಮನೆಗಳಿಂದ ಹೊರಗಡೆ ಓಡಿ ಬಂದಿದ್ಧಾರೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು (NCS) ಅದರ ತೀವ್ರತೆ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

ವರದಿಗಳ ಪ್ರಕಾರ, ಭೂಕಂಪವು ನೆಲದಿಂದ ಕೇವಲ 9 ಕಿ.ಮೀ. ಆಳದಲ್ಲಿ ಉಂಟಾಗಿದೆ. ಇದರಿಂದಾಗಿ ಪ್ರಬಲ ಕಂಪನಗಳು ಸಂಭವಿಸಿದ ಅನುಭವವಾಗಿದೆ. ಆದರೆ ಈ ಭೂಕಂಪದಿಂದ ಯಾವುದೇ ದೊಡ್ಡ ಹಾನಿಯಾದ ಬಗ್ಗೆ ಇಲ್ಲಿಯವರೆಗೆ ಯಾವುದೇ ವರದಿಗಳು ಆಗಿಲ್ಲ.

ಟಿಬೆಟ್‌ನಲ್ಲಿ ಆಗಾಗ್ಗೆ ಭೂಕಂಪನಗಳು ಸಂಭವಿಸುತ್ತಲೇ ಇರುತ್ತವೆ. ಅಲ್ಲದೆ, ಇತ್ತೀಚೆಗೆ ಕಳೆದ ಶುಕ್ರವಾರ ಚಿಲಿ ಮತ್ತು ಅರ್ಜೆಂಟೀನಾದಲ್ಲಿ 7.4ರ ತೀವ್ರತೆಯ ಭೂಕಂಪ ಸಂಭವಿಸಿತ್ತು. ಭೂಕಂಪದಿಂದಾಗಿ ಯಾವುದೇ ಜೀವ ಅಥವಾ ಆಸ್ತಿಪಾಸ್ತಿ ನಷ್ಟವಾಗಿರಲಿಲ್ಲ. ಮುಂಜಾಗೃತಾ ಕ್ರಮವಾಗಿ ಚಿಲಿಯ ಅಧಿಕಾರಿಗಳು ದೇಶದ ದಕ್ಷಿಣ ಭಾಗದಲ್ಲಿರುವ ಮೆಗೆಲ್ಲನ್ ಜಲಸಂಧಿಯ ಕರಾವಳಿ ಪ್ರದೇಶದ ಜನತೆಗೆ ಮುನ್ನೆಚ್ಚರಿಕೆ ನೀಡಿದ್ದರು.

ಮೇ 1ರಂದು ಪಾಕಿಸ್ತಾನದಲ್ಲಿಯೂ ಬಲವಾದ ಭೂಕಂಪನ ಸಂಭವಿಸಿತ್ತು. ಈ ಭೂಕಂಪದ ತೀವ್ರತೆ ರಿಕ್ಟರ್ ಮಾಪಕದಲ್ಲಿ 4.4ರಷ್ಟು ದಾಖಲಾಗಿತ್ತು. ಭೂಮಿ ಕಂಪಿಸಿದ ಹಿನ್ನೆಲೆಯಲ್ಲಿ ಭಯಭೀತರಾದ ಜನರು ತಮ್ಮ ಮನೆಗಳಿಂದ ಹೊರಗೆ ಓಡಿ ಬಂದಿದ್ದರು. ಈ ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನದ ಹಿಂದೂಕುಷ್ ಪರ್ವತಗಳಲ್ಲಿ ದಾಖಲಾಗಿತ್ತು. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರದ ಪ್ರಕಾರ, ಏಪ್ರಿಲ್ 30ರಂದು ರಾತ್ರಿ 9:58ಕ್ಕೆ ಕೂಡ ಭೂಕಂಪನ ಉಂಟಾಗಿತ್ತು.

Advertisement
Author
Publisher & Editor:- Sampat Muchalambi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂದು ನದಾಫ್-ಪಿಂಜಾರ ಸಂಘ ತಾಲೂಕ ಘಟಕದ ಕಚೇರಿ ಉದ್ಘಾಟನೆ ಟ್ರಕ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ : ಅಕ್ಕ-ತಮ್ಮ ದಾರುಣ ಸಾವುತಾಲೂಕಾ ಅಧಿಕಾರಿಗಳ ಸಾಮಾನ್ಯ ಸಭೆ; ರೈತರಿಗೆ ಬೀಜ, ಗೊಬ್ಬರ ಕೊರತೆಯಾಗದಂತೆ ನೋಡಿಕೊಳ್ಳಿ: ಬಸವರಾಜ್ ಅಡವಿಮಠ್ ಸೂಚನೆಕೊಪ್ಪಳ ಕಾರ್ಯನಿರತ ಪತ್ರಕರ್ತರ ಸಂಘದ ಸಭೆನೂತನ ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಅಭಿನಂದಿಸಿದ ಲಕ್ಷ್ಮೀ  ಹೆಬ್ಬಾಳಕರ.ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ ಅವರಿಗೆ ಸತ್ಕರಿಸಿದ ಯುವ ಮುಖಂಡ  ರಾಹುಲ  ಜಾರಕಿಹೊಳಿ.ಸಚಿವ ಸತೀಶ ಜಾರಕಿಹೊಳಿ, ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ ಬೇಟಿ ಪರಸ್ಪರ ಶುಭ ಕೋರಿಕೆಗ್ಲೋಬಲ್ ಕ್ಯಾಪೆಬಿಲಿಟಿ ಸೆಂಟರ್‌ಗಳ ಬೆಳವಣಿಗೆಗೆ ಉತ್ತೇಜನ*ಶರಣು ಕಾರ್ಯಾಲಯ ಆರಂಭಿಸುವ ಮೂಲಕ ಬಡವರ ಕಣ್ಣಿರು ಒರೆಸುವ ಕಾರ್ಯಕ್ಕೆ ಮುಂದಾಗಿರುವುದು ಶ್ಲಾಘನೀಯ : ಬಳಗಾನೂರು ಶ್ರೀಗಳು,,*