LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮುಂದಿನ 6 ದಿನಗಳ ಕಾಲ ಕರ್ನಾಟಕದಲ್ಲಿ ಭಾರಿ ಮಳೆ

ಬೆಂಗಳೂರು: ಕರ್ನಾಟಕದ 10 ಜಿಲ್ಲೆಗಳಲ್ಲಿ ಮುಂದಿನ 6 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ.

ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಕೋಲಾರ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ. ಕ್ಯಾಸಲ್​ರಾಕ್, ಮಂಕಿ, ಕೊಟ್ಟಿಗೆಹಾರ, ಲೋಂಡಾ, ಕುಮಟಾ, ಕದ್ರಾ, ಶಿರಾಲಿ, ಕೊಲ್ಲೂರು, ಗೋಕರ್ಣ, ಸೇಡಂ, ಆಗುಂಬೆಯಲ್ಲಿ ಮಳೆಯಾಗಿದೆ.

ಕಾರವಾರ, ಕೋಟ, ಉಡುಪಿ, ಧರ್ಮಸ್ಥಳ, ಅಂಕೋಲಾ, ಕುಂದಾಪುರ, ಧರ್ಮಸ್ಥಳ, ಚಿತ್ತಾಪುರ, ಚಿಂಚೋಳಿ, ಕಳಸ, ಮುಲ್ಕಿ, ಬೆಳ್ತಂಗಡಿ, ಪುತ್ತೂರು, ಕಲಬುರಗಿ, ಉಪ್ಪಿನಂಗಡಿ, ಸಿದ್ದಾಪುರ, ಕಾರ್ಕಳದಲ್ಲಿ ಮಳೆಯಾಗಿದೆ. ಯಲ್ಲಾಪುರ, ಅಡಕಿ, ಕಮಲಾಪುರ, ಕೊಪ್ಪ, ಹುಂಚದಕಟ್ಟೆ, ಬಾಳೆಹೊನ್ನೂರು, ಕಮ್ಮರಡಿ, ಹಳಿಯಾಳ, ಜೇವರ್ಗಿ, ಕೂಡಲಸಂಗಮ, ಇಂಡಿ, ಖಜೂರಿ, ಆನವಟ್ಟಿ, ಮೂರ್ನಾಡು, ನಾಪೋಕ್ಲು, ಸೋಮವಾರ ಪೇಟೆಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಭಾನುವಾರ ಹಲವೆಡೆ ಮಳೆಯಾಗಿದೆ. ಎಚ್​ಎಎಲ್​ನಲ್ಲಿ 28.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.8ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆಸ್ವಚ್ಛತೆಯೇ ಸೇವೆ-2026' ಅಭಿಯಾನ ಆರಂಭ: ಸಾರ್ವಜನಿಕರ ಸಹಭಾಗಿತ್ವಕ್ಕೆ ಕರೆವಿ.ಶ್ರೀ.ಕೃ. ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ: ಅಭಿವೃದ್ಧಿಗೆ ಎಲ್ಲರ ಸಹಭಾಗಿತ್ವ ಅಗತ್ಯಕರಕುಶಲತೆಯ ಜೊತೆ ಶಿಕ್ಷಣವೂ ಅನಿವಾರ್ಯ: ಲಿಡ್ಕರ್ ಅಧ್ಯಕ್ಷ ಮುಂಡರಗಿ ನಾಗರಾಜತಾಳಿಕೋಟೆ ತಾಲೂಕು ಕೂಡ ಶೀಘ್ರ ಬರಪೀಡಿತ ಪಟ್ಟಿಗೆ : ಶಾಸಕ ನಾಡಗೌಡತೇರದಾಳ ಹಾಗೂ ರಬಕವಿ /ಬನಹಟ್ಟಿ ತಾಲೂಕುಗಳು ಬರಗಾಲ ಪಟ್ಟಿಗೆ, ಸಿಎಂ ಡಿಕೆ ಶಿವಕುಮಾರ್ ಅವರಿಗೆ ಅಭಿನಂದನೆ.ರೋಗಿಗಳಿಗೆ ಹಾಲುಹಣ್ಣು ವಿತರಿಸಿ ಬಿಜೆಪಿ ಕಾರ್ಯಕರ್ತರಿಂದ ’ಸೇವಾ ಸಂಕಲ್ಪಹಕ್ಕುಪತ್ರ ಪಡೆದ ಫಲಾನುಭವಿಗಳಿಗೆ ಫಾರಂ-2 ಇ-ಖಾತಾ ಮಾಡಿಕೊಡಲು ಆಗ್ರಹಸೆ.20ರಂದು ಬಳ್ಳಾರಿಯಲ್ಲಿ ಹಿಂದೂ ಮಹಾ ಗಣಪತಿ ಭವ್ಯ ಶೋಭಾಯಾತ್ರೆಜನರ ಮನೆ ಬಾಗಿಲಿಗೆ ಸರ್ಕಾರದ ಸೇವೆ ಸಿಎಂ ಕನಸು; ಜನರಿಗೆ ತೊಂದರೆ ನೀಡಿದರೆ ಕ್ರಮ: ನಾರಾ ಭರತ್ ರೆಡ್ಡಿ